ಪಠ್ಯ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ; ಜೂ.15ರಂದು ತೀರ್ಥಹಳ್ಳಿಯಿಂದ ಕುಪ್ಪಳ್ಳಿವರೆಗೆ ಪಾದಯಾತ್ರೆಗೆ ನಿರ್ಧಾರ

ರಾಜ್ಯದಲ್ಲಿ ಬಿಜೆಪಿಯವರು ಅಶಾಂತಿ ಮೂಡಿಸುತ್ತಿದ್ದಾರೆ. ಮಹನೀಯರ ತ್ಯಾಗ ಬಲಿದಾನಕ್ಕೆ ಅವಮಾನ ಮಾಡಿದ್ದಾರೆ. ಶಾಂತಿಯ ತೋಟ ನೆಲೆಸಬೇಕೆಂದು ಹೋರಾಟ ಮಾಡ್ತಿದ್ದೇವೆ. ನಿಮ್ಮ ಆರ್ಎಸ್ಎಸ್ ಅಜೆಂಡಾ ನಮಗೆ ಬೇಡವೇ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಡಿಕೆಶಿ ಆಗ್ರಹಿಸಿದ್ದಾರೆ.

ಪಠ್ಯ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ; ಜೂ.15ರಂದು ತೀರ್ಥಹಳ್ಳಿಯಿಂದ ಕುಪ್ಪಳ್ಳಿವರೆಗೆ ಪಾದಯಾತ್ರೆಗೆ ನಿರ್ಧಾರ
ಪಠ್ಯ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
Follow us
TV9 Web
| Updated By: ಆಯೇಷಾ ಬಾನು

Updated on: Jun 09, 2022 | 12:28 PM

ಬೆಂಗಳೂರು: ಪಠ್ಯ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ನಾಯಕರು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಬಿ.ಕೆ.ಹರಿಪ್ರಸಾದ್ ಸೇರಿದಂತೆ ‘ಕೈ’ ಶಾಸಕರು ಭಾಗಿಯಾಗಿದ್ದಾರೆ. ಪಠ್ಯ ಪರಿಷ್ಕರಣೆಯಲ್ಲಿ ಮಹನೀಯರಿಗೆ ಅವಮಾನ ಹಿನ್ನೆಲೆ ಪರಿಷ್ಕೃತ ಪಠ್ಯಪುಸ್ತಕ ವಾಪಸ್ ಪಡೆಯುವಂತೆ ಆಗ್ರಹ ಕಾಂಗ್ರೆಸ್ ಧರಣಿ ನಡೆಸುತ್ತಿದೆ. ಹಿಂದೆ ಇದ್ದ ಪಠ್ಯಪುಸ್ತಕವನ್ನೇ ವಿದ್ಯಾರ್ಥಿಗಳಿಗೆ ನೀಡುವಂತೆ ಕಾಂಗ್ರೆಸ್ ನಾಯಕರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇನ್ನು ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಪಠ್ಯ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿಯವರು ಅಶಾಂತಿ ಮೂಡಿಸುತ್ತಿದ್ದಾರೆ. ಮಹನೀಯರ ತ್ಯಾಗ ಬಲಿದಾನಕ್ಕೆ ಅವಮಾನ ಮಾಡಿದ್ದಾರೆ. ಶಾಂತಿಯ ತೋಟ ನೆಲೆಸಬೇಕೆಂದು ಹೋರಾಟ ಮಾಡ್ತಿದ್ದೇವೆ. ದೊಡ್ಡವರ ಹೆಸರನ್ನು ಅಳಿಸುವ ಪ್ರಯತ್ನ ನಡೆಯುತ್ತಿದೆ. ನಮ್ಮ ಹೋರಾಟ ಸಾಮಾಜಿಕ ನ್ಯಾಯದ ಪರವಾಗಿದೆ. ಇದು ರಾಜ್ಯದ ಜನರ ಸ್ವಾಭಿಮಾನದ ಪ್ರಶ್ನೆ. ಹಳೆಯ ಪಠ್ಯಪುಸ್ತಕಗಳನ್ನೇ ವಿದ್ಯಾರ್ಥಿಗಳಿಗೆ ನೀಡಬೇಕು. ಈಗಿನ ಹೊಸ ಪಠ್ಯಪುಸ್ತಕ ಕಸದ ಬುಟ್ಟಿಗೆ ಎಸೆಯಬೇಕು. ಕೂಡಲೇ ಸರ್ಕಾರ ನೂತನ ಪಠ್ಯಪುಸ್ತಕ ಹಿಂಪಡೆಯಬೇಕು. ಇದು ರಾಜ್ಯದ ಜನರ ನಂಬಿಕೆಗೆ ಹೊಡೆತ ಬಿದ್ದಿದೆ. ನಿಮ್ಮ ಆರ್ಎಸ್ಎಸ್ ಅಜೆಂಡಾ ನಮಗೆ ಬೇಡವೇ ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿ ರಾಜೀನಾಮೆಗೆ ಡಿಕೆಶಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ವ್ಯತ್ಯಾಸ ನೋಡಿ!; ED ನೋಟಿಸ್​ಗೆ ಹೋರಾಟಕ್ಕೆ ಕರೆ ಕೊಟ್ಟ ರಾಹುಲ್ ಗಾಂಧಿ: 2010ರಲ್ಲಿ SIT ತನಿಖೆಗೆ ಸಹಕರಿಸಿದ್ದ ಮೋದಿ

ಪಠ್ಯ ಪರಿಷ್ಕರಣೆ ವಿರೋಧಿಸಿ ಸಾಂಕೇತಿಕ ಧರಣಿ ನಡೆಸಿದ್ದೇವೆ. ರೋಹಿತ್ ಚಕ್ರತೀರ್ಥ ಸಮಿತಿಯನ್ನು ಸರ್ಕಾರ ವಜಾ ಮಾಡಬೇಕು. ಇತಿಹಾಸವನ್ನು ತಿರುಚುವ ಕೆಲಸ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರ ಹಾಕಿದ್ದಾರೆ. ಬಸವಣ್ಣ, ಅಂಬೇಡ್ಕರ್, ಭಗತ್ ಸಿಂಗ್, ನಾರಾಯಣಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ಬಗ್ಗೆ ಪಠ್ಯದಲ್ಲಿ ಬದಲಾವಣೆ ಮಾಡಲಾಗಿದೆ. ಇದನ್ನು ಸಾಹಿತಿಗಳು, ಮಠಾಧೀಶರು ವಿರೋಧ ಮಾಡಿದ್ದಾರೆ. ಇವರ ಬೆಂಬಲಕ್ಕೆ ಕಾಂಗ್ರೆಸ್ ನಿಂತಿದೆ. ಪಠ್ಯವನ್ನು ಕೇಸರೀಕರಣಗೊಳಿಸಲು ನಾವು ಬಿಡುವುದಿಲ್ಲ. ಮಕ್ಕಳ ಜ್ಞಾನವನ್ನು ಹಾಳು ಮಾಡುವ ಕೆಲಸ ಆಗಬಾರದು. ಹಿಂದಿನ ಪಠ್ಯ ಪುಸ್ತಕಗಳನ್ನೇ ಮಕ್ಕಳಿಗೆ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸಿದ್ದರಾಮಯ್ಯ ಹೇಳಿದ್ರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜ್ಯದಲ್ಲಿ ಪ್ರತಿಭಟನೆ ಇನ್ನಷ್ಟು ತೀವ್ರಗೊಳಿಸಲು ‘ಕೈ’ ನಿರ್ಧಾರ ಇನ್ನು ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲು ‘ಕೈ’ ನಿರ್ಧಾರ ಮಾಡಿದೆ. ಕುವೆಂಪು ಅವರಿಗೆ ಅಗೌರವ ಹಿನ್ನೆಲೆ ತೀರ್ಥಹಳ್ಳಿಯಿಂದ ಕುಪ್ಪಳ್ಳಿವರೆಗೆ ಪಾದಯಾತ್ರೆಗೆ ಕಾಂಗ್ರೆಸ್ ಮುಂದಾಗಿದೆ. ಬಳಿಕ ಕುಪ್ಪಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದೆ. ಜೂ.15ರಂದು ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯಲಿದ್ದು ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ & ರಮೇಶ್ ಕುಮಾರ್ ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಕುವೆಂಪು ಹುಟ್ಟೂರಿನಿಂದಲೇ ಬಿಜೆಪಿಗೆ ಟಾಂಗ್ ನೀಡಲು ಕಾಂಗ್ರೆಸ್ ಸಜ್ಜಾಗಿದೆ. ನೂತನ ಪಠ್ಯ ಪುಸ್ತಕದಲ್ಲಿ ಬಸವಣ್ಣನವರಿಗೆ ಅಪಮಾನ ಹಿನ್ನೆಲೆ ಬೀದರ್ ಜಿಲ್ಲೆ ಬಸವಕಲ್ಯಾಣದಿಂದಲೂ ಹೋರಾಟಕ್ಕೆ ಪ್ಲ್ಯಾನ್ ನಡೆದಿದ್ದು ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಹೋರಾಟ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬಸವಕಲ್ಯಾಣದಲ್ಲಿ ಪಾದಯಾತ್ರೆ ಅಥವಾ ಸಮಾವೇಶಕ್ಕೆ ಚಿಂತನೆ ನಡೆದಿದ್ದು ಶೀಘ್ರದಲ್ಲೇ ಹೋರಾಟದ ದಿನಾಂಕ ನಿಗದಿಪಡಿಸಲಾಗುವುದು ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಸಾರಿಗೆ ಸಚಿವ ಶ್ರೀರಾಮುಲು ಅಂಜನಾದ್ರಿ ಬೆಟ್ಟ ಹತ್ತಿ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದರು

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ