ಅನುಮತಿ ಪಡೆದಿದ್ದೆ ಬೇರೆ, ಕಾರ್ಯಕ್ರಮ ಮಾಡುತ್ತಿವುದೇ ಬೇರೆ: RSS ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಆಕ್ಷೇಪ!

ಬೆಂಗಳೂರಿನ ​ ವೈಯ್ಯಾಲಿಕಾವಲ್‌ನಲ್ಲಿರುವ ಕರ್ನಲ್ ವಸಂತ್ ಕ್ರೀಡಾಂಗಣದಲ್ಲಿ ಕ್ರೀಡಾ ಕಾರ್ಯಕ್ರಮ ನಡೆಸುವುದಾಗಿ ಆರ್​ಆರ್​ಎಸ್ ಅನುಮತಿ ಪಡೆದುಕೊಂಡಿದೆ. ಆದ್ರೆ, ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಜನ್ಮದಿನದ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್​ ಆರೋಪಿಸಿದೆ. ಅಲ್ಲದೇ ಈ ಕಾರ್ಯಕ್ರಮ ಅನುಮತಿ ಹೇಗೆ ಕೊಟ್ಟಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಹೀಗಾಗಿ ಸ್ಥಳದಲ್ಲಿ ಗದ್ದಲ ಉಂಟಾಗಿದೆ.

ಅನುಮತಿ ಪಡೆದಿದ್ದೆ ಬೇರೆ, ಕಾರ್ಯಕ್ರಮ ಮಾಡುತ್ತಿವುದೇ ಬೇರೆ: RSS ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಆಕ್ಷೇಪ!
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 09, 2024 | 6:26 PM

ಬೆಂಗಳೂರು, (ಏಪ್ರಿಲ್ 10): ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ಕಾವು ಜೋರಾಗಿದೆ. ಈ ವೇಳೆ ಬೆಂಗಳೂರಿನ ವೈಯ್ಯಾಲಿಕಾವಲ್‌ನ ಕರ್ನಲ್ ವಸಂತ್ ಕ್ರೀಡಾಂಗಣದಲ್ಲಿ ಆರ್‌ಎಸ್‌ಎಸ್‌ (RSS) ವತಿಯಿಂದ ಇಂದು ( ಏಪ್ರಿಲ್‌ 9) ಆಯೋಜನೆ ಮಾಡಲಾಗಿರುವ ಯುಗಾದಿ ಉತ್ಸವ (Ugadi Festival) ಕಾರ್ಯಕ್ರಮಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಈ ರೀತಿ ಕಾರ್ಯಕ್ರಮ ಹೇಗೆ ಮಾಡಲು ಅನುಮತಿ ನೀಡಲಾಗಿದೆ ಎಂದು ಪೊಲೀಸರಿಗೆ ಪ್ರಶ್ನಿಸಿದ್ದಾರೆ. ಇದರಿಂದ ಕಾರ್ಯಕ್ರಮಕ್ಕಾಗಿ ಹಾಕಲಾಗಿದ್ದ ಪೆಂಡಾಲ್‌ ಹಾಗೂ ಮೈಕ್‌ ಅನ್ನು ಬಿಬಿಎಂಪಿ ಹಾಗೂ ಚುನಾವಣಾ ಅಧಿಕಾರಿಗಳು ತೆಗೆಸಿದ್ದು, ಕಾರ್ಯಕ್ರಮ ಮುಂದುರೆದಿದೆ. ಇನ್ನು ಮುನ್ನಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

RSS ಕಾರ್ಯಕ್ರಮಕ್ಕೆ ‘ಕೈ’ ಕಾರ್ಯಕರ್ತರ ವಿರೋಧ

ಕ್ರೀಡಾ ಕಾರ್ಯಕ್ರಮಕ್ಕೆ ಅನುಮತಿ ಪಡೆದು ಆರ್​ಎಸ್ಎಸ್ ಕಾರ್ಯಕ್ರಮ ಮಾಡಲಾಗುತ್ತಿದೆ. ಆರೆಸ್ಸೆಸ್ ಸಂಸ್ಥಾಪಕ ಹೆಡ್ಗೇವಾರ್ ಜನ್ಮದಿನದ ಅಂಗವಾಗಿ ಈ ಕಾರ್ಯಕ್ರಮ ನಡೆಯುತ್ತಿದೆ ಎಂದು ಬಿಬಿಎಂಪಿ ವಿರುದ್ಧ ಕಾಂಗ್ರೆಸ್ ಮುಖಂಡ ಅನೂಪ್ ಅಯ್ಯಂಗಾರ್ ಕಿಡಿಕಾರಿದ್ದಾರೆ.

ಬಿಬಿಎಂಪಿ ಅಧಿಕಾರಿಗಳು ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ. ಕಾರ್ಯಪಾಲಕ ಅಭಿಯಂತರ ಜಯಶಂಕರ್ ಅನುಮತಿ ನೀಡಿದ್ದಾರೆ ಎಂದು ಕಾರ್ಯಕ್ರಮ ಆಯೋಜಕರು ಅನುಮತಿ ಕೊಟ್ಟಿರುವ ಬಗ್ಗೆ ಹೇಳುತ್ತಿದ್ದಾರೆ. ಇಇ ಜಯಶಂಕರ್​ರನ್ನು ನಾವು ಕೇಳಿದ್ರೆ ಅನುಮತಿ ನೀಡಿಲ್ಲ ಅಂತಿದ್ದಾರೆ. ಹಾಗಾದರೆ ಇವರು ಫೋರ್ಜರಿ ಮಾಡಿ ಕಾರ್ಯಕ್ರಮ ಮಾಡುತ್ತಿದ್ದಾರಾ? ಎಂದು ಪ್ರಶ್ನಿಸಿದ ಅನೂಪ್ ಅಯ್ಯಂಗಾರ್, ಮೈದಾನದಲ್ಲಿ ಸ್ಟೇಜ್ ಹಾಕಿ ಆರ್​ಎಸ್​ಎಸ್ ಕಾರ್ಯಕ್ರಮ ಮಾಡುತ್ತಿದ್ದಾರೆ ನಾವು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಮಾತ್ರ ಪ್ರಶ್ನಿಸುತ್ತಿದ್ದೇವೆ. RSS ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದ ಎಎ ಅಮಾನತು ಮಾಡಬೇಕು. ಇಇ ಜಯಶಂಕರ್ ಅಮಾನತು ಮಾಡದಿದ್ದರೆ ದೊಡ್ಡಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್‌ ಆಕ್ಷೇಪ ಏಕೆ?

ಕಳೆದ ಎರಡು ದಿನಗಳ ಹಿಂದೆ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವನ್ನು ಆಯೋಜನೆ ಮಾಡಲು ಅನುಮತಿಗೆ ನಿರಾಕರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಹೇಗೆ ಆರ್​ಎಸ್​ಎಸ್​ ಕಾರ್ಯಕ್ರಮಕ್ಕೆ ಅನುಮತಿ ಕೊಡಲಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. ಹೀಗಾಗಿ ಮಲತಾಯಿ ಧೋರಣೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ವೈಯ್ಯಾಲಿಕಾವಲ್ ಠಾಣೆ ಪೊಲೀಸರಿಂದ ಬಿಗಿ ಭದ್ರತೆ ಒದಗಿಸಲಾಗಿದೆ.

ನಲಪಾಡ್ ಹೇಳಿದ್ದೇನು?

ಕಾಂಗ್ರೆಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಬಗ್ಗೆ ವಾಗ್ದಾದವಾಗುತ್ತಿದ್ದಂತೆಯೇ ಸ್ಥಳಕ್ಕೆ ಕಾಂಗ್ರೆಸ್​ ಯೂತ್ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್​ ಭೇಟಿ ನೀಡಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ನಲಪಾಡ್, ನಾವು ಕಾರ್ಯಕ್ರಮ ಮಾಡಲು ಕೆಲ ದಿನಗಳ ಹಿಂದೆ ಮನವಿ ಮಾಡಿದ್ದೆವು. ಆದರೆ, ನೀತಿ ಸಂಹಿತೆ ಇರುವುದರಿಂದ ಅನುಮತಿ ಕೊಡಲಿಲ್ಲ. ಅಲ್ಲದೆ, ಭಾನುವಾರ ಆಟದ ಮೈದಾನವು ಆಟಕ್ಕೆ ಮಾತ್ರ ಮೀಸಲು ಎಂಬ ನಿಯಮ ಇದೆ. ಹೀಗಾಗಿ ನಾವು ಬಿಬಿಎಂಪಿ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಚುನಾವಣಾ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಕಾರ್ಯಕ್ರಮ ನಡೆಸಲು ಅವಕಾಶ ಕೊಡಬಾರದು ಎಂದು ಮನವಿ ಮಾಡಿದ್ದೇವೆ. ಬೆಂಗಳೂರು ಉಸ್ತುವಾರಿ ಸಚಿವರ ಗಮನಕ್ಕೂ ತಂದಿದ್ದೇವೆ ಎಂದು ಹೇಳಿದರು.

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ