ಫೆ 7ರಂದು ದಿಲ್ಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಸರ್ಕಾರ ವಿರುದ್ಧ ಪ್ರತಿಭಟನೆಗೆ ಬಿಜೆಪಿ ನಿರ್ಧಾರ

ಫೆ.7ರಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಫೆ.6ರಂದು ರಾಜ್ಯ ಕಾಂಗ್ರೆಸ್​ನಿಂದ ದೆಹಲಿ ಚಲೋ ಪ್ರತಿಭಟನೆಗೆ ಡಿಸಿಎಂ ಡಿಕೆ ಶಿವಕುಮಾರ್​ ಘೋಷಣೆ ಹಿನ್ನೆಲೆ ವಿಧಾನಸೌಧದಲ್ಲಿ ಬಿಜೆಪಿ ಶಾಸಕರು ಪ್ರತಿಭಟನೆಗೆ ನಿರ್ಧಾರ ಮಾಡಿದ್ದಾರೆ.

ಫೆ 7ರಂದು ದಿಲ್ಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಇದಕ್ಕೆ ಪ್ರತಿಯಾಗಿ ರಾಜ್ಯದಲ್ಲಿ ಸರ್ಕಾರ ವಿರುದ್ಧ ಪ್ರತಿಭಟನೆಗೆ ಬಿಜೆಪಿ ನಿರ್ಧಾರ
ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 02, 2024 | 9:28 PM

ಬೆಂಗಳೂರು, ಫೆಬ್ರುವರಿ 2: ಕೇಂದ್ರ ಸರ್ಕಾರದ ತಾರತಮ್ಯ ನೀತಿ ವಿರೋಧಿಸಿ ಫೆ.6ರಂದು ರಾಜ್ಯ ಕಾಂಗ್ರೆಸ್​ನಿಂದ ದೆಹಲಿ ಚಲೋ ಹಿನ್ನೆಲೆ ಫೆ.7ರಂದು ವಿಧಾನಸೌಧದಲ್ಲಿ ಬಿಜೆಪಿ (BJP) ಶಾಸಕರು ಪ್ರತಿಭಟನೆಗೆ ನಿರ್ಧಾರ ಮಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರ ಪ್ರತಿಭಟನೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಫೆಬ್ರವರಿ 7ರಂದು ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ ಮಾಡಿದ್ದಾರೆ.

ರೈತ ವಿರೋಧಿ ಸರ್ಕಾರದ ವಿರುದ್ಧ ಪ್ರತಿಭಟನೆ: ಮಾಜಿ ಸಚಿವ ಸಿ.ಟಿ. ರವಿ

ಈ ಕುರಿತಾಗಿ ಮಾಜಿ ಸಚಿವ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದು, ಫೆ. 7 ರಂದು ನಮ್ಮ ಶಾಸಕರು ರೈತ ವಿರೋಧಿ ಸರ್ಕಾರದ ವಿರುದ್ಧ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ಮಾಡುತ್ತಾರೆ. ಅಧಿವೇಶನದಲ್ಲಿ ಕೂಡ ಹೋರಾಟ ಮಾಡುತ್ತೇವೆ ಎಂದಿದ್ದಾರೆ.

ರಾಜ್ಯಸಭಾ ಚುನಾವಣೆಗೆ ರಾಷ್ಟ್ರೀಯ ಅಧ್ಯಕ್ಷರ ಜೊತೆ ಸಮಾಲೋಚನೆ ಮಾಡಿ ನಿರ್ಣಯ ತೆಗೆದುಕೊಳ್ಳುವ ಅಧಿಕಾರವನ್ನು ರಾಜ್ಯಾಧ್ಯಕ್ಷರಿಗೆ ಕೋರ್ ಕಮಿಟಿ ಕೊಟ್ಟಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫೆ.6ರಂದು ರಾಜ್ಯ ಕಾಂಗ್ರೆಸ್​ನಿಂದ ದೆಹಲಿ ಚಲೋ:​ ಪ್ರತಿಭಟನೆ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್​

ರಾಜ್ಯಸಭೆ ಎರಡನೇ ಸ್ಥಾನಕ್ಕೆ ಅಭ್ಯರ್ಥಿ ವಿಚಾರವಾಗಿ ಮಾತನಾಡಿದ್ದು, ಕೇಂದ್ರದ ಜೊತೆ ಸಮಾಲೋಚನೆ ಮಾಡಿ ನಿರ್ಧಾರ ಮಾಡಲು ರಾಜ್ಯಾಧ್ಯಕ್ಷರಿಗೆ ಅಧಿಕಾರ ಕೊಟ್ಟಿದ್ದೇವೆ ಎಂದರು.

ನಿಮ್ಮ ಡೋಂಗಿತನ, ನಾಟಕಕ್ಕೆ ರಾಜ್ಯದ ಜನ ಛೀಮಾರಿ ಹಾಕುತ್ತಿದ್ದಾರೆ: ಶಾಸಕ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ ವಾಗ್ದಾಳಿ

ಫೆ.7ರಂದು ದೆಹಲಿಯಲ್ಲಿ ಕಾಂಗ್ರೆಸ್ ಶಾಸಕರ ಪ್ರತಿಭಟನೆ ವಿಚಾರವಾಗಿ ಬೆಂಗಳೂರಿನಲ್ಲಿ BJP ಶಾಸಕ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ ಪ್ರತಿಕ್ರಿಯಿಸಿದ್ದು, ನಿಮ್ಮ ಡೋಂಗಿತನ, ನಾಟಕಕ್ಕೆ ರಾಜ್ಯದ ಜನ ಛೀಮಾರಿ ಹಾಕುತ್ತಿದ್ದಾರೆ. ದೇಶ ವಿಭಜನೆ ಹೇಳಿಕೆ ಕೊಟ್ಟ ಸುರೇಶ್​ರನ್ನು ಉಚ್ಚಾಟನೆ ಮಾಡಬೇಕಿತ್ತು. ಸಂವಿಧಾನ ಮೇಲೆ ಪ್ರಮಾಣವಚನ ಸ್ವೀಕರಿಸಿ ದೇಶ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಎಚ್‌ಡಿಕೆ ಕೇಸರಿ ಶಾಲು ಹಾಕಬಾರದಿತ್ತು ಎಂದ ದೇವೇಗೌಡರ ಬಗ್ಗೆ ಡಿಕೆಶಿ ಹೇಳಿದ್ದಿಷ್ಟು

ಡ್ರಾಮಾ, ಡೋಂಗಿ ಮಾಡುತ್ತಾ ರಾಜ್ಯವನ್ನು ಲೂಟಿ ಹೊಡೆಯುತ್ತಿದ್ದೀರಿ. ಗ್ಯಾರಂಟಿ ಮೂಲಕ ಜನರಿಗೆ ಹೆದರಿಸುವ ನಿಮ್ಮಂತಹವರು ಇರಬೇಕಾ? ನಿಮ್ಮದು ಒಂದು ಪಕ್ಷವೇ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ