AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್ ಸಿಂಹ ಬೈ ಬರ್ತ್ ರೈಟರ್ ಇರಬಹುದು, ನಾನು ಫೈಟರ್: ಗುಡುಗಿದ ಪ್ರದೀಪ್ ಈಶ್ವರ್

ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಮತ್ತು ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ನಡುವಿನ ಮಾತಿನ ಸಮರ ಮುಂದುವರೆದಿದೆ. ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಆರೋಪಿಸಿ ಮಾನನಷ್ಟ ಮೊಕದ್ದಮೆ ದಾಖಲಿಸಿದ ಪ್ರತಾಪ್ ಸಿಂಹ ವಿರುದ್ಧ ಪ್ರದೀಪ್ ಈಶ್ವರ್ ಮತ್ತೆ ಗುಡುಗಿದ್ದಾರೆ. ​

ಪ್ರತಾಪ್ ಸಿಂಹ ಬೈ ಬರ್ತ್ ರೈಟರ್ ಇರಬಹುದು, ನಾನು ಫೈಟರ್: ಗುಡುಗಿದ ಪ್ರದೀಪ್ ಈಶ್ವರ್
ಪ್ರದೀಪ್ ಈಶ್ವರ್, ಪ್ರತಾಪ್ ಸಿಂಹ
ಪ್ರಸನ್ನ ಗಾಂವ್ಕರ್​
| Edited By: |

Updated on: Feb 27, 2024 | 5:30 PM

Share

ಬೆಂಗಳೂರು, (ಫೆಬ್ರವರಿ 27): ತಮ್ಮ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಕಾಂಗ್ರೆಸ್​ ಶಾಸಕ ಪ್ರದೀಪ್ ಈಶ್ವರ್  (Pradeep Eshwar)ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿಂದು(ಫೆ.27) ಸುದ್ದಿಗಾರದೊಂದಿಗೆ ಮಾತನಾಡಿದ ಪ್ರದೀಪ್ ಈಶ್ವರ್, ಪ್ರತಾಪ್ ಸಿಂಹ ಯಾಕೆ ಮಾನನಷ್ಟ ಮೊಕದ್ದಮೆ ಹಾಕಬೇಕು? ಪ್ರತಾಪ್ ಸಿಂಹ ಬೈಬರ್ತ್ ರೈಟರ್ ಇರಬಹುದು, ನಾನು ಫೈಟರ್. ಪ್ರತಾಪ್ ಸಿಂಹ ಅವರೇ ಮಾಧ್ಯಮದ ಮುಂದೆ ಬಿಲ್ಡಪ್ ಕೊಡುವುದಲ್ಲ. ತಾಕತ್ತಿದ್ದರೆ ಚರ್ಚೆ​​ಗೆ ಬರಬೇಕು ಎಂದು ಸವಾಲು ಹಾಕಿದರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ನೀವು ಬಾಯಿಗೆ ಬಂದಂತೆ ಬೈದುಬಿಟ್ರೆ ಎಂದು ಪ್ರಶ್ನಿಸಿದ ಪ್ರದೀಪ್ ಈಶ್ವರ್, ಒಂದಲ್ಲ, ಸಾವಿರ ಎಫ್ಐಆರ್ ಹಾಕಿಸು. ನೀನು ಬೈ ಬರ್ತ್ ರೈಟರ್ ಏನೋ, ನಾವೂ ಬೈ ಬರ್ತ್ ಫೈಟರ್ಸ್ ರೀ. ಅಯೋಗ್ಯ ಮುಠ್ಠಾಳನನ್ನು ಅಯೋಗ್ಯ ಮುಠ್ಠಾಳ ಅಂತಾನೇ ಹೇಳುತ್ತೇವೆ. ನಿಮ್ಮ ಮಾನನಷ್ಟ ಕೇಸ್​ಗೆ ಹೆದರುತ್ತೀವಾ ಎಂದು ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಮುಠಾಳ, ಅಯೋಗ್ಯ ಎಂದ ಪ್ರದೀಪ್ ಈಶ್ವರ್ ವಿರುದ್ಧ ಮಾನನಷ್ಟ ಕೇಸ್ ಹಾಕಿದ ಪ್ರತಾಪ್ ಸಿಂಹ

ಪ್ರತಾಪ್ ಸಿಂಹಗೆ ಹಿಗ್ಗಾಮುಗ್ಗಾ ಬೈದಿದ್ದ ಪ್ರದೀಪ್ ಈಶ್ವರ್

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಪ್ರತಾಪ್ ಸಿಂಹ ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರದೀಪ್ ಈಶ್ವರ್​, ಪ್ರತಾಪ್ ಸಿಂಹ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಕಳೆದ ತಿಂಗಳು ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ನಡೆದ ಗ್ರಾಮ ಪಂಚಾಯಿತಿ ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು.

ಪ್ರತಾಪ್ ಸಿಂಹ ಒಬ್ಬ ದೊಡ್ಡ ಅಯೋಗ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಬಾಯಿ ಮುಚ್ಕಂಡು ಸುಮ್ಮನಿದ್ದರೆ ಸರಿ. ಇಲ್ಲವಾದಲ್ಲಿ ಇಡೀ ಕಾಂಗ್ರೆಸ್ ಪಾಳಯ ಮೈಸೂರಿಗೆ ಇಳಿಯಬೇಕಾಗುತ್ತೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಡಾ ಕೆ ಸುಧಾಕರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೆ, ತಾನು ಕಾಂಗ್ರೆಸ್ ನಿಂದ ಕಣಕ್ಕಿಳಿಯಲು ಸಿದ್ಧ ಎಂದು ಪ್ರದೀಪ್ ಈಶ್ವರ್ ಗುಡುಗಿದ್ದರು.

ಈ ಹಿನ್ನೆಲೆ ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಮಾನನಷ್ಟ ಮೊಕದ್ದಮೆ (Defamation Case) ಕೇಸ್ ದಾಖಲಿಸಿದ್ದಾರೆ. ತನ್ನ ವಿರುದ್ಧ ಏಕವಚನದಲ್ಲಿ ಅವಹೇಳನಕಾರಿ ಪದ ಬಳಸಿದ್ದಾರೆ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವಂತೆ ಖಾಸಗಿ ದೂರು ಸಲ್ಲಿಸಿದ್ದಾರೆ.

ಪ್ರದೀಪ್ ಈಶ್ವರ್ ವಿರುದ್ಧ ಸಿಂಹ ಕೇಸ್

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕರಾದ ಪ್ರದೀಪ್ ಈಶ್ವರ್‌ ನನ್ನ ವಿರುದ್ಧ ಮಾಧ್ಯಮಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನನ್ನನ್ನು ದೇಶದ್ರೋಹಿ ಎಂದು ಕರೆದಿದ್ದಾರೆ. ಮುಠಾಳ, ಅಯೋಗ್ಯ ಎಂಬಿತ್ಯಾದಿ ನಿಂದನತ್ಮಾಕ ಶಬ್ದಗಳಿಂದ ತೇಜೋವಧ ಮಾಡಲು ಪ್ರಯತ್ನಿಸಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಜನರಿಗೆ ನನ್ನ ಮೇಲೆ ತಪ್ಪು ಅಭಿಪ್ರಾಯ ಮೂಡಲು ದಾರಿಮಾಡಿಕೊಟ್ಟಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಕನಿಷ್ಠ ಸೌಜನ್ಯವನ್ನು ಕೂಡ ತೋರದ ಚಾರಿತ್ರ್ಯ ವಧೆ ಮಾಡುವ ಮಾತುಗಳನ್ನು ಆಡಿದ್ದಾರೆ. ಹಾಗೂ ನನ್ನನ್ನು ಏಕವಚನದಲ್ಲಿ ನಿಂದಿಸಿದ್ದಾರೆ ಎಂದು ಪ್ರತಾಪ್ ಸಿಂಹ ಅವರು ಖಾಸಗಿ ದೂರು ಸಲ್ಲಿಸಿದ್ದಾರೆ.ಆದ್ರೆ, ಈ ದೂರಿಗೆ ಪ್ರದೀಪ್ ಈಶ್ವರ್ ಡೋಂಟ್ ಕೇರ್ ಎಂದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಪ್ರಸನ್ನ ಗಾಂವ್ಕರ್​
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು