ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಪ್ರಿಯಾಂಕ್ ಖರ್ಗೆಗೆ ಕೊರೊನಾ ದೃಢ, ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಕೆಲವೆಡೆ ಸಂಕ್ರಾಂತಿ ಆಚರಣೆ
ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ಗ್ರಾಮದಲ್ಲಿ ಮಾಸ್ಕ್ ಧರಿಸದೆ ಅಂತರ ಮರೆತು ಸಂಕ್ರಾಂತಿ ಹಬ್ಬ ಆಚರಣೆ ಮಾಡಲಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಾನಂದ ನೇತೃತ್ವದಲ್ಲಿ ಸಂಕ್ರಾಂತಿ ಆಚರಣೆ ಮಾಡಲಾಗಿದೆ. ಆದರೆ, ಸೋಲದೇವನಹಳ್ಳಿ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ.
ಬೆಂಗಳೂರು: ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಈ ಬಗ್ಗೆ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನಮ್ಮ ಸಿಬ್ಬಂದಿಗೆ ಕೊರೊನಾ ನೆಗೆಟಿವ್ ಬಂದಿದೆ. ನನ್ನ ಸಂಪರ್ಕದಲ್ಲಿದ್ದವರು ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಅವರು ಮನವಿ ಮಾಡಿದ್ದಾರೆ. ಮೇಕೆದಾಟು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಶಾಸಕ ಪ್ರಿಯಾಂಕ್ ಖರ್ಗೆ ಇದೀಗ ಬೆಂಗಳೂರಿನ ನಿವಾಸದಲ್ಲಿ ಐಸೋಲೇಷನ್ ಆಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಉಪವಿಭಾಗದ 28 ಪೊಲೀಸರಿಗೆ ಕೊರೊನಾ ದೃಢವಾಗಿದೆ. ಮೇಕೆದಾಟು ಪಾದಯಾತ್ರೆ ಭದ್ರತೆಗೆ ಹೋಗಿಬಂದಿದ್ದ ಪೊಲೀಸರಲ್ಲಿ ಕೂಡ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇತ್ತ ಹಾಸನ ಜಿಲ್ಲೆಯಲ್ಲಿ ಕೊರೊನ ಮಹಾಸ್ಪೋಟವಾಗಿದೆ. ಶನಿವಾರ ಒಂದೇ ದಿನ ಕೊರೊನಾ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಇಂದು ಹೊಸದಾಗಿ 1,030 ಕೇಸ್ ಗಳು ಪತ್ತೆ ಆಗಿದೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,051ಕ್ಕೆ ಏರಿಕೆ ಆಗಿದೆ.
ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಸಂಕ್ರಾಂತಿ ಹಬ್ಬ ಆಚರಣೆ
ಹಲವೆಡೆ ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಸಂಕ್ರಾಂತಿ ಹಬ್ಬ ಆಚರಣೆ ಮಾಡಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟ ಗ್ರಾಮದಲ್ಲಿ ಮಾಸ್ಕ್ ಧರಿಸದೆ ಅಂತರ ಮರೆತು ಸಂಕ್ರಾಂತಿ ಹಬ್ಬ ಆಚರಣೆ ಮಾಡಲಾಗಿದೆ. ಗ್ರಾಮ ಪಂಚಾಯತ್ ಅಧ್ಯಕ್ಷ ಶಿವಾನಂದ ನೇತೃತ್ವದಲ್ಲಿ ಸಂಕ್ರಾಂತಿ ಆಚರಣೆ ಮಾಡಲಾಗಿದೆ. ಆದರೆ, ಸೋಲದೇವನಹಳ್ಳಿ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ.
ಕೊರೊನಾ ನಡುವೆಯೂ ಮೈಸೂರಿನಲ್ಲಿ ಸಂಕ್ರಾಂತಿ ಸಂಭ್ರಮ ಜೋರಾಗಿ ಕಂಡುಬಂದಿದೆ. ನೂರಾರು ಹಸುಗಳಿಗೆ ಕಿಚ್ಚು ಹಾಯಿಸಿ ಸಂಕ್ರಾಂತಿ ಆಚರಣೆ ಮಾಡಲಾಗಿದೆ. ಮೈಸೂರಿನ ಪಿಂಜರಪೋಲ್‌ನಲ್ಲಿ ಕಿಚ್ಚು ಹಾಯಿಸಿ ಸಂಭ್ರಮಿಸಲಾಗಿದೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಹಸುಗಳ ಪುನರ್ವಸತಿ ಕೇಂದ್ರದಲ್ಲಿ ಘಟನೆ ನಡೆದಿದೆ.
ಮೈಸೂರಿನ ವಿವಿಧ ಗ್ರಾಮಗಳಲ್ಲಿ ಸಂಕ್ರಾಂತಿ ಆಚರಣೆ ಮಾಡಲಾಗಿದೆ. ಮೈಸೂರು ತಾಲೂಕಿನ ಮೂಡಲಹುಂಡಿ ಗ್ರಾಮದಲ್ಲಿ ಹಬ್ಬದ ಸಂಭ್ರಮ ಕಂಡುಬಂದಿದೆ. ಸಂಕ್ರಾಂತಿ ಹಿನ್ನೆಲೆಯಲ್ಲಿ ಬೀರೇಶ್ವರ, ಬನ್ನಿಮಹಾಕಾಳೇಶ್ವರಿ ಹಾಗೂ ಬಸವೇಶ್ವರ ಉತ್ಸವ ಮೂರ್ತಿಯ ಮೆರವಣಿ ಮಾಡಲಾಗಿದೆ. ಮೆರವಣಿಗೆಗೂ ಮುನ್ನ ಪೂಜೆ ಹೋಮ ಮಾಡಲಾಗಿದೆ. ದೇವರ ಉತ್ಸವ ಮೂರ್ತಿಗೆ ಅಲಂಕಾರ ಮಾಡಿದ್ದು ಉತ್ಸವಮೂರ್ತಿ ಪೂಜಾ ಕುಣಿತ ಗಮನ ಸೆಳೆದಿದೆ.
ಕೋಲಾರದ ಕಾಕಿನತ್ತ ಗ್ರಾಮದಲ್ಲಿ ಸಂಕ್ರಾಂತಿ ಸಂಭ್ರಮ ಕಂಡುಬಂದಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಗ್ರಾಮದಲ್ಲಿ ಹಬ್ಬ ಆಚರಣೆ ಮಾಡಲಾಗಿದೆ. ಗ್ರಾಮದಲ್ಲಿ ಹಸುಗಳಿಗೆ ಸಿಂಗಾರ ಮಾಡಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ತಮಟೆ ಡೋಲಿನೊಂದಿಗೆ ಮೆರವಣಿಗೆ ಮಾಡಲಾಗಿದೆ.
ಕರ್ನಾಟಕದಲ್ಲಿ ಸಾವಿರಾರು ಕೊರೊನಾ ಕೇಸ್ ಪತ್ತೆಯಾದರೂ ಆಸ್ಪತ್ರೆಗೆ, ಆಕ್ಸಿಜನ್ ಬೆಡ್, ಐಸಿಯು ಬೆಡ್ ದಾಖಲಾತಿ ಕಡಿಮೆ
ಕರ್ನಾಟಕ ರಾಜ್ಯದಲ್ಲಿ ಕೊವಿಡ್ ಹೆಚ್ಚಳ ಹಿನ್ನೆಲೆ ಕೊರೊನಾ ನಿಯಂತ್ರಣಕ್ಕೆ ಸಿದ್ಧತೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ವಾರ ಮತ್ತೊಂದು ಸಭೆ ನಡೆಯಲಿದೆ. ಫೆಬ್ರವರಿಯಿಂದ ಲಾಕ್ಡೌನ್ ಮಾಡುವುದು ಬಹುತೇಕ ಅನುಮಾನ ಎಂದು ಹೇಳಲಾಗಿದೆ. ಕೊವಿಡ್ ವಿಚಾರದಲ್ಲಿ ಸೇಫ್ ಜೋನ್ನಲ್ಲಿರುವ ಲೆಕ್ಕಾಚಾರ ಕೇಳಿಬಂದಿದೆ. ಸಾವಿರಾರು ಕೇಸ್ ಪತ್ತೆಯಾದರೂ ಆಸ್ಪತ್ರೆಗೆ ದಾಖಲಾತಿ ಕಡಿಮೆ ಇದೆ. 2 ವಾರದ ಆಸ್ಪತ್ರೆ ದಾಖಲಾತಿ ನೋಡಿದ್ರೆ ಸದ್ಯಕ್ಕೆ ಆತಂಕವಿಲ್ಲ. ಇನ್ನೂ ಎರಡು ವಾರ ರಾಜ್ಯ ಸರ್ಕಾರ ಕಾದು ನೋಡಲಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ಈಗ ಟ್ರೆಂಡ್ ನೋಡಿದ್ರೆ ರಾಜ್ಯಕ್ಕಿಲ್ಲ 3ನೇ ಅಲೆ ತೀವ್ರತೆ ಆತಂಕ ಎಂದು ಹೇಳಲಾಗಿದೆ.
ಆಸ್ಪತ್ರೆ ದಾಖಲಾತಿ ನೋಡಿದ್ರೆ ಯಾವುದೇ ಆತಂಕ ಇಲ್ಲ. ಆಕ್ಸಿಜನ್ ಬೆಡ್, ಐಸಿಯು ಬೆಡ್ನಲ್ಲಿ ದಾಖಲಾತಿ ಹೆಚ್ಚುತ್ತಿಲ್ಲ. ರಾಜ್ಯದಲ್ಲಿ ಮತ್ತಷ್ಟು ಟಫ್ ರೂಲ್ಸ್ನ ಅನಿವಾರ್ಯತೆ ಕಾಣ್ತಿಲ್ಲ. ಲಸಿಕೆ ತೆಗೆದುಕೊಳ್ಳಿ, ಕೊರೊನಾ ಆತಂಕ ಬಿಡಿ, ಎಚ್ಚರಿಕೆಯಿಂದ ಇರಿ. ಇದೇ ಮೂರನೇ ಅಲೆ ಗೆಲ್ಲುವ ಸುಲಭ ದಾರಿ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಟಿಬಿ ಜಯಚಂದ್ರ ಹಾಗೂ ಕೆಲ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢ
ಇದನ್ನೂ ಓದಿ: Anitha Kumaraswamy: ಶಾಸಕಿ ಅನಿತಾ ಕುಮಾರಸ್ವಾಮಿಗೆ ಕೊರೊನಾ ಪಾಸಿಟಿವ್
Published On - 4:47 pm, Sat, 15 January 22