AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಯೋಜನೆ ಜಾರಿ ಒತ್ತಾಯಿಸಿ ಜನವರಿ 9ರಂದು ಪಾದಯಾತ್ರೆ : ಪ್ರಕಟಣೆ ಹೊರಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​

ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್​ ಮುಂದಾಳತ್ವದಲ್ಲಿ 2022ರ ಜನವರಿ 9ರಂದು ಬೆಳಗ್ಗೆ 9.30ಕ್ಕೆ ಪಾದಯಾತ್ರೆ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ಮೇಕೆದಾಟು ಯೋಜನೆ ಜಾರಿ ಒತ್ತಾಯಿಸಿ ಜನವರಿ 9ರಂದು ಪಾದಯಾತ್ರೆ : ಪ್ರಕಟಣೆ ಹೊರಡಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​
ಡಿಕೆ ಶಿವಕುಮಾರ್
TV9 Web
| Edited By: |

Updated on:Dec 22, 2021 | 6:22 PM

Share

ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆಯ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್​ ಮುಂದಾಳತ್ವದಲ್ಲಿ 2022ರ ಜನವರಿ 9ರಂದು ಬೆಳಗ್ಗೆ 9.30ಕ್ಕೆ ಪಾದಯಾತ್ರೆ ನಡೆಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ಮೇಕೆದಾಟು ಪ್ರದೇಶದಿಂದ ಫ್ರೀಡಂಪಾರ್ಕ್​ವರೆಗೆ ಪಾದಯಾತ್ರೆ ನಡೆಯಲಿದೆ. ಗ್ರಾಮೀಣ ಪ್ರದೇಶ, ನಗರ ಪ್ರದೇಶದಲ್ಲಿ ತಲಾ 5 ದಿನದಂತೆ ಪಾದಯಾತ್ರೆ ನಡೆಯಲಿದ್ದು ರಾಜ್ಯದ ಹಿತದೃಷ್ಟಿಯಿಂದ ನಡೆಯುತ್ತಿರುವ ಪಕ್ಷಾತೀತ ಹೋರಾಟಕ್ಕೆ ಎಲ್ಲ ವರ್ಗ, ಸಮುದಾಯದವರು ಬೆಂಬಲ ನೀಡಬೇಕು. ಹೋರಾಟದಲ್ಲಿ ಭಾಗವಹಿಸುವವರಿಗೆ ಉಚಿತ ಊಟ, ವಸತಿ ವ್ಯವಸ್ಥೆ ಇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜತೆಗೆ www.MekedatuNammaHakku.orgಲಿಂಕನ್ನು ಓಪನ್ ಮಾಡಿ ನೊಂದಾಯಿಸಿಕೊಂಡು ಹೋರಾಟದಲ್ಲಿ ಕೈ ಜೋಡಿಸಿ. ನೀವೂ ಸಹ ರಾಜ್ಯದ ನೀರಿನ ಹಕ್ಕಿಗಾಗಿ ನಡೆಯುತ್ತಿರುವ ಈ ಹೋರಾಟದ ಭಾಗವಾಗಿರಿ. ನೀರಿನ ಹಕ್ಕಿಗಾಗಿ ಮೊಳಗುತ್ತಿರುವ ಈ ಧ್ವನಿ, ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಕೇಳುವಷ್ಟು ಗಟ್ಟಿಯಾಗಿರಲಿ. ಮೇಕೆದಾಟು ಜಲಾಶಯ ನಿರ್ಮಾಣ ಯೋಜನೆಯನ್ನು ಶೀಘ್ರವೇ ಆರಂಭಿಸುವಂತೆ ಸರ್ಕಾರವನ್ನು ಒತ್ತಾಯಿಸಿ, ಮೇಕೆದಾಟು ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಿ ಎಂದು ಜನತೆಯಲ್ಲಿ ಮನವಿ ಮಾಡಿಕೊಂಡು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಕಟಣೆ ಹೊರಡಿಸಿದ್ದಾರೆ. ಪ್ರಕಟಣೆಯಲ್ಲಿ ​ ಮೇಕೆದಾಟು ಯೋಜನೆ ಅನುಷ್ಠಾನದಿಂದ ಆಗುವ ಅನುಕೂಲಗಳನ್ನು ವಿವರಿಸಿರುವ ಅವರು,

ಬೆಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಿಗೆ ಮುಂದಿನ 50-100 ವರ್ಷಗಳ ಅವಧಿಗೆ ಕುಡಿಯುವ ನೀರಿನ ಪೂರೈಕೆಯಾಗಲಿದೆ. ಯೋಜನೆಯ ಅನುಷ್ಠಾನದಿಂದ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ. ಬರಗಾಲದ ಸಂದರ್ಭದಲ್ಲೂ ತಮಿಳುನಾಡು ಸೇರಿದಂತೆ ನೆರೆ ರಾಜ್ಯಗಳಿಗೆ ಕಾಲಕ್ಕೆ ಸರಿಯಾಗಿ ನೀರು ಬಿಡುಗಡೆ ಸಾಧ್ಯವಾಗಲಿದೆ. ಕೆಆರ್‌ಎಸ್‌, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಅಣೆಕಟ್ಟುಗಳಲ್ಲಿ ನೀರು ಸಂಗ್ರಹಿಸುವ ಮೂಲಕ ಕಾವೇರಿ ಮಡಿಲಿನ ರೈತರಿಗೆ ಸಹಾಯಕವಾಗಲಿದೆ ಉಪಯೋಗಗಳ ಬಗ್ಗೆ ಎಂದು ತಿಳಿಸಿದ್ದಾರೆ.

ಈ ಐತಿಹಾಸಿಕ ಹೋರಾಟದಲ್ಲಿ ನಮ್ಮೊಂದಿಗೆ ಕೈಜೋಡಿಸಿರಿ. ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಪ್ರಮಾಣಪತ್ರ ನೀಡಲಾಗುವುದು. ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಊಟ, ವಸತಿ ವ್ಯವಸ್ಥೆ ಮಾಡಲಾಗುವುದು. ಪಾದಯಾತ್ರೆಯಲ್ಲಿ ನೋಂದಣಿಯಾಗಿ ಭಾಗವಹಿಸುವ ಎಲ್ಲರಿಗೂ ಟೀ ಶರ್ಟ್ ಹಾಗೂ ಟೋಪಿಯನ್ನು ನೀಡಲಾಗುವುದು ಎಂದು ಪ್ರಕಟಣೆ ಹೊರಡಿಸಿದ್ದಾರೆ.

Published On - 6:22 pm, Wed, 22 December 21

Follow Us
TV9 Web
TV9 Web

TV9 Kannada

Read More
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
‘ಆ ಹೊಗಳಿಕೆಯನ್ನು ಹೇಳೋಕೆ ಮುಜುಗರ ಆಗುತ್ತೆ’; ರಮಿಕಾಶ ಶಿವು
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು