ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಅಪಸ್ವರ; ಅಭ್ಯರ್ಥಿ ಪರ ಕೆಲಸ ಮಾಡಲು ನಿರಾಸಕ್ತಿ

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್‌ ಪರ ಚುನಾವಣೆ ಪ್ರಚಾರದ ಕೆಲಸ ಮಾಡುವಲ್ಲಿ ಶಾಸಕರು, ಸಚಿವರು ಆಸಕ್ತಿ ಕಳೆದುಕೊಂಡಿದ್ದಾರೆ. ಸಿದ್ಧತಾ ಸಭೆಯಲ್ಲಿ ಮುಸ್ಲಿಂ ಶಾಸಕರು ಗೈರಾಗಿದ್ದಾರೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ಸಿಕ್ಕಿರುವುದೇ ಒಂದು ಕಡೆ. ಇಂಥ ಕಡೆಯೂ ಶಾಸಕರೇ ಕೆಲಸ ಮಾಡಲು ಆಸಕ್ತಿ ತೋರಿಸುತ್ತಿಲ್ಲ.

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಅಪಸ್ವರ; ಅಭ್ಯರ್ಥಿ ಪರ ಕೆಲಸ ಮಾಡಲು ನಿರಾಸಕ್ತಿ
ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್‌
Follow us
| Updated By: ಆಯೇಷಾ ಬಾನು

Updated on: Mar 30, 2024 | 9:14 AM

ಬೆಂಗಳೂರು, ಮಾರ್ಚ್​.30: ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ (Lok Sabha Election) ಅಪಸ್ವರ ಕೇಳಿ ಬಂದಿದೆ. ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿಖಾನ್‌ (Mansoor Ali Khan) ಪರ ಕೆಲಸ ಮಾಡಲು ಶಾಸಕರು ಕೈಗೆ ಸಿಗ್ತಿಲ್ಲ. ಮನ್ಸೂರ್ ಅಲಿ ಖಾನ್ ಪರ ಕೆಲಸ ಮಾಡಲು ಶಾಸಕರು ಹಿಂದೇಟು ಹಾಕುತ್ತಿದ್ದಾರೆ. ಮತ್ತೊಂದೆಡೆ ಸ್ವತಃ ಸಚಿವ ಕೆಜೆ ಜಾರ್ಜ್ (KJ George) ಕೈಗೆ ಸಿಗದೇ ಮನ್ಸೂರ್ ಅಲಿ ಖಾನ್ ಒದ್ದಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ಸಿದ್ದತಾ ಸಭೆಗೂ ಅಲ್ಪಸಂಖ್ಯಾತ ಸಮುದಾಯದ ಶಾಸಕರು ಗೈರಾಗಿದ್ದಾರೆ.

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಸಿದ್ಧತಾ ಸಭೆಯಲ್ಲಿ ಕೇವಲ ಸಚಿವ ಜಮೀರ್ ಅಹ್ಮದ್ ಖಾನ್, ಶಾಸಕ ರಿಜ್ವಾನ್ ಅರ್ಷದ್ ಮಾತ್ರ ಹಾಜರಿದ್ದರು. ನಾಲ್ಕು ಕ್ಷೇತ್ರಗಳಲ್ಲಿ ಮಾತ್ರ ಕಾಂಗ್ರೆಸ್ ಗೆ ಸಭೆಗಳಾಗಿದ್ದು ಇನ್ನೂ ನಾಲ್ಕು ಕ್ಷೇತ್ರಗಳಲ್ಲಿ ಸಭೆಯೇ ನಡೆದಿಲ್ಲ. ಶಾಸಕ ಎನ್ ಎ ಹ್ಯಾರಿಸ್ ಕೂಡ ಮನ್ಸೂರ್ ಪರ ಇದುವರೆಗೆ ಚುನಾವಣಾ ಕಾರ್ಯ ಪ್ರಾರಂಭಿಸಿಲ್ಲ. ಶಾಸಕರು, ಸಚಿವರು ಸರಿಯಾಗಿ ಸಭೆಗಳಿಗೆ ಬಾರದ ಬಗ್ಗೆ ಜಮೀರ್ ಅಹಮದ್ ಖಾನ್ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಟಿಕೆಟ್ ಸಿಕ್ಕಿರುವುದೇ ಒಂದು ಕಡೆ. ಇಂಥ ಕಡೆಯೂ ಶಾಸಕರೇ ಕೆಲಸ ಮಾಡದೇ ಇದ್ದರೆ ಹೇಗೆ ಎಂದು ಸಚಿವರು ಬೇಸರ ಹೊರಹಾಕಿದ್ದಾರೆ.

ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಸಿಲುಕಿಕೊಂಡ 5000 ಭಾರತೀಯರು; ಡಾಟಾ ಎಂಟ್ರಿ ಉದ್ಯೋಗದ ಆಸೆ ತೋರಿಸಿ ಸೈಬರ್ ಕ್ರೈಂಗೆ ಬಳಕೆ

ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಹಾಲಿ ಸಂಸದ ಪಿ ಸಿ ಮೋಹನ್ ಮತ್ತೊಮ್ಮೆ ಜಯ ದಾಖಲಿಸಲು ಕಸರತ್ತು ನಡೆಸುತ್ತಿದ್ದಾರೆ. ಕಾಂಗ್ರೆಸ್​ನಿಂದ ಮನ್ಸೂರ್ ಅಲಿಖಾನ್‌ ಅವರಿಗೆ ಟಿಕೆಟ್‌ ಸಿಕ್ಕಿದ್ದು ಮುಸ್ಲಿಂ ಶಾಸಕರೇ ಬೆಂಬಲಕ್ಕೆ ಹಿಂದೇಟು ಹಾಕುತ್ತಿದ್ದಾರೆ.

2008 ರ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಅಸ್ತಿತ್ವಕ್ಕೆ ಬಂದಿತು. ಬೆಂಗಳೂರು ಉತ್ತರ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕೆಲವು ಕ್ಷೇತ್ರಗಳನ್ನು ವಿಭಜಿಸಿ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ಸೃಷ್ಟಿ ಆಯಿತು. 2009ರ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಎಚ್. ಟಿ ಸಾಂಗ್ಲಿಯಾನ ವಿರುದ್ದ ಬಿಜೆಪಿ ಪಿಸಿ ಮೋಹನ್ 35 ಸಾವಿರ ಮತಗಳ ಅಂತರದಿಂದ ಜಯ ದಾಖಲಿಸಿದ್ದರು. 2014 ಮತ್ತು 2019 ರ ಎರಡು ಚುನಾವಣೆಯಲ್ಲಿ ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ವಿರುದ್ದ ಪಿ ಸಿ ಮೋಹನ್‌ ಜಯಗಳಿಸಿದ್ದರು. ಸದ್ಯ ಮತ್ತೊಮ್ಮೆ ಜಯ ದಾಖಲಿಸುವ ನಿರೀಕ್ಷೆಯಲ್ಲಿ ಪಿ.ಸಿ. ಮೋಹನ್ ಇದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
ಜೈಲಿನಲ್ಲಿ ದರ್ಶನ್​ನ​ ಅಪ್ಪಿ ಕಣ್ಣೀರು ಹಾಕಿದ ತಾಯಿ ಮೀನಾ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!