ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್​ ನಾಯಕರು; ಪತ್ರದಲ್ಲಿ 4 ಪ್ರಕರಣಗಳ ಉಲ್ಲೇಖ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ವಿರುದ್ದ ‘ಕೈ’ ನಾಯಕರು ಸಿಡಿಮಿಡಿಗೊಂಡಿದ್ದು, ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಇದೀಗ ರಾಜ್ಯಪಾಲರಿಗೆ ಕಾಂಗ್ರೆಸ್​ ನಾಯಕರು ಮನವಿ ಪತ್ರವೊಂದನ್ನು ಸಲ್ಲಿಸಿದ್ದು, ಪತ್ರದಲ್ಲಿ 4 ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ.

ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್​ ನಾಯಕರು; ಪತ್ರದಲ್ಲಿ 4 ಪ್ರಕರಣಗಳ ಉಲ್ಲೇಖ
ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್​ ನಾಯಕರು
Edited By:

Updated on: Aug 31, 2024 | 3:18 PM

ಬೆಂಗಳೂರು, ಆ.31: ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ ರಾಜ್ಯಪಾಲರ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅದರಂತೆ ಇದೀಗ ಕಾಂಗ್ರೆಸ್(Congress)​ ನಾಯಕರು ರಾಜ್ಯಪಾಲ ಟಿ.ಸಿ.ಗೆಹ್ಲೋಟ್​(Thawar Chand Gehlot)ಗೆ ಮನವಿ ಪತ್ರ ಸಲ್ಲಿಸಿದ್ದು, ಅದರಲ್ಲಿ ರಾಜ್ಯಪಾಲರ ನಡೆಗೆ ಕಟು ಶಬ್ದಗಳಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಮನವಿ ಪತ್ರದಲ್ಲಿ 4 ಪ್ರಕರಣಗಳನ್ನು ‘ಕೈ’ ನಾಯಕರು ಉಲ್ಲೇಖಿಸಿದ್ದಾರೆ.

ಮನವಿ ಪತ್ರದಲ್ಲೇನಿದೆ?

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ, ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ಹಾಗೂ ಜನಾರ್ದನ ರೆಡ್ಡಿ ಅವರ ವಿರುದ್ಧದ ಪ್ರಕರಣವನ್ನು ಈ ಮನವಿ ಪತ್ರದಲ್ಲಿ ಪ್ರಸ್ತಾಪ ಮಾಡಲಾಗಿದೆ. ‘ಲೋಕಾಯುಕ್ತ ಸಂಸ್ಥೆಯಿಂದ ಪ್ರಾಸಿಕ್ಯೂಷನ್​ಗೆ ಮನವಿ ಮಾಡಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 19ರ ಅಡಿ ನಾಲ್ಕು ಪ್ರಕರಣಗಳನ್ನು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬೇಕು. ರಾಜ್ಯಪಾಲರ ಕಚೇರಿಯ ರಾಜಕೀಯ ದುರ್ಬಳಕೆ ನಿಂತು, ರಾಜಕೀಯ ಪ್ರೇರಿತ ದೂರುಗಳಿಗೆ ರಾಜಭವನ ಬಳಕೆ ಆಗಬಾರದು. ನಿಮ್ಮ ನಡೆ ಜನರ ವಿಶ್ವಾಸ ಕಳೆದುಕೊಳ್ಳುವಂತಿದ್ದು, ರಾಜಭವನದ ಬಗ್ಗೆ ಜನರು ಅನುಮಾನ ಪಡುವಂತಾಗಿದೆ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ:ಮುಡಾ ಕೇಸ್​: ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ಗಡಿಪಾರಿಗೆ ಮನವಿ

ಇನ್ನುBJP, JDS​ನವರ ಪ್ರಕರಣಗಳು ಪ್ರಾಸಿಕ್ಯೂಷನ್​ಗೆ ಅನುಮತಿ ವಿಚಾರ, ‘ಅವರ ಪ್ರಾಸಿಕ್ಯೂಷನ್​ಗೆ ಅನುಮತಿ ವಿಚಾರ ಕೋಲ್ಡ್ ಸ್ಟೋರೇಜ್ ಸೇರಿದೆ. ರಾಜ್ಯಪಾಲರ ಕಚೇರಿಯು ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಇದು ಅತ್ಯಂತ ಅಪಾಯಕಾರಿ ಮತ್ತು ನಮಗೆ ತೀವ್ರ ಆತಂಕ ಮೂಡಿಸುತ್ತಿದೆ. ಹೆಚ್​.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ,
ಜನಾರ್ದನ ರೆಡ್ಡಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಡಿ. ಈ ಮೂಲಕ ರಾಜಕೀಯ ಷಡ್ಯಂತ್ರಗಳಿಗೆ ರಾಜಭವನ ಬಲಿಯಾಗಿಲ್ಲವೆಂದು ಜನರಿಗೆ ಮನದಟ್ಟು ಮಾಡುವಂತೆ ರಾಜ್ಯಪಾಲರಿಗೆ ‘ಕೈ’ ನಾಯಕರು​​​​​ ಮನವಿ ಸಲ್ಲಿಕೆ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ