ಕಾಂಗ್ರೆಸ್ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ: ಬಿಜೆಪಿ ಶಾಸಕ ಡಾ ಸಿಎನ್ ಅಶ್ವತ್ಥ್ ನಾರಾಯಣ ಆರೋಪ
ವಿಪಕ್ಷದವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ರನ್ನು ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್ಗೆ ಭವಿಷ್ಯ ಇಲ್ಲ. ಕಾಂಗ್ರೆಸ್ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ ಆರೋಪ ಮಾಡಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 3: ವಿಪಕ್ಷದವರೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ರನ್ನು ಭೇಟಿ ಮಾಡಲೇಬೇಕಾಗುತ್ತದೆ. ಇಂಥ ಭೇಟಿಗಳಿಗೆಲ್ಲ ಬೇರೆ ಅರ್ಥ ಕಲ್ಪಿಸುವ ಅಗತ್ಯ ಇಲ್ಲ. ಆದರೆ ಕಾಂಗ್ರೆಸ್ಗೆ ಭವಿಷ್ಯ ಇಲ್ಲ. ಕಾಂಗ್ರೆಸ್ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ಬ್ಲಾಕ್‌ಮೇಲ್ ವಿಫಲ ಆಗುತ್ತೆ ಎಂದು ಬಿಜೆಪಿ ಶಾಸಕ ಡಾ.ಅಶ್ವತ್ಥ್ ನಾರಾಯಣ (Dr CN Ashwath Narayan) ಆರೋಪ ಮಾಡಿದ್ದಾರೆ. ಬಿಸಿ ಪಾಟೀಲ್, ರಾಜುಗೌಡರಿಂದ ಡಿಕೆ ಶಿವಕುಮಾರ್ ಭೇಟಿ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದವರಿದ್ದಾರೆ. ರಾಜಕೀಯದಲ್ಲಿ ಒಬ್ಬರಿಗೊಬ್ಬರು ಪರಿಚಯವಿದ್ದೇವೆ, ಗೆಳೆಯರಿದ್ದೇವೆ ಎಂದು ಹೇಳಿದರು.
ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಅಜ್ಞಾನದಿಂದ ಕೂಡಿದೆ: ಅಶ್ವತ್ಥ್ ನಾರಾಯಣ
ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ತಮಿಳುನಾಡು ಸಚಿವ ಉದಯನಿಧಿಯಿಂದ ದುರಹಂಕಾರದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ಮಾಡಿದರು. ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ಅಜ್ಞಾನದಿಂದ ಕೂಡಿದೆ ಎಂದರು.
ಇದನ್ನೂ ಓದಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರ ಅಸಮಾಧಾನ ಸ್ಫೋಟ: ನಾಯಕತ್ವ, ಉಸ್ತುವಾರಿ ಬದಲಾವಣೆಗೆ ಪಟ್ಟು
ಪಕ್ಷದಿಂದ ಉದಯನಿಧಿ ಸ್ಟಾಲಿನ್ ಉಚ್ಚಾಟನೆ ಮಾಡಬೇಕು. ಸಚಿವ ಉದಯನಿಧಿ ಸ್ಟಾಲಿನ್ ದುರಹಂಕಾರದ ಹೇಳಿಕೆ ಹಿಂಪಡೆಯಲಿ. ಉದಯನಿಧಿ ಸ್ಟಾಲಿನ್ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಶಾಸಕ ಡಾ.ಅಶ್ವತ್ಥ್ ನಾರಾಯಣ ಆಗ್ರಹಿಸಿದ್ದಾರೆ.
ಡಾ.ಅಶ್ವತ್ಥ್ ನಾರಾಯಣ ಬ್ಲಾಕ್‌ಮೇಲ್ ಆರೋಪಕ್ಕೆ ಎಂಬಿಪಿ ತಿರುಗೇಟು
ಡಾ.ಅಶ್ವತ್ಥ್ ನಾರಾಯಣ ಬ್ಲಾಕ್‌ಮೇಲ್ ಆರೋಪಕ್ಕೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯಿಸಿದ್ದು, ಬಿಜೆಪಿಯವರು ಬ್ಲಾಕ್ಮೇಲ್ಗೆ ಒಳಗಾಗುವಂಥ ಕೆಲಸ ಮಾಡಿದ್ದಾರೆ ಅಂತಾಯ್ತಲ್ಲ ಎಂದು ತಿರುಗೇಟು ನೀಡಿದ್ದಾರೆ. ಅದೇನು ಅಂತ ಬಿಜೆಪಿ ನಾಯಕರೇ ಸ್ಪಷ್ಟಪಡಿಸಲಿ. ಯಾವ ತರಹದ ಬ್ಲಾಕ್‌ಮೇಲ್ ನಮಗಂತೂ ಗೊತ್ತಿಲ್ಲ, ಅವರೇ ಸ್ಪಷ್ಟಪಡಿಸಲಿ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೆ.8 ರಂದು ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ
ಕೇವಲ ಲಿಂಗಾಯತರಷ್ಟೇ ಅಲ್ಲ, ಎಲ್ಲರೂ ಕಾಂಗ್ರೆಸ್ಗೆ ಬರುತ್ತಿದ್ದಾರೆ. ಎಲ್ಲ ಸಮುದಾಯಗಳ ನಾಯಕರು ಕೂಡ ಕಾಂಗ್ರೆಸ್ಗೆ ಬರುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ನೋಡಲಿಲ್ವಾ ಎಂದು ಪ್ರಶ್ನಿಸಿದರು. ವಿಧಾನಸಭೆ ಚುನಾವಣೆಯಲ್ಲಿ 36 ಲಿಂಗಾಯತ ನಾಯಕರು ಗೆದ್ದಿದ್ದಾರೆ. ಬಿಜೆಪಿಯಲ್ಲಿ ಕೇವಲ 17 ಲಿಂಗಾಯತ ಶಾಸಕರು ಗೆದ್ದಿದ್ದಾರೆ. ಆಗಲೇ ಕಾಂಗ್ರೆಸ್ಗೆ ಲಿಂಗಾಯತರು ಶಿಫ್ಟ್ ಆಗಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.