ಆಪರೇಷನ್ ಕಮಲಕ್ಕೆ 500 ಕೋಟಿ ಹೆಚ್ಚಲ್ಲ, ಈಶ್ವರಪ್ಪ ಫೋಟೋ ಹಾಕಿ ನೋಟು ಬಿಡುಗಡೆ ಮಾಡಿದ ಕಾಂಗ್ರೆಸ್
ಸಿಎಂ ಹುದ್ದೆಗೆ 2,500 ಕೋಟಿ ಪಾವತಿಸುವಾಗ ಆಪರೇಷನ್ ಕಮಲಕ್ಕೆ 500 ಕೋಟಿ ಹೆಚ್ಚಲ್ಲ ಅಲ್ಲವೇ ಎಂದು ರಾಜ್ಯ ಕಾಂಗ್ರೆಸ್ ಬಿಜೆಪಿ ಶಾಸಕ ಈಶ್ವರಪ್ಪ ಫೋಟೋ ಹಾಕಿ ಕರೆನ್ಸಿ ನೋಟ್ವೊಂದನ್ನು ಹಂಚಿಕೊಂಡಿದೆ.
ಬೆಂಗಳೂರು: ಸಿಎಂ ಹುದ್ದೆಗೆ 2,500 ಕೋಟಿ ಪಾವತಿಸುವಾಗ ಆಪರೇಷನ್ ಕಮಲಕ್ಕೆ 500 ಕೋಟಿ ಹೆಚ್ಚಲ್ಲ ಅಲ್ಲವೇ ಎಂದು ಬಿಜೆಪಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಫೋಟೋ ಹಾಕಿ ಕರೆನ್ಸಿ ನೋಟೊಂದನ್ನು ರಾಜ್ಯ ಕಾಂಗ್ರೆಸ್ ಸಿದ್ದಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಶಾಸಕ ಸಂಗಮೇಶ್ಗೆ 500 ಕೋಟಿ ರೂ ಆಫರ್ ನೀಡಿದ್ದೇನೆ ಎಂಬ ಈಶ್ವರಪ್ಪ ಅವರ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಈ ರೀತಿಯಾಗಿ ವ್ಯಂಗ ಮಾಡಿದೆ ಎನ್ನಲಾಗುತ್ತಿದೆ. ಈಶ್ವರಪ್ಪ ಅವರೇ, ನೋಟ್ ಎಣಿಸುವ ಮೆಷಿನ್ ಇಟ್ಟಿದ್ದು ಆಪರೇಷನ್ ಕಮಲದ 500 ಕೋಟಿ ಎಣಿಸುವುದಕ್ಕಾ, 40% ಕಮಿಷನ್ ಲೂಟಿಯ ಹಣ ಎಣಿಸುವುದಕ್ಕಾ? 500 ಕೋಟಿ ಹೂಡಿಕೆ ಹಿಂತೆಗೆಯಲೆಂದೇ ಸಂತೋಷ್ ಪಾಟೀಲ್ ಜೀವ ತೆಗೆದಿರಾ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಸಿಎಂ ಹುದ್ದೆಗೆ 2,500 ಕೋಟಿ ಪಾವತಿಸುವಾಗ ಆಪರೇಷನ್ ಕಮಲಕ್ಕೆ 500 ಕೋಟಿ ಹೆಚ್ಚಲ್ಲ ಅಲ್ಲವೇ @BJP4Karnataka?@ikseshwarappa ಅವರೇ, ನೋಟ್ ಎಣಿಸುವ ಮೆಷಿನ್ ಇಟ್ಟಿದ್ದು ಆಪರೇಷನ್ ಕಮಲದ 500 ಕೋಟಿ ಎಣಿಸುವುದಕ್ಕಾ, 40% ಕಮಿಷನ್ ಲೂಟಿಯ ಹಣ ಎಣಿಸುವುದಕ್ಕಾ?
500 ಕೋಟಿ ಹೂಡಿಕೆ ಹಿಂತೆಗೆಯಲೆಂದೇ ಸಂತೋಷ್ ಪಾಟೀಲ್ ಜೀವ ತೆಗೆದಿರಾ? pic.twitter.com/raTEQbdEm8
— Karnataka Congress (@INCKarnataka) November 4, 2022
Published On - 5:17 pm, Fri, 4 November 22