PSI ನೇಮಕಾತಿ ಹಗರಣಕ್ಕೆ ಮತ್ತೆ ಮರುಜೀವ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ತನಿಖೆಗಿಳಿದ ಕಾಂಗ್ರೆಸ್

PSI ನೇಮಕಾತಿ ಹಗರಣದಲ್ಲಿ ಅರೆಸ್ಟ್ ಆಗಿದ್ದ ಎಡಿಜಿಪಿ ಅಮೃತ್ ಪಾಲ್ ಅವರು ಇನ್ನೂ ಕೂಡ ಜೈಲಿನಲ್ಲೆ ಇದ್ದಾರೆ. ಆದ್ರೆ ಅಮೃತ್ ಪಾಲ್ ನಂತರ ಮುಂದಿನ ಹಂತಕ್ಕೆ ತನಿಖೆ ಹೋಗಿರಲಿಲ್ಲಾ. ಅಂದಿನ ಸರ್ಕಾರದ ಪ್ರಭಾವಿ ಸಚಿವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿತ್ತು.

PSI ನೇಮಕಾತಿ ಹಗರಣಕ್ಕೆ ಮತ್ತೆ ಮರುಜೀವ, ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ತನಿಖೆಗಿಳಿದ ಕಾಂಗ್ರೆಸ್
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on: May 25, 2023 | 8:16 AM

ಬೆಂಗಳೂರು: ಕಾಂಗ್ರೆಸ್ ಸರ್ಕಾರ(Congress Government) ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ(BJP) ವಿರುದ್ಧ ಪ್ರಬಲ ಅಸ್ತ್ರ ಪ್ರಯೋಗಿಸಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಾದ ಹಗರಣಗಳ ಬಗ್ಗೆ ತನಿಖೆ ನಡೆಸುವುದಾಗಿ ನೂತನ ಸಚಿವ ಎಂಬಿ ಪಾಟೀಲ್(MB Patil) ತಿಳಿಸಿದ್ದಾರೆ. ಹೀಗಾಗಿ PSI ನೇಮಕಾತಿ ಹಗರಣಕ್ಕೆ ಮತ್ತೆ ಮರುಜೀವ ಬಂದಂತಾಗಿದೆ(PSI Recruitment Scam). ಈಗಾಗಲೇ ಈ ಪ್ರಕರಣದಲ್ಲಿ 30ಕ್ಕೂ ಹೆಚ್ಚು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಆದ್ರೂ ತನಿಖೆ ನಡೆಸದೆ ಅನೇಕ ಅಂಶಗಳು ಉಳಿದುಕೊಂಡಿವೆ ಎಂದು ಈ ಹಿಂದೆಯೇ ಕಾಂಗ್ರೆಸ್ ನಾಯಕರು ಆರೋಪಿಸಿದ್ದರು. ಅದರ ಮುಂದುವರೆದ ಭಾಗವಾಗಿ ಪಿಎಸ್​ಐ ನೇಮಕಾತಿ ಹಗರಣ ಕೂಲಂಕಷವಾಗಿ ತನಿಖೆ ನಡೆಸುವಂತೆ ಸೂಚನೆ ನೀಡಲು ಕಾಂಗ್ರೆಸ್ ಸರ್ಕಾರ ಉತ್ಸುಕವಾಗಿದೆ.

ಈ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಎಡಿಜಿಪಿ ಅಮೃತ್ ಪಾಲ್ ಅವರು ಇನ್ನೂ ಕೂಡ ಜೈಲಿನಲ್ಲೆ ಇದ್ದಾರೆ. ಆದ್ರೆ ಅಮೃತ್ ಪಾಲ್ ನಂತರ ಮುಂದಿನ ಹಂತಕ್ಕೆ ತನಿಖೆ ಹೋಗಿರಲಿಲ್ಲಾ. ಅಂದಿನ ಸರ್ಕಾರದ ಪ್ರಭಾವಿ ಸಚಿವರ ಹೆಸರು ಈ ಪ್ರಕರಣದಲ್ಲಿ ಕೇಳಿ ಬಂದಿತ್ತು. ಕಾಂಗ್ರೆಸ್ ಓರ್ವ ಸಚಿವರಲ್ಲದೆ ಹಲವಾರು ಬಿಜೆಪಿ ನಾಯಕರ ವಿರುದ್ದ ಸಹ ಆರೋಪಗಳು ಕೇಳಿಬಂದಿದ್ದವು. ಈಗಾಗಲೇ ಎರಡು ಬಾರಿ ಚಾರ್ಜ್ ಶೀಟ್ ಸಲ್ಲಿಸಿ ತನಿಖೆ ಮುಂದುವರೆಸಲಾಗುತ್ತಿದೆ. ಈ ಸಮಯದಲ್ಲಿ ತನಿಖೆಗೆ ಮತ್ತಷ್ಟು ವೇಗ ನೀಡಲು ನೂತನ ಸರ್ಕಾರ ತಯಾರಿ ನಡೆಸಿದೆ‌.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ: ಎಂಬಿ ಪಾಟೀಲ್​​

ಇನ್ನು ವಿಧಾನಸೌಧ ಠಾಣೆಯಲ್ಲಿ ನಿನ್ನೆ ದಾಖಲಾದ ಎಫ್​ಐಆರ್​ನಲ್ಲಿ  ಮತ್ತೊಂದು ರಾಜ್ಯಮಟ್ಟದ ಹಗರಣ ಬಯಲಾಗುತ್ತಾ ಎನ್ನಲಾಗುತ್ತಿದೆ. ಪಿಎಸ್ ಐ ಹಾಗೂ ಶಿಕ್ಷಕರ ನೇಮಕಾತಿಯಂತೆ ರಾಜ್ಯದಲ್ಲಿ ಮತ್ತೊಂದು ಹಗರಣ ಬಯಲಾಗುವ ಸಾಧ್ಯತೆ ಇದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮ ಮಂಡಳಿಯ ಗಂಗಾ ಕಲ್ಯಾಣ ಯೋಜನೆ ಅಕ್ರಮ‌ ಸಂಬಂಧ  ವಿಧಾನಸೌಧ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಇದನ್ನ ಶೀಘ್ರವೇ ಸಿಐಡಿ ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.   ಈಗ ಕೇವಲ ಅಂಬೇಡ್ಕರ್ ಅಭಿವೃದ್ದಿ ನಿಗಮದಿಂದ ಮಾತ್ರ ದೂರು ಸಲ್ಲಿಸಲಾಗಿದೆ. ಆದ್ರೆ ಸಿಐಡಿಗೆ ವರ್ಗಾವಣೆಯಾದ ಬಳಿಕ ಇತರ ಅಭಿವೃದ್ಸಿ ನಿಗಮಗಳ ಗಂಗಾ ಕಲ್ಯಾಣ ಯೋಜನೆ ಅಕ್ರಮಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತೆ. ಸುಮಾರು 13 ಸಾವಿರ ಕೋಟಿ ಗಂಗಾ ಕಲ್ಯಾಣ ಯೋಜನೆಗೆ ವ್ಯಯಿಸಲಾಗಿದೆ ಎಂದು ಸದನಕ್ಕೆ ಅಂದಿನ ಸಿಎಂ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ