AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್​​ ನಲ್ಲಿ ವಾಲ್ಮೀಕಿ, ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿ; ಪ್ರಲ್ಹಾದ ಜೋಶಿ ಕಿಡಿ

ಸಂಸತ್​ನಲ್ಲಿ ರಾಜ್ಯದ ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿಪಡಿಸಿತು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಕಿಡಿಕಾರಿದ್ದಾರೆ. ಈ ಎರಡೂ ಹಗರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದು, ಇದು ಕಾಂಗ್ರೆಸ್ಸಿನ ಭ್ರಷ್ಟ ವ್ಯವಸ್ಥೆ ಬಹಿರಂಗಪಡಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.

ಸಂಸತ್​​ ನಲ್ಲಿ ವಾಲ್ಮೀಕಿ, ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿ; ಪ್ರಲ್ಹಾದ ಜೋಶಿ ಕಿಡಿ
ಪ್ರಲ್ಹಾದ ಜೋಶಿ
ಕಿರಣ್ ಹನುಮಂತ್​ ಮಾದಾರ್
|

Updated on: Jul 26, 2024 | 9:34 PM

Share

ನವದೆಹಲಿ, ಜು.26: ಸಂಸತ್ ಅಧಿವೇಶನದಲ್ಲಿ ಇಂದು (ಶುಕ್ರವಾರ) ರಾಜ್ಯದ ವಾಲ್ಮೀಕಿ ನಿಗಮ ಮತ್ತು ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿಪಡಿಸಿತು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ(Pralhad Joshi) ಕಿಡಿಕಾರಿದರು. ಸಂಸತ್ ಅವರಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಮುಡಾ ಮತ್ತು ವಾಲ್ಮೀಕಿ ಹಗರಣಗಳು ಕಾಂಗ್ರೆಸ್ಸಿನ ಭ್ರಷ್ಟ ವ್ಯವಸ್ಥೆ ಮತ್ತು ಕಾರ್ಯವೈಖರಿಯನ್ನು ಬಹಿರಂಗಪಡಿಸುತ್ತವೆ ಎಂದು ಹೇಳಿದರು.

ಹಗರಣಗಳಲ್ಲಿ ಸಿದ್ದರಾಮಯ್ಯ ಭಾಗಿ ಆರೋಪ

ಈ ಎರಡೂ ಹಗರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದು, ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆಗೆ ತರಲು ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್ ಮತ್ತು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಯತ್ನಿಸಿದರು. ಆದರೆ, ಕಾಂಗ್ರೆಸ್ ನಾಯಕರು ಗದ್ದಲ ಎಬ್ಬಿಸಿ ಅವರನ್ನು ಮೌನವಾಗಿಸಿದರು ಎಂದು ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ

“ರಾಮ” ನೆಂದರೆ ಕಾಂಗ್ರೆಸ್​ಗೆ ಹಗೆ

‘ರಾಮ’ ಎಂದರೆ ಕಾಂಗ್ರೆಸ್ ಹಗೆ ಸಾಧಿಸುತ್ತದೆ. ಹಾಗಾಗಿಯೇ ಇಂದು ನಡೆದ ರಾಜ್ಯ ಸಂಪುಟ ಸಭೆಯಲ್ಲಿ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸಲು ಕರ್ನಾಟಕ ಸರ್ಕಾರ ನಿರ್ಧಾರ ಕೈಗೊಂಡಿದೆ. ರಾಜ್ಯ ಸಚಿವ ಸಂಪುಟದ ಈ ತೀರ್ಮಾನ ಕಾಂಗ್ರೆಸ್​ಗೆ ಇರುವ ಹಗೆಯನ್ನು ತೋರಿಸುತ್ತದೆ. ಇವರ ಈ ನಿರ್ಧಾರ ಅವರ ರಿಯಲ್ ಎಸ್ಟೇಟ್ ಹಿತಾಸಕ್ತಿಗಳನ್ನು ಕಾಪಾಡುವ ರಾಜಕೀಯ ತಂತ್ರವಷ್ಟೇ ಎಂದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ