ಅರೆಸ್ಟ್ ಬೇಕಾದ್ರೂ ಮಾಡಲಿ, ಪಾದಯಾತ್ರೆ ಮಾಡಿಯೇ ಮಾಡ್ತೀವಿ: ಡಿಕೆ ಶಿವಕುಮಾರ್

ಪಾದಯಾತ್ರೆಗೆ ಅಂತಿಮ ಹಂತದ ಸಿದ್ಧತೆ ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿದ್ದರಾಮಯ್ಯ ಸೇರಿದಂತೆ ಹಲವು ಹಿರಿಯ ನಾಯಕರು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಅರೆಸ್ಟ್ ಬೇಕಾದ್ರೂ ಮಾಡಲಿ, ಪಾದಯಾತ್ರೆ ಮಾಡಿಯೇ ಮಾಡ್ತೀವಿ: ಡಿಕೆ ಶಿವಕುಮಾರ್
ಕಾಂಗ್ರೆಸ್ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 04, 2022 | 8:59 PM

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಹಿರಿಯ ಕಾಂಗ್ರೆಸ್ ನಾಯಕರ ಸಭೆ ಆರಂಭವಾಗಿದ್ದು, ಮೇಕೆದಾಟು ಯೋಜನೆ ಪಾದಯಾತ್ರೆಯ ಭವಿಷ್ಯದ ಬಗ್ಗೆ ಸುದೀರ್ಘ ಚರ್ಚೆ ನಡೆಯುತ್ತಿದೆ. ರಾಜ್ಯ ಸರ್ಕಾರವು ಕೊರೊನಾ ನಿಯಂತ್ರಣಕೆಂದು ಹೊಸ ನಿಯಮಗಳನ್ನು ಜಾರಿ ಮಾಡಿದರೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸಭೆಯಲ್ಲಿ ನಾಯಕರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಪಾದಯಾತ್ರೆಗೆ ಅಂತಿಮ ಹಂತದ ಸಿದ್ಧತೆ ಮತ್ತು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಿದ್ದರಾಮಯ್ಯ ಸೇರಿದಂತೆ ಹಲವು ಹಿರಿಯ ನಾಯಕರು ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಾದಯಾತ್ರೆ ಕುರಿತು ಹೇಳಿಕೆ ನೀಡಿದ್ದ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರ ಏನು ಮಾಡಿದರೂ ನಾವು ಪಾದಯಾತ್ರೆ ನಿಲ್ಲಿಸುವುದಿಲ್ಲ. ಪ್ರಕರಣ ಬೇಕಾದರೂ ದಾಖಲಿಸಲಿ, ಅರೆಸ್ಟ್ ಬೇಕಾದರೂ ಮಾಡಲಿ. ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ನಡೆಸಿಯೇ ತೀರುತ್ತೇವೆ ಎಂದು ಘೋಷಿಸಿದರು. ಬಿಜೆಪಿಯವರು ಜನಾಶೀರ್ವಾದ ಯಾತ್ರೆ ಮಾಡಬಹುದು, ನಾವು ನೀರಿಗಾಗಿ ಪಾದಯಾತ್ರೆ ಮಾಡಬಾರದಾ ಎಂದು ಪ್ರಶ್ನಿಸಿದರು.

ಬೆಳಗ್ಗೆಯಿಂದ ಪಾದಯಾತ್ರೆ ಕುರಿತು ಚರ್ಚೆ ಮಾಡಿದ್ದೇವೆ. 100 ವೈದ್ಯರು ಮತ್ತು 10 ಆಂಬುಲೆನ್ಸ್​ಗಳನ್ನು ಸಿದ್ಧಪಡಿಸಿಕೊಂಡಿದ್ದೇವೆ. ಸಂಪೂರ್ಣ ನಿಯಮ ಪಾಲನೆಗೆ ಮುಂದಾಗಿದ್ದೇವೆ. ರಾಜ್ಯದ ಎಲ್ಲಾ ಕಡೆಯ ಜನರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಪಾದಯಾತ್ರೆಯ ಎರಡನೇ ದಿನ ಮೈಸೂರು ಜಿಲ್ಲೆಯವರು, 5ನೇ ದಿನ ಮಂಡ್ಯ, ಹಾಸನದವರು ನಂತರ ತುಮಕೂರಿನವರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಜನವರಿ 19ರವರೆಗೆ ಈ ಪಾದಯಾತ್ರೆ ನಡೆಯಲಿದೆ. ಈವರೆಗೆ 1800 ಜನರು ಪಾದಯಾತ್ರೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದರು.

ಡಿಕೆಶಿ ಕುಟುಂಬದವರು ಕುತ್ತಿಗೆ ಕೊಯ್ಯುವ ಕುತಂತ್ರ ರಾಜಕಾರಣ ಮಾಡುತ್ತಾರೆ ಎನ್ನುವ ಅಶ್ವತ್ ನಾರಾಯಣ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಉತ್ತರ ಕೊಡಲು ಮತ್ತೊಂದು ಸಮಯ ಬರುತ್ತದೆ. ಆಗ ಹೇಳ್ತೀನಿ. ಅವರೂ ನಮ್ಮ ಬ್ರದರ್ ತಾನೆ. ಅವರು ಅಶ್ವತ್ಥ ನಾರಾಯಣ ಅಣ್ಣ ಎಂದು ವ್ಯಂಗ್ಯವಾಡಿದರು. ಎಂತೆಂಥವರ ವಿರುದ್ಧ ರಾಜಕಾರಣ ಮಾಡಿದ್ದೇನೆ. ಸಮಯ ಬಂದಾಗ ಮಾತಾಡ್ತೀನಿ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮಾತನಾಡಿ, ಹಿರಿಯ ನಾಯಕರ ಜೊತೆ ಸಭೆ ನಡೆಯುತ್ತಿದೆ. ಮೇಕೆದಾಟು ಪಾದಯಾತ್ರೆ ಕುರಿತಂತೆ ಸುದೀರ್ಘ ಚರ್ಚೆ ನಡೆಯಿತು. ಕರ್ನಾಟಕದ ಬಗ್ಗೆ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತಾಳಿದೆ. ಮೇಕೆದಾಟು, ಮಹದಾಯಿ ಸೇರಿದಂತೆ ಹಲವು ಯೋಜನೆಗಳಲ್ಲಿ ಇದೇ ರೀತಿಯ ತಾರತಮ್ಯ ಧೋರಣೆ ಅನುಸರಿಸಲಾಗುತ್ತಿದೆ. ಈ ಅನ್ಯಾಯದ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಕೋವಿಡ್ ಸಂದರ್ಭದಲ್ಲಿಯೇ ಉತ್ತರ ಪ್ರದೇಶಗಳಲ್ಲಿ ಹಲವು ಸಮಾವೇಶಗಳು ನಡೆದಿವೆ. ಅಲ್ಲಿಗೊಂದು-ಇಲ್ಲಿಗೊಂದು ನಿಯಮ ಸರಿಯೇ ಎಂದು ಕೇಳಿದರು.

ಇದನ್ನೂ ಓದಿ: HD Kumaraswamy: ಮೇಕೆದಾಟು ಪಾದಯಾತ್ರೆ ನಾವು ಪ್ಲಾನ್‌ ಮಾಡಿದ್ದನ್ನೇ ಅವರು ಶುರು ಮಾಡಕೊಂಡ್ರು -ಹೆಚ್‌ಡಿ ಕುಮಾರಸ್ವಾಮಿ ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಪ್ರಚಾರ ವಾಹನಗಳಿಗೆ ಚಾಲನೆ ನೀಡಿದ ಡಿ ಕೆ ಶಿವಕುಮಾರ್

Published On - 8:58 pm, Tue, 4 January 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್