ಕಾಂಗ್ರೆಸ್​​ ‘ಪಟ್ಟದಾಟ’ಕ್ಕೆ ತೆರೆ ಯಾವಾಗ?: ಸಾಧ್ಯಾಸಾಧ್ಯತೆ ಬಗ್ಗೆ ‘ಕೈ ಪಾಳಯದಲ್ಲೇ ಹೀಗೊಂದು ಚರ್ಚೆ

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸೀಟು ಹಂಚಿಕೆ ಮತ್ತು ಸಂಪುಟ ಪುನಾರಚನೆ ಕುರಿತಾದ 'ಪಟ್ಟದಾಟ' ತೀವ್ರಗೊಂಡಿದ್ದು, ಹೈಕಮಾಂಡ್ ಮಧ್ಯಸ್ಥಿಕೆಯಲ್ಲಿ ಮೇ ಅಂತ್ಯದೊಳಗೆ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆಯಿದೆ ಎನ್ನಲಾಗ್ತಿದೆ. ಆದರೆ ಮತ್ತೊಂದು ಲೆಕ್ಕಾಚಾರದ ಪ್ರಕಾರ ರಾಜ್ಯಸಭೆ ಮತ್ತು ವಿಧಾನ ಪರಿಷತ್​​ ಚುನಾವಣೆ ಮುಗಿಯುವ ವರೆಗೂ ಹೈಕಮಾಂಡ್​​ ಈ ಬಗ್ಗೆ ನಿರ್ಧರಿಸಲ್ಲ ಎಂಬ ಮಾತುಗಳೂ ಕೇಳಿಬಂದಿವೆ.

ಕಾಂಗ್ರೆಸ್​​ ಪಟ್ಟದಾಟಕ್ಕೆ ತೆರೆ ಯಾವಾಗ?: ಸಾಧ್ಯಾಸಾಧ್ಯತೆ ಬಗ್ಗೆ ಕೈ ಪಾಳಯದಲ್ಲೇ ಹೀಗೊಂದು ಚರ್ಚೆ
ಡಿಕೆ ಶಿವಕುಮಾರ್, ಸಿದ್ದರಾಮಯ್ಯ
Image Credit source: mathrubhumi.com
Edited By:

Updated on: May 21, 2026 | 2:36 PM

ಬೆಂಗಳೂರು, ಮೇ 21: ಅಧಿಕಾರ ಹಂಚಿಕೆ ವಿಚಾರ ಕಳೆದ ಕೆಲ ತಿಂಗಳುಗಳಿಂದ ರಾಜ್ಯದಲ್ಲಿ ಸದ್ದು ಮಾಡುತ್ತಲೇ ಬಂದಿದೆ. ಒಂದು ಕಡೆ ಸಿಎಂ ಸಿದ್ದರಾಮಯ್ಯ ಬಣ ಮತ್ತೊಂದೆಡೆ ಡಿ.ಕೆ. ಶಿವಕುಮಾರ್​​ ಬೆಂಬಲಿಗರು ಈ ಸಂಬಂಧ ಪರಸ್ಪರ ಹೇಳಿಕೆಗಳನ್ನು ನೀಡುತ್ತಲೇ ಬಂದಿದ್ದಾರೆ. ಪಟ್ಟದಾಟದ ವಿಚಾರ ಸದ್ಯ ಎಐಸಿಸಿ ಅಂಗಳದಲ್ಲಿದೆ. ಹೀಗಾಗಿ ವರಿಷ್ಠರ ತೀರ್ಮಾನವೇ ಅಂತಿಮ ಎಂಬ ಮಾತುಗಳು ಕಾಂಗ್ರೆಸ್​​ ಪಾಳಯದಿಂದ ಕೇಳಿಬರತೊಡಗಿದೆ. ಪಂಚರಾಜ್ಯ ಚುನಾವಣೆ ಮುಗಿದ ಹಿನ್ನೆಲೆ ಈಗ ವರಿಷ್ಠರು ಕರ್ನಾಟಕದ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಿದ್ದಾರೆ. ಹೀಗಾಗಿ ಮೇ ಅಂತ್ಯದ ವೇಳೆಗೆ ಈ ವಿಚಾರಕ್ಕೊಂದು ತೆರೆ ಬೀಳುವ ಬಗ್ಗೆ ಕಾಂಗ್ರೆಸ್​​ನಲ್ಲಿಯೇ ಚರ್ಚೆಗಳು ಶುರುವಾಗಿವೆ.

ಸಾಧ್ಯತೆ 1

ಮೇ ತಿಂಗಳ ಅಂತ್ಯಕ್ಕೆ ಸಿಎಂ-ಡಿಸಿಎಂಗೆ ದೆಹಲಿಗೆ ಹೈಕಮಾಂಡ್​​ ಬುಲಾವ್ ನೀಡಲಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜೊತೆಗೆ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್​​ ಹಾಗೂ ರಾಹುಲ್ ಗಾಂಧಿ ಚರ್ಚೆ ನಡೆಸಲಿದ್ದಾರೆ. ಸಿದ್ದರಾಮಯ್ಯ ಮುಂದುವರಿಕೆ ಅಥವಾ ಬದಲಾವಣೆ ಬಗ್ಗೆ ಮೊದಲು ಮಾತುಕತೆ ನಡಯಲಿದ್ದು, ಈ ವೇಳೆ ಸಚಿವ ಸಂಪುಟ ಪುನಾರಚನೆ ಸಂಬಂಧ ಸಿದ್ದರಾಮಯ್ಯ ನಾಯಕತ್ವ ಬದಲಾವಣೆ ವಿಷಯ ಕ್ಲೋಸ್ ಆದಂತೆ. ಆಗ ಈ ಮಾತುಕತೆ ಕೇವಲ ಸಂಪುಟ ಪುನಾರಚನೆಗೆ ಮಾತ್ರ ಸಂಬಂಧಿಸಲಿದೆ.

ಇದನ್ನೂ ಓದಿ: ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಆ ಒಂದು ಸಭೆ

ಸಾಧ್ಯತೆ 2

ಜೂನ್​​ 25ರ ಒಳಗಾಗಿ ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಕಾರಣ ಅಲ್ಲಿಯ ತನಕ ಬದಲಾವಣೆ ಚರ್ಚೆ ಮುಂದೂಡಿಕೆ ಸಾಧ್ಯತೆ ಇದೆ. ಅದಕ್ಕಿಂತ ಮುಂಚೆ ಸಂಪುಟ ಪುನಾರಚನೆ ಮಾಡಿದರೆ ರಾಜ್ಯಸಭೆ ಎಲೆಕ್ಷನ್​​ ಮೇಲೆ ಅದು ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಕ್ರಾಸ್ ವೋಟ್​​ ಆತಂಕದಿಂದ ಸಂಪುಟ ಪುನಾರಚನೆ ಕೂಡ ಜೂನ್ ಅಂತ್ಯದವರೆಗೆ ಮುಂದೂಡಿಕೆ ಆಗಬಹುದು. ರಾಜ್ಯ ಸಭೆ ಚುನಾವಣೆ ಮುಗಿದ ತಕ್ಷಣವೇ ಎಂಎಲ್ಸಿ ಚುನಾವಣೆ ನಡೆಯಲಿರುವ ಕಾರಣ ಶಾಸಕರ ಪಾತ್ರ ಇಲ್ಲಿ ಪ್ರಮುಖವಾಗಿದೆ.

ಸಾಧ್ಯತೆ 3

‌ರಾಹುಲ್ ಗಾಂಧಿ ಚರ್ಚೆ ವೇಳೆ ಸಿದ್ದರಾಮಯ್ಯ ಡಿಕೆಶಿ ಇಬ್ಬರೂ ದಾಳ ಉರುಳಿಸುವ ಸಾಧ್ಯತೆ ಇದೆ. ಸಿಎಂ ಬದಲಾವಣೆ ಆಗುವುದೇ ಆದರೆ ಸಿದ್ದರಾಮಯ್ಯ ಪರಮೇಶ್ವರ್ ಹೆಸರು ಸೂಚಿಸುವ ಸಾಧ್ಯತೆ ಇದೆ. ರೀಶಫಲ್ ಮಾತ್ರ ಎನ್ನುವುದೇ ಆದರೆ ಬದಲಾವಣೆ ಆಗೋ ತನಕ ಅದು ಬೇಡ ಎಂದು ಡಿಕೆಶಿ ಪಟ್ಟು ಹಿಡಿಯಬಹುದು. ರಾಹುಲ್​​ ಗಾಂಧಿ ಸಮ್ಮುಖದಲ್ಲಿಯೇ ಚರ್ಚೆ ನಡೆಯುವ ಕಾರಣ ತೀರ್ಮಾನ ಏನುಬೇಕಾದರೂ ಆಗಬಹುದು ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:26 am, Thu, 21 May 26

ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us