ನನ್ನ ಮನೆಗೆ ಬೆಂಕಿ ಹಚ್ಚಿದವರನ್ನು ಪಕ್ಷದಿಂದ ಉಚ್ಛಾಟಿಸಬೇಕಿತ್ತು, ಆದರೆ ಕೆಪಿಸಿಸಿ ಅಧ್ಯಕ್ಷರಿಗೆ ಕಿವಿ ಕೇಳಿಸ್ತಿಲ್ಲ; ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬೇಸರ
ಸದ್ಯ ವಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಬೇಕು. ಜನರೂ ಸಿದ್ದರಾಮಯ್ಯ ಮುಂದಿನ ಸಿಎಂ ಆಗಬೇಕು ಅಂತಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆಗೆ ಹೋದರೆ 130 ರಿಂದ 150 ಕ್ಷೇತ್ರಗಳಲ್ಲಿ ಗೆದ್ದು ಬರುವುದು ಖಚಿತ. ಹೀಗಾಗಿ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಅವರು ಒತ್ತಾಯಿಸಿದರು.
ಬೆಂಗಳೂರು: ಕಳೆದ ವರ್ಷ ನಮ್ಮ ಮನೆಗೆ ಬೆಂಕಿ ಹಚ್ಚಿದ್ದರು. ಆದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಮ್ಮ ಮನೆಗೆ ಬೆಂಕಿ ಹಚ್ಚಿದವರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ನನ್ನ ಮನೆಗೆ ಬೆಂಕಿ ಹಚ್ಚಿದವರನ್ನು ಪಕ್ಷದಿಂದ ಉಚ್ಛಾಟಿಸಬೇಕು. ಕೆಪಿಸಿಸಿ ಅಧ್ಯಕ್ಷರಾದವರು ಇದುವರೆಗೂ ಏನನ್ನೂ ಕೇಳಿಲ್ಲ. ಕೆಪಿಸಿಸಿ ಅಧ್ಯಕ್ಷರಿಗೆ ಕಿವಿ ಕೇಳಿಸುತ್ತಿಲ್ಲ. ಶಾಸಕನಿಗೆ ರಕ್ಷಣೆ ಕೊಡಲಾಗದಿದ್ರೆ, ಜನರಿಗೆ ಏನನ್ನು ತಾನೇ ಕೊಡಲು ಸಾಧ್ಯ? ಎಂದು ಬೆಂಗಳೂರಲ್ಲಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬೇಸರ ಮತ್ತು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರನ್ನು ಭೇಟಿ ಮಾಡಿದ್ದೇನೆ.ಭೇಟಿ ಮಾಡಿ ಪತ್ರವನ್ನು ನೀಡಿದರೂ ಅವರೇನೂ ಮಾಡಿಲ್ಲ. ನಮ್ಮ ವಿರೋಧಿಗಳ ಜತೆ ಅಧ್ಯಕ್ಷರ ಓಡಾಟ ನೋವಾಗಿದೆ. ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೂ ಮನವಿ ಮಾಡುತ್ತೇನೆ. ನನಗೆ ಟಿಕೆಟ್ ನೀಡಿಕೆ ಬಗ್ಗೆ ಹೈಕಮಾಂಡ್ ನಿರ್ಧರಿಸಲಿದೆ ಎಂದು ಅವರು ತಮ್ಮ ಮುಂದಿನ ನಡೆಗಳನ್ನು ತೆರೆದಿಟ್ಟರು.
ಮುಂದುವರೆದು ಮಾತನಾಡಿದ ಅವರು, ಸದ್ಯ ವಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಬೇಕು. ಜನರೂ ಸಿದ್ದರಾಮಯ್ಯ ಮುಂದಿನ ಸಿಎಂ ಆಗಬೇಕು ಅಂತಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆಗೆ ಹೋದರೆ 130 ರಿಂದ 150 ಕ್ಷೇತ್ರಗಳಲ್ಲಿ ಗೆದ್ದು ಬರುವುದು ಖಚಿತ. ಹೀಗಾಗಿ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ಮುಂದುವರೆದು ಮಾತನಾಡಿದ ಅವರು, ಸದ್ಯ ವಿಪಕ್ಷ ನಾಯಕರಾಗಿರುವ ಸಿದ್ದರಾಮಯ್ಯ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಬೇಕು. ಜನರೂ ಸಿದ್ದರಾಮಯ್ಯ ಮುಂದಿನ ಸಿಎಂ ಆಗಬೇಕು ಅಂತಿದ್ದಾರೆ. ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆಗೆ ಹೋದರೆ 130 ರಿಂದ 150 ಕ್ಷೇತ್ರಗಳಲ್ಲಿ ಗೆದ್ದು ಬರುವುದು ಖಚಿತ. ಹೀಗಾಗಿ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ಇದನ್ನು ಓದಿ: ಸುದ್ದಿ ವಿಶ್ಲೇಷಣೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ, ಕಾಂಗ್ರೆಸ್ನಲ್ಲಿ ಈಗಲೇ ಹಲವಾರು ಮುಖ್ಯಮಂತ್ರಿಗಳು!
(Congress MLA akhanda srinivas murthy says who set fire to my house were to be expelled from the party but the KPCC president DK Shivakumar did not listen)