ಬಮೂಲ್​ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್​ ಆಯ್ಕೆ

ಬೆಂಗಳೂರು ಹಾಲು ಒಕ್ಕೂಟ (ಬಮೂಲ್)ದ ನೂತನ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ ಆಯ್ಕೆ ಆಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಸೋತ ಬಳಿಕ ವಿಶ್ರಾಂತಿಯಲ್ಲಿದ್ದ ಡಿ.ಕೆ.ಸುರೇಶ್​ ಇದೀಗ ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿದ್ದಾರೆ. ಡಿ.ಕೆ.ಸುರೇಶ್ ಆಯ್ಕೆ ಹಿನ್ನೆಲೆ ಬಮೂಲ್ ಕಚೇರಿ ಬಳಿ ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು.

ಬಮೂಲ್​ ನೂತನ ಅಧ್ಯಕ್ಷರಾಗಿ ಡಿಕೆ ಸುರೇಶ್​ ಆಯ್ಕೆ
ಡಿ.ಕೆ.ಸುರೇಶ್
Updated By: ಗಂಗಾಧರ​ ಬ. ಸಾಬೋಜಿ

Updated on: Jun 19, 2025 | 3:04 PM

ಬೆಂಗಳೂರು, ಜೂನ್​ 19: ಬೆಂಗಳೂರು ಹಾಲು ಒಕ್ಕೂಟದ (BAMUL) ನೂತನ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ (DK Suresh) ಆಯ್ಕೆ ಆಗಿದ್ದಾರೆ. ಒಕ್ಕೂಟದ ಸದಸ್ಯರು ಹಾಗೂ ಚುನಾಯಿತರಿಂದ ಆಯ್ಕೆ ಮಾಡಲಾಗಿದ್ದು, ಬೆಂಬಲಿಗರು ಸಿಹಿ ಹಂಚಿ ಸಂಭ್ರಮಿಸಿದರು. 2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋತ ಬಳಿಕ ಡಿಕೆ ಸುರೇಶ್ ರಾಜಕೀಯವಾಗಿ ಹಿನ್ನಡೆ ಅನುಭವಿಸಿದ್ದರು. ಬಳಿಕ ವಿಶಾಂತ್ರಿ ಪಡೆದಿದ್ದರು, ಇದೀಗ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ.

ಬಮೂಲ್​ ನೂತನ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದ್ದಿಷ್ಟು

ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಡಿ.ಕೆ.ಸುರೇಶ್ ಪ್ರತಿಕ್ರಿಯಿಸಿದ್ದು, ರೈತರು, ಸೊಸೈಟಿಯವರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ. ರೈತರು ನನ್ನ ಮೇಲಿಟ್ಟಿರುವ ಭರವಸೆಯನ್ನ ಉಳಿಸಿಕೊಳ್ಳುತ್ತೇನೆ. ಅಧ್ಯಕ್ಷ ಸ್ಥಾನದಲ್ಲಿ ರೈತರಿಗೆ ಅನುಕೂಲ ಮಾಡಿಕೊಡುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಡಿಸಿ ಕಚೇರಿಗೆ ಸಚಿವ ಕೃಷ್ಣಭೈರೇಗೌಡ ದಿಢೀರ್ ಭೇಟಿ: ಅಧಿಕಾರಿಗಳು, ಸಿಬ್ಬಂದಿಗೆ ಕ್ಲಾಸ್

ಇದನ್ನೂ ಓದಿ
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭೂಕಬಳಿಕೆ ಆರೋಪ: ಹೆಚ್​ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್
11 ದಿನಗಳ ದಸರಾ ಅಪಶಕುನವಾ? ಡಾ. ಶೆಲ್ವ ಪಿಳೈ ಅಯ್ಯಂಗಾರ್ ವಿವರಣೆ ಇಲ್ಲಿದೆ
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?

ಹೈನುಗಾರಿಕೆ ಅಭಿವೃದ್ಧಿಗೆ ನಾನು ಹೆಚ್ಚಿನ ಗಮನ ಕೊಡುತ್ತೇನೆ. ಸರ್ಕಾರದ ಜೊತೆ ಚರ್ಚಿಸಿ ರೈತರಿಗೆ ಅನುಕೂಲ ಮಾಡುತ್ತೇನೆ. ನನ್ನ ಆಯ್ಕೆ ಮಾಡಿರುವ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ.

ಒಟ್ಟು 14 ನಿರ್ದೇಶಕರನ್ನ ಒಳಗೊಂಡಿರೋ ಬಮೂಲ್​, 11 ಜನ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಿದ್ದಾರೆ. ಈಗಾಗಲೇ ಡಿಕೆ ಸುರೇಶ್ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಇದೀಗ ನಿರ್ದೇಶಕ ಸ್ಥಾನದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದರು. ಹೀಗಾಗಿ ಬೆಂಗಳೂರಿನ ಡೇರಿ ವೃತ್ತದಲ್ಲಿರುವ ಕಚೇರಿಯಲ್ಲಿ  ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು.

ಇದನ್ನೂ ಓದಿ: Mysuru Dasara: 11 ದಿನಗಳ ದಸರಾ ಆಚರಣೆ ಅಪಶಕುನವಾ? ಡಾ. ಶೆಲ್ವ ಪಿಳೈ ಅಯ್ಯಂಗಾರ್ ವಿವರಣೆ ಇಲ್ಲಿದೆ

ಮೇ 25 ರಂದು ಬಮೂಲ್ ನಿರ್ದೇಶಕರ ಚುನಾವಣೆ ನಡೆದಿತ್ತು. ಬಮೂಲ್​ನಲ್ಲಿ ಕಾಂಗ್ರೆಸ್ ಹೆಚ್ಚು ನಿರ್ದೇಶಕ ಸ್ಥಾನ ಹೊಂದಿದೆ. ಈ ನಿಟ್ಟಿನಲ್ಲಿ ಬಹುತೇಕ ಡಿಕೆ ಸುರೇಶ್ ಬಮೂಲ್ ಅಧ್ಯಕ್ಷ ಸ್ಥಾನ ಫಿಕ್ಸ್ ಎನ್ನುವಂತಾಗಿತ್ತು. ಇದೀಗ ಅವರು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಆಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.