AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತರ ಪರ ಇದ್ದೇವೆ ಎಂದು ಅವರ ಹಣವನ್ನೇ ಕಾಂಗ್ರೆಸ್ ಲೂಟಿ‌ ಮಾಡಿದೆ -ಆರ್.ಅಶೋಕ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ R​.ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ರಾಜೀನಾಮೆ ಕೊಡುವವರೆಗೂ ನಾವು ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ದಲಿತರ ಪರ ಇದ್ದೇವೆ ಎಂದು ಅವರ ಹಣವನ್ನೇ ಕಾಂಗ್ರೆಸ್ ಲೂಟಿ‌ ಮಾಡಿದೆ -ಆರ್.ಅಶೋಕ್
ಆರ್ ಅಶೋಕ
Anil Kalkere
| Edited By: ಆಯೇಷಾ ಬಾನು|

Updated on: Jul 15, 2024 | 12:05 PM

Share

ಬೆಂಗಳೂರು, ಜುಲೈ.15: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಇತಿಹಾಸದಲ್ಲಿ ದಲಿತರಿಗೆ ಮೀಸಲಿಟ್ಟಿದ್ದ 187 ಕೋಟಿ ಹಣ ಲೂಟಿ ಮಾಡಲಾಗಿದೆ. ಯಾವುದೇ ಸರ್ಕಾರ ಮಾಡಿರಲಿಲ್ಲ. ದಲಿತರ ಪರ ಇದ್ದೇವೆ ಅಂತಾ ಹೇಳಿ ಅವರ ಹಣ ಕಾಂಗ್ರೆಸ್ (Congress) ಲೂಟಿ‌ ಮಾಡಿದೆ ಎಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ R​.ಅಶೋಕ್ (R Ashok) ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ವಿರುದ್ಧ ನಾವು ಪ್ರತಿಭಟನೆ ಮಾಡ್ತಿದ್ದೇವೆ. ಸರ್ಕಾರ ನೈತಿಕವಾಗಿ ಸತ್ತು ಹೋಗಿದೆ. ಸಿಎಂಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೋಡಬೇಕು. ಸದನದ ಒಳಗೂ ಹೋರಾಟ ‌ಮಾಡುತ್ತೇವೆ. ಸಿಎಂ ಬಚಾವ್ ಆಗುವುದಕ್ಕೆ ನಿವೃತ್ತ ಜಡ್ಜ್ ಮೂಲಕ ನ್ಯಾಯಾಂಗ ತನಿಖೆ ಮಾಡಿಸುತ್ತಿದ್ದಾರೆ. ಸಿಎಂ ಬಚಾವ್ ಆಗೋಕೆ ನಿವೃತ್ತ ಜಡ್ಜ್ ಮುಖಾಂತರ ಇವರ ಮೇಲೆ ಆರೋಪ ಬಂದ್ರೆ ನ್ಯಾಯಂಗ ತನಿಖೆ ಆಗಬೇಕು. ಮುಡಾ ಕೇಸ್​​ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ವಿಧಾನಸೌಧದಲ್ಲಿ ವಿರೋಧ ಪಕ್ಷದ ನಾಯಕ R​.ಅಶೋಕ್ ಒತ್ತಾಯಿಸಿದರು.

ರಾಜೀನಾಮೆ ಕೊಡುವವರೆಗೂ ನಾವು ಹೋರಾಟ ಮಾಡುತ್ತೇವೆ

ಇನ್ನು ಮತ್ತೊಂದೆಡೆ ಮುಡಾ ಪ್ರಕರಣ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಮುಡಾ ಪ್ರಕರಣದ ತನಿಖೆಯನ್ನು ಕೂಡಲೇ ಸಿಬಿಐಗೆ ಕೊಡಬೇಕು ಎಂದು ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಸರ್ಕಾರದ ಅಕ್ರಮಗಳ ವಿರುದ್ಧ ಸದನದ ಹೊರಗೆ, ಒಳಗೆ ಹೋರಾಟ ಮಾಡುತ್ತೇವೆ. ಮುಖ್ಯಮಂತ್ರಿ ಸ್ಥಾನದಲ್ಲಿ ಕೂರುವ ನೈತಿಕತೆ ಕಳೆದುಕೊಂಡಿದ್ದಾರೆ. ರಾಜೀನಾಮೆ ಕೊಡುವವರೆಗೂ ನಾವು ಹೋರಾಟ ಮಾಡುತ್ತೇವೆ. ನಾಗೇಂದ್ರ ಬಂಧನವಾಗಿದ್ದಾರೆ, ಶಾಸಕ ದದ್ದಲ್ ಕಾಣೆಯಾಗಿದ್ದಾರೆ. ಕಾಣೆಯಾದ ಶಾಸಕ ದದ್ದಲ್​ರನ್ನು ಸರ್ಕಾರ ಹುಡುಕಿಕೊಡಬೇಕು ಎಂದು ವಿಧಾನಸೌಧದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.

ಇದನ್ನೂ ಓದಿ: ಗ್ರಾಹಕರಂತೆ ಒಡವೆ ಅಂಗಡಿ ಪ್ರವೇಶಿಸಿ ₹ 7ಲಕ್ಷ ಮೌಲ್ಯದ ಆಭರಣ ಲಪಟಾಯಿಸಿದ ಬುರ್ಖಾಧಾರಿ ಮಹಿಳೆಯರು

ಸಿಎಂಗೆ ತಾಕತ್‌ ಇದ್ರೆ ಸಿಬಿಐ ತನಿಖೆಗೆ ಕೊಡಬೇಕು. ನ್ಯಾಯಾಂಗ ತನಿಖೆ ಅಂತ ನಾಟಕ‌ ಮಾಡುತ್ತಿದ್ದಾರೆ. ಇದೊಂದು ದೊಡ್ಡ ಹಗರಣ. ಸಿಎಂ ರಾಜೀನಾಮೆ ಕೊಡಬೇಕು. ದಲಿತರ ಹೆಸರಲ್ಲಿ ಅಧಿಕಾರಕ್ಕೆ ಬಂದು ದಲಿತರ ಹಣ ದೊಚಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲಾಗಿದೆ. ಸಿಎಂ ನೈತಿಕತೆ ‌ಕಳೆದುಕೊಂಡಿದ್ದೀರಿ. ಡಿಸಿಎಂ ಆರೋಪಿಗಳಿಗೆ ಕ್ಲೀನ್ ಚಿಟ್ ಕೊಡ್ತಾ ಇದ್ದಾರೆ. ಮುಡಾ ಹಗರಣ ಸಿಬಿಐಗೆ ವಹಿಸಬೇಕು. ವಾಲ್ಮೀಕಿ ನಿಗಮದ ಹಗರಣಕ್ಕೆ ಸದನದಲ್ಲಿ ಸಿಎಂ ಉತ್ತರ ಕೋಡಬೇಕು. ವಾಲ್ಮೀಕಿ ನಿಗಮದ ಬಗ್ಗೆ ನಿಳುವಳಿ‌ ಸೂಚನೆ ಕೊಟ್ಟಿದ್ದೇವೆ. ಇವತ್ತು ಚರ್ಚೆಗೆ ಅವಕಾಶ ಕೊಡುತ್ತೇವೆ ಎಂದರು.

ಸಿದ್ದರಾಮಯ್ಯ ಪ್ರಾಮಾಣಿಕರಾಗಿದ್ದರೆ ನಿಷ್ಪಕ್ಷಪಾತ ತನಿಖೆ ಆಗಲಿ. ಎಲ್ಲದಕ್ಕೂ ಸಿಎಂ ಸಿದ್ದರಾಮಯ್ಯ ಸದನದಲ್ಲಿ‌ ಉತ್ತರ ಕೊಡಬೇಕು. ವಾಲ್ಮೀಕಿ ಹಗರಣ ಬಗ್ಗೆ ಚರ್ಚೆಗೆ ನಿಲುವಳಿ‌ ಸೂಚನೆ ನೀಡಲಾಗಿದೆ. ಯಾವ ಸರ್ಕಾರ ಇದ್ದಾಗ ಮುಡಾದಲ್ಲಿ ಹಗರಣ ಆಗಿದೆ, ದಾಖಲೆ ಕೊಡಿ. ರಾಜ್ಯಪಾಲರಿಗೆ ದೂರು ನೀಡುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ