ಬಿಜೆಪಿ ಟೀಕಿಸುವ ಭರದಲ್ಲಿ ಕರಗಕ್ಕೆ ಶಾಸಕ ಹ್ಯಾರಿಸ್ ಅವಹೇಳನ: ಭಾರಿ ಪ್ರತಿಭಟನೆ ಸುಳಿವು ಸಿಗುತ್ತಿದ್ದಂತೆ ಕ್ಷಮೆಯಾಚನೆ

ವಿಶ್ವವಿಖ್ಯಾತ ಬೆಂಗಳೂರು ಕರಗ ಕುರಿತು ಶಾಸಕ ಎನ್​.ಎ.ಹ್ಯಾರಿಸ್ ಅವಹೇಳನಕಾರಿಯಾಗಿ ಮಾತನಾಡಿದ್ದು, ಇದಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಕ್ಷಮೆ ಕೇಳಿದ್ದಾರೆ. ಅಷ್ಟಕ್ಕೂ ಹ್ಯಾರಿಸ್​ ಹೇಳಿದ್ದೇನು? ಈ ಕೆಳಗಿನಂತಿದೆ ನೋಡಿ.

ಬಿಜೆಪಿ ಟೀಕಿಸುವ ಭರದಲ್ಲಿ ಕರಗಕ್ಕೆ ಶಾಸಕ ಹ್ಯಾರಿಸ್ ಅವಹೇಳನ: ಭಾರಿ ಪ್ರತಿಭಟನೆ ಸುಳಿವು ಸಿಗುತ್ತಿದ್ದಂತೆ ಕ್ಷಮೆಯಾಚನೆ
ಎನ್​.ಎ. ಹ್ಯಾರಿಸ್, ಕಾಂಗ್ರೆಸ್ ಶಾಸಕ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 13, 2023 | 9:48 AM

ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ(Bengaluru karaga) ಕುರಿತು ಶಾಂತಿನಗರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎನ್​.ಎ. ಹ್ಯಾರಿಸ್( NA Haris) ಅವಹೇಳನಕಾರಿಯಾಗಿ ಮಾತನಾಡಿದ್ದಾರೆ.  ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಹ್ಯಾರಿಸ್,  ಬೆಂಗಳೂರು ಕರಗ ಬಗ್ಗೆ ಹಗುರ ಭಾಷೆ ಬಳಸಿ ಎಡವಟ್ಟು ಮಾಡಿಕೊಂಡಿದ್ದಾರೆ. ಇದಕ್ಕೆ ಆಕ್ರೋಶಗಳು ವ್ಯಕ್ತವಾಗುವ ಮುನ್ಸೂಚನೆಗಳು ಸಿಗುತ್ತಿದ್ದಂತೆಯೇ ಎಚ್ಚೆತ್ತ ಹ್ಯಾರಿಸ್ ಕ್ಷಮೆಯಾಚಿಸಿದ್ದಾರೆ. ಈ ಮೂಲಕ ಚುನಾವಣೆ ಹೊತ್ತಲ್ಲಿ ಡ್ಯಾಮೇಜ್​ ಕಂಟ್ರೋಲ್​ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ರೌಡಿ ಶೀಟರ್​ ಎದುರು ಕೈ ಮುಗಿದು ನಿಂತ ಮೋದಿ: ಫೋಟೋ ವೈರಲ್, ಕಾಂಗ್ರೆಸ್ ವಾಗ್ದಾಳಿ

ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಹ್ಯಾರಿಸ್​, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಹೀಗೆ ಮಾತನಾಡುತ್ತಿದ್ದ ವೇಳೆ ಆಡಳಿತ ಪಕ್ಷದವನ್ನು ಟೀಕಿಸುವ ಭರದಲ್ಲಿ ‘ಅವರು ನಾಟಕ ಮಾಡುತ್ತಿದ್ದಾರೆ, ಇದೊಂದು ಎರಡು ತಿಂಗಳು ನಾಟಕದ ಟೈಮ್, ಹಬ್ಬಕ್ಕೆ ಕರಗ ಟೈಮ್​ನಲ್ಲೆಲ್ಲ ಹಾಕೊಂಡು ಬರ್ತಾರಲ್ಲ, ಅದೇ ಥರ ಇವರೆಲ್ಲ ಈಗ ಓಡಾಡುತ್ತಿರೋದು ಎಂದು ಹೇಳಿದ್ದರು. ಹೀಗಾಗಿ ಹ್ಯಾರಿಸ್ ಹೇಳಿಕೆಯನ್ನು ಖಂಡಿಸಿ ಇಂದು ಭಾರಿ ಪ್ರತಿಭಟನೆ ನಡೆಸಲು ಕರಗ ಉತ್ಸವ ಮಂಡಳಿ ಸಿದ್ಧತೆ ಮಾಡಿಕೊಂಡಿತ್ತು.

ಇದರ ಸುಳಿವು ಸಿಗುತ್ತಿದ್ದಂತೆ ಹ್ಯಾರಿಸ್​ ಸಾಮಾಜಿಕ ಜಾಲತಾಣಗಳ ಮೂಲಕ ಪ್ರತಿಕ್ರಿಯಿಸಿ ಕ್ಷಮೆ ಕೇಳಿದ್ದಾರೆ. ನಾನು ಆ ರೀತಿ ಏನೂ ಹೇಳಿಲ್ಲ. ನನ್ನ ಮಾತನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ. ಅದಾಗ್ಯೂ ನಿಮಗೆ ಯಾರಿಗೂ ನೋವಾಗಬಾರದು, ತಪ್ಪು ಭಾವಿಸಬಾರದು. ನಾನು ಆ ರೀತಿ ಯಾವತ್ತೂ ಹೇಳಲ್ಲ. ಈ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹ್ಯಾರಿಸ್​ ಹೇಳಿಕೆ ಖಂಡಿಸಿ ಪ್ರತಿಭಟನೆ ಸಲುವಾಗಿ ಕರೆದಿದ್ದ ಸುದ್ದಿಗೋಷ್ಠಿ ರದ್ದಾಗಿದೆ ಎಂದು ತಿಳಿದುಬಂದಿದೆ.

Published On - 9:43 am, Mon, 13 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ