ಅನುದಾನ ತಾರತಮ್ಯ ವಿರೋಧಿಸಿ ಸಿಎಂ ಕಚೇರಿ ಮುಂದೆ ಕಾಂಗ್ರೆಸ್‌ನಿಂದ ಧರಣಿ: ರಾಮಲಿಂಗಾರೆಡ್ಡಿ ಹೇಳಿಕೆ
ಬಿಟಿಎಂ ಲೇಔಟ್, ಜಯನಗರ ಕ್ಷೇತ್ರಕ್ಕೆ ಅನುದಾನ ನೀಡಿಲ್ಲ. ಒಂದೇ ಒಂದು ರೂಪಾಯಿ ಅನುದಾನವನ್ನು ನೀಡಿಲ್ಲ. ಯಾವ ಕಾರಣದಿಂದ ಅನುದಾನ ಬಿಡುಗಡೆ ಮಾಡಿಲ್ಲವೆಂದು ರಾಜ್ಯ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರು: ಅನುದಾನ ತಾರತಮ್ಯ ವಿರೋಧಿಸಿ ಕಾಂಗ್ರೆಸ್‌ನಿಂದ ಧರಣಿ ನಡೆಯಲಿದೆ. ನಮ್ಮ ಕ್ಷೇತ್ರಕ್ಕೆ ಒಂದೇ ಒಂದು ರೂಪಾಯಿಯೂ ಕೊಟ್ಟಿಲ್ಲ. ಅನುದಾನ ತಾರತಮ್ಯ ಖಂಡಿಸಿ ಪ್ರತಿಭಟನೆ ಮಾಡುತ್ತೇವೆ. ಜನವರಿ 12 ರಂದು ಸಿಎಂ ಬಸವರಾಜ ಬೊಮ್ಮಾಯಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿಕೆ ನೀಡಿದ್ದಾರೆ. ಅನುದಾನ ಹಂಚಿಕೆಯಲ್ಲಿ ಭಾರಿ ತಾರತಮ್ಯ ಮಾಡಿದ್ದಾರೆ ಎಂದು ಕರ್ನಾಟಕ ರಾಜ್ಯ ಸರ್ಕಾರದ ವಿರುದ್ಧ ರಾಮಲಿಂಗಾರೆಡ್ಡಿ ಆರೋಪ ಮಾಡಿದ್ದಾರೆ.
ಕಾಂಗ್ರೆಸ್‌ನ 9 ಶಾಸಕರ ಕ್ಷೇತ್ರಗಳಿಗೆ ₹248 ಕೋಟಿ ಅನುದಾನ ನೀಡಲಾಗಿದೆ. ಬಿಜೆಪಿಯ 15 ಶಾಸಕರ ಕ್ಷೇತ್ರಗಳಿಗೆ ₹1,100 ಕೋಟಿ ಅನುದಾನ ನೀಡಿದ್ದಾರೆ. ಜೆಡಿಎಸ್ ಶಾಸಕರ ಕ್ಷೇತ್ರಗಳಿಗೆ ₹125 ಕೋಟಿ ಅನುದಾನ ನೀಡಿದ್ದಾರೆ. ಬಿಟಿಎಂ ಲೇಔಟ್, ಜಯನಗರ ಕ್ಷೇತ್ರಕ್ಕೆ ಅನುದಾನ ನೀಡಿಲ್ಲ. ಒಂದೇ ಒಂದು ರೂಪಾಯಿ ಅನುದಾನವನ್ನು ನೀಡಿಲ್ಲ. ಯಾವ ಕಾರಣದಿಂದ ಅನುದಾನ ಬಿಡುಗಡೆ ಮಾಡಿಲ್ಲವೆಂದು ರಾಜ್ಯ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಪ್ರಶ್ನೆ ಮಾಡಿದ್ದಾರೆ.
ಮೇಕೆದಾಟು ಪಾದಯಾತ್ರೆ ತಡೆಯಲು ಟಫ್ ರೂಲ್ಸ್ ಜಾರಿಮಾಡಿದ್ದಾರೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ನಮ್ಮ ಪಾದಯಾತ್ರೆ ತಡೆಯಲು ಟಫ್ ರೂಲ್ಸ್ ಜಾರಿಮಾಡಿದ್ದಾರೆ. ಸರ್ಕಾರ ಸ್ಪಷ್ಟವಾಗಿ ನಿರ್ದೇಶನ ನೀಡಿದರೆ ಅನುಸರಿಸುತ್ತೇವೆ. ಸರ್ಕಾರದ ಒಬ್ಬೊಬ್ಬರು ಒಂದೊಂದು ರೀತಿ ಹೇಳಿಕೆ ನೀಡ್ತಿದ್ದಾರೆ. ಸಂಪುಟ ಸದಸ್ಯರೇ ಟಫ್ ರೂಲ್ಸ್ ಬಗ್ಗೆ ಅಪಸ್ವರ ಎತ್ತಿದ್ದಾರೆ. ಸಂಪುಟ ಸದಸ್ಯರಿಗೆ ಕ್ಲ್ಯಾರಿಟಿ ಇಲ್ಲ, ಹೊಂದಾಣಿಕೆ ಕಾಣುತ್ತಿಲ್ಲ ಎಂದು ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಗ್ರಾಮದಲ್ಲಿ ಶಾಸಕ ಕೃಷ್ಣ ಭೈರೇಗೌಡ ಹೇಳಿಕೆ ನೀಡಿದ್ದಾರೆ.
ಉದ್ದೇಶಪೂರ್ವಕವಾಗಿ ಒಬ್ಬೊಬ್ಬರು ಒಂದೊಂದು ಹೇಳ್ತಿದ್ದಾರೆ. ಕಾಂಗ್ರೆಸ್ನವರನ್ನು ತಪ್ಪಿಗೆ ಸಿಲುಕಿಸುವ ಕೆಲಸ ಮಾಡುತ್ತಿದ್ದಾರೆ. ನಾವು ಕೊವಿಡ್ ಮಾರ್ಗಸೂಚಿ ಪಾಲಿಸಿ ಪಾದಯಾತ್ರೆ ಮಾಡುತ್ತೇವೆ ಎಂದು ಶಾಸಕ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್‌ನ ಹಿರಿಯ ನಾಯಕರ ಸಭೆ ಕರೆದಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರದ ಡಿಕೆಶಿ ಮನೆಯಲ್ಲಿ ಸಭೆ ಕರೆಯಲಾಗಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಸಭೆ ಆರಂಭವಾಗಲಿದೆ. ಭಾನುವಾರದಿಂದ ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆ ಸಭೆ ನಡೆಯಲಿದೆ. ಪಾದಯಾತ್ರೆ ಸಂಬಂಧ ಸಭೆಯಲ್ಲಿ ನಾಯಕರ ಮಾತುಕತೆ ನಡೆಯಲಿದೆ.
ಇದನ್ನೂ ಓದಿ: ಮೇಕೆದಾಟು: ಸರ್ವಪಕ್ಷ ನಿಯೋಗ ಕರೆದೊಯ್ದರೆ ಮೋದಿ ಹತ್ರ ನಾನು ಮಾತಾಡ್ತೇನಿ- ಸಿದ್ದರಾಮಯ್ಯ ಘೋಷಣೆ
ಇದನ್ನೂ ಓದಿ: ಸತ್ತರೂ ಸರಿ, ಮೇಕೆದಾಟು ಪಾದಯಾತ್ರೆ ನಿಲ್ಲದು: ಡಿಕೆ ಶಿವಕುಮಾರ್