ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಾಯಕರು; ಪತ್ರದಲ್ಲಿ 4 ಪ್ರಕರಣಗಳ ಉಲ್ಲೇಖ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ವಿರುದ್ದ ‘ಕೈ’ ನಾಯಕರು ಸಿಡಿಮಿಡಿಗೊಂಡಿದ್ದು, ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇದೀಗ ರಾಜ್ಯಪಾಲರಿಗೆ ಕಾಂಗ್ರೆಸ್ ನಾಯಕರು ಮನವಿ ಪತ್ರವೊಂದನ್ನು ಸಲ್ಲಿಸಿದ್ದು, ಪತ್ರದಲ್ಲಿ 4 ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ.

ಬೆಂಗಳೂರು, ಆ.31: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅದರಂತೆ ಇದೀಗ ಕಾಂಗ್ರೆಸ್(Congress) ನಾಯಕರು ರಾಜ್ಯಪಾಲ ಟಿ.ಸಿ.ಗೆಹ್ಲೋಟ್(Thawar Chand Gehlot)ಗೆ ಮನವಿ ಪತ್ರ ಸಲ್ಲಿಸಿದ್ದು, ಅದರಲ್ಲಿ ರಾಜ್ಯಪಾಲರ ನಡೆಗೆ ಕಟು ಶಬ್ದಗಳಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮನವಿ ಪತ್ರದಲ್ಲಿ 4 ಪ್ರಕರಣಗಳನ್ನು ‘ಕೈ’ ನಾಯಕರು ಉಲ್ಲೇಖಿಸಿದ್ದಾರೆ.
ಮನವಿ ಪತ್ರದಲ್ಲೇನಿದೆ?
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ಅವರ ವಿರುದ್ಧದ ಪ್ರಕರಣವನ್ನು ಈ ಮನವಿ ಪತ್ರದಲ್ಲಿ ಪ್ರಸ್ತಾಪ ಮಾಡಲಾಗಿದೆ. ‘ಲೋಕಾಯುಕ್ತ ಸಂಸ್ಥೆಯಿಂದ ಪ್ರಾಸಿಕ್ಯೂಷನ್ಗೆ ಮನವಿ ಮಾಡಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 19ರ ಅಡಿ ನಾಲ್ಕು ಪ್ರಕರಣಗಳನ್ನು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕು. ರಾಜ್ಯಪಾಲರ ಕಚೇರಿಯ ರಾಜಕೀಯ ದುರ್ಬಳಕೆ ನಿಂತು, ರಾಜಕೀಯ ಪ್ರೇರಿತ ದೂರುಗಳಿಗೆ ರಾಜಭವನ ಬಳಕೆ ಆಗಬಾರದು. ನಿಮ್ಮ ನಡೆ ಜನರ ವಿಶ್ವಾಸ ಕಳೆದುಕೊಳ್ಳುವಂತಿದ್ದು, ರಾಜಭವನದ ಬಗ್ಗೆ ಜನರು ಅನುಮಾನ ಪಡುವಂತಾಗಿದೆ ಎಂದು ಉಲ್ಲೇಖಿಸಲಾಗಿದೆ.
ಇದನ್ನೂ ಓದಿ:ಮುಡಾ ಕೇಸ್: ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಗಡಿಪಾರಿಗೆ ಮನವಿ
ಇನ್ನುBJP, JDSನವರ ಪ್ರಕರಣಗಳು ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರ, ‘ಅವರ ಪ್ರಾಸಿಕ್ಯೂಷನ್ಗೆ ಅನುಮತಿ ವಿಚಾರ ಕೋಲ್ಡ್ ಸ್ಟೋರೇಜ್ ಸೇರಿದೆ. ರಾಜ್ಯಪಾಲರ ಕಚೇರಿಯು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಇದು ಅತ್ಯಂತ ಅಪಾಯಕಾರಿ ಮತ್ತು ನಮಗೆ ತೀವ್ರ ಆತಂಕ ಮೂಡಿಸುತ್ತಿದೆ. ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೊಡಿ. ಈ ಮೂಲಕ ರಾಜಕೀಯ ಷಡ್ಯಂತ್ರಗಳಿಗೆ ರಾಜಭವನ ಬಲಿಯಾಗಿಲ್ಲವೆಂದು ಜನರಿಗೆ ಮನದಟ್ಟು ಮಾಡುವಂತೆ ರಾಜ್ಯಪಾಲರಿಗೆ ‘ಕೈ’ ನಾಯಕರು ಮನವಿ ಸಲ್ಲಿಕೆ ಮಾಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




