ಕಾಂಗ್ರೆಸ್‌ ಶಾಸಕ ಹ್ಯಾರಿಸ್ ಮತ್ತು ಬೆಂಬಲಿಗರ ವಿರುದ್ಧ ಬೆದರಿಕೆ ಆರೋಪ: ಆಪ್ ಮುಖಂಡರಿಂದ ದೂರು

ಬೆದರಿಕೆ ಆರೋಪ ಹಿನ್ನೆಲೆ ಶಾಂತಿನಗರದ ಕಾಂಗ್ರೆಸ್‌ ಶಾಸಕ ಹ್ಯಾರಿಸ್ ಮತ್ತು ಬೆಂಬಲಿಗರ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಗೆ ಆಪ್ ಮುಖಂಡ ಮಥಾಯಿ ದೂರು ನೀಡಿದ್ದಾರೆ.

ಕಾಂಗ್ರೆಸ್‌ ಶಾಸಕ ಹ್ಯಾರಿಸ್ ಮತ್ತು ಬೆಂಬಲಿಗರ ವಿರುದ್ಧ ಬೆದರಿಕೆ ಆರೋಪ: ಆಪ್ ಮುಖಂಡರಿಂದ ದೂರು
ಆಪ್ ಮುಖಂಡ ಮಥಾಯಿ, ಕಾಂಗ್ರೆಸ್‌ ಶಾಸಕ ಹ್ಯಾರಿಸ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Feb 04, 2023 | 6:45 PM

ಬೆಂಗಳೂರು: ಬೆದರಿಕೆ ಆರೋಪ ಹಿನ್ನೆಲೆ ಶಾಂತಿನಗರದ ಕಾಂಗ್ರೆಸ್‌ ಶಾಸಕ ಹ್ಯಾರಿಸ್ (NA Haris) ಮತ್ತು ಬೆಂಬಲಿಗರ ವಿರುದ್ಧ ಅಶೋಕನಗರ ಪೊಲೀಸ್ ಠಾಣೆಗೆ ಆಪ್ ಮುಖಂಡ ಮಥಾಯಿ ದೂರು ನೀಡಿದ್ದಾರೆ. ಕ್ಷೇತ್ರದ ಪ್ರಣಾಳಿಕೆ ಸಿದ್ಧಪಡಿಸಲು ಶಾಂತಿನಗರ ಕ್ಷೇತ್ರದಲ್ಲಿ ಮತದಾರರ ಸಮಸ್ಯೆ ಆಲಿಸುತ್ತಿದ್ದ ಮಥಾಯಿ, ಈ ವೇಳೆ ನೀಲಸಂದ್ರ ಬಳಿಯ ಸರ್ಕಾರಿ ಆಸ್ಪತ್ರೆ, ಶಾಲೆಗೆ ಭೇಟಿ ನೀಡಿದ್ದಾಗ ಸ್ಥಳಕ್ಕೆ ಆಗಮಿಸಿ ಬೆದರಿಕೆ ಹಾಕಿದ್ದಾರೆ ಎಂದು ರೋಪ ಮಾಡಲಾಗಿದೆ. ಎನ್‌.ಎ.ಹ್ಯಾರಿಸ್, ಬೆಂಬಲಿಗರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಕೆಎಎಸ್ ಅಧಿಕಾರಿ ಹಾಗೂ ಆಪ್ ಮುಖಂಡ ಮಥಾಯಿ ಒತ್ತಾಯಿಸಿದ್ದಾರೆ.

ಲೇಔಟ್​ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪ: ಬಿಜೆಪಿ MLC ಆರ್.ಶಂಕರ್ ಪತ್ನಿ, ಪುತ್ರನ ವಿರುದ್ಧ FIR

ಬೆಂಗಳೂರು: ಲೇಔಟ್​ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪದಡಿ ಬಿಜೆಪಿ MLC ಆರ್.ಶಂಕರ್ ಪತ್ನಿ ಮತ್ತು ಪುತ್ರನ ವಿರುದ್ಧ ಇಂದಿರಾನಗರ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕಂಪನಿ ಪಾರ್ಟನರ್ ಆಗಿರುವ ಪ್ರಭಾವತಿ ಎಂಬುವವರಿಂದ ದೂರು ನೀಡಲಾಗಿದೆ. ಪಾರ್ಟನರ್​​ಗೆ ವಂಚಿಸಿ ಅಕ್ರಮವಾಗಿ 23 ಸೈಟ್​ ಮಾರಾಟ ಆರೋಪ ಕೇಳಿಬಂದಿದೆ.  ಆರ್.ಶಂಕರ್ ಪುತ್ರ, ಪತ್ನಿ ಸೇರಿ ಒಟ್ಟು ನಾಲ್ವರು ಕಂಪನಿ ಆರಂಭಿಸಿದ್ದು, ಕಂಪನಿ ಹೆಸರಿನಲ್ಲಿ ಬೊಮ್ಮನಹಳ್ಳಿಯಲ್ಲಿ ಲೇಔಟ್ ನಿರ್ಮಿಸಿದ್ದರು.

ಇದನ್ನೂ ಓದಿ: Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!

ಲೇಔಟ್ ನಿರ್ಮಾಣದ ವೇಳೆ ನಾಲ್ವರೂ ಪಾರ್ಟನರ್​ಗಳು ಒಪ್ಪಂದ ಮಾಡಿಕೊಂಡಿದ್ದು, ಸೈಟ್ ಹಂಚಿಕೆ ವೇಳೆ ಎಲ್ಲರ ಸಹಿ ಕಡ್ಡಾಯವೆಂದು ಅಗ್ರಿಮೆಂಟ್ ಮಾಡಲಾಗಿದೆ. ಆದರೆ ಇದೀಗ ಪ್ರಭಾವತಿ ಕೈಬಿಟ್ಟು ಮೂವರಿಂದ ಸೈಟ್ ಮಾರಾಟ ಮಾಡಿದ್ದು, ಅಕ್ರಮವಾಗಿ ಬ್ಯಾಂಕ್​ನಲ್ಲಿ ಖಾತೆ ತೆಗೆದು ವಂಚಿಸಿರುವುದಾಗಿ ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ. ಮೂವರ ಮೇಲೆ ಕೇಸ್ ದಾಖಲಿಸದ ಇಂದಿರಾನಗರ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಗಲಾಟೆ ಪ್ರಕರಣವೊಂದರ ಮಾಹಿತಿ ಕಲೆಹಾಕಿ ಮಗಳ ಮನೆಗೆ ಹೊರಟಿದ್ದ ಎಎಸ್​ಐ ಮಾರ್ಗ ಮಧ್ಯ ದುರಂತ ಅಂತ್ಯ

ಮಗಳ ಮನೆಗೆ ಹೊರಟಿದ್ದ ಎಎಸ್​ಐ ಬೈಕ್ ಅಪಘಾತದಲ್ಲಿ ಸಾವು

ದಾವಣಗೆರೆ: ಎರಡು ಬೈಕ್​ಗಳ ನಡುವೆ ಡಿಕ್ಕಿಯಾಗಿ ತೀವ್ರ ರಕ್ತಸ್ರಾವದಿಂದ ಓರ್ವ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಚಿನ್ನು ಡಾಬಾ ಬಳಿ ನಡೆದಿದೆ. ಶಬ್ಬೀರ್ ಹುಸೇನ್(59) ಮೃತ ಬೈಕ್​ ಸವಾರ. ಮೃತ ಶಬ್ಬೀರ್ ಹುಸೇನ್ ಹೊಸಪೇಟೆ ಠಾಣೆಯ ಎಎಸ್​ಐ ಆಗಿದ್ದರು. ಬೆಳಗ್ಗೆ ಚಿತ್ರದುರ್ಗದ ಮಗಳ ನಿವಾಸಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಮತ್ತೊಂದು ಬೈಕ್​ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಗಳೂರು ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:45 pm, Sat, 4 February 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ