AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಗೃಹ ಸಚಿವ ಪರಮೇಶ್ವರ್​​ ನೇತೃತ್ವದಲ್ಲಿ ಕಾಂಗ್ರೆಸ್​​ SC, ST ನಾಯಕರ ಸಭೆ

ದಲಿತ ಸಿಎಂ ಬೇಡಿಕೆ ಕುರಿತಾಗಿ ಸಮುದಾಯದಿಂದ ಹೈಕಮಾಂಡ್ ಮುಂದೆ ಹಕ್ಕು ಮಂಡನೆ ಬಗ್ಗೆ SC, ST ಸಚಿವರು, ಶಾಸಕರು ಹಾಗೂ ವಿಧಾನಪರಿಷತ್​ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಮುದಾಯದ 20ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದು, SCSP-TSP ಅನುದಾನ ವಿಚಾರ ಸೇರಿ ಹಲವು ಪ್ರಮುಖ ವಿಷಯಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ಆ ಕುರಿತ ಮಾಹಿತಿ ಇಲ್ಲಿದೆ.

ಕರ್ನಾಟಕ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ: ಗೃಹ ಸಚಿವ ಪರಮೇಶ್ವರ್​​ ನೇತೃತ್ವದಲ್ಲಿ ಕಾಂಗ್ರೆಸ್​​ SC, ST ನಾಯಕರ ಸಭೆ
ಗೃಹ ಸಚಿವ ಡಾ.ಜಿ. ಪರಮೆಶ್ವರ್​Image Credit source: Google
ಪ್ರಸನ್ನ ಗಾಂವ್ಕರ್​
| Edited By: |

Updated on:Feb 04, 2026 | 10:57 AM

Share

ಬೆಂಗಳೂರು, ಫೆಬ್ರವರಿ 04: ಕರ್ನಾಟಕ ರಾಜ್ಯ ವಿಧಾನ ಸಭಾ ವಿಶೇಷ ಅಧಿವೇಶನದ ಹೊತ್ತಲ್ಲಿಯೇ  ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಗೃಹ ಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ SC, ST ಸಚಿವರು, ಶಾಸಕರು ಹಾಗೂ ವಿಧಾನಪರಿಷತ್​ ಸದಸ್ಯರ ಸಭೆ ನಡೆದಿದೆ. ಈ ಹಿಂದೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೀಡಿದ್ದ ಸೂಚನೆ ಈ ಮೀಟಿಂಗ್​ ನಡೆದಿದೆ ಎನ್ನಲಾಗಿದ್ದು, ಅಧಿಕಾರ ಹಂಚಿಕೆ ವಿಚಾರ ಚರ್ಚೆ ಮಧ್ಯೆಯೇ ಈ ಸಭೆ ಮಹತ್ವ ಪಡೆದುಕೊಂಡಿದೆ.

ಖಾಸಗಿ ಹೋಟೆಲ್​​ನಲ್ಲಿ ಸಭೆ

ಸಚಿವರಾದ ಪರಮೇಶ್ವರ್, ಮುನಿಯಪ್ಪ, ಮಹದೇವಪ್ಪ, ಶಿವರಾಜ ತಂಗಡಗಿ, ಮಾಜಿ ಸಚಿವ ಕೆ.ಎನ್.ರಾಜಣ್ಣ ಸೇರಿ 20ಕ್ಕೂ ಹೆಚ್ಚು ಎಸ್‌ಸಿ, ಎಸ್‌ಟಿ ಶಾಸಕರು ಹಾಗೂ ಪರಿಷತ್ ಸದಸ್ಯರು ಸಭೆಯಲ್ಲಿ ಭಾಗಿಯಾಗಿದ್ದಾರೆ. SCSP-TSP ಅನುದಾನ ಬಳಕೆ ಕುರಿತು ಸಭೆ ಹೆಸರಲ್ಲಿ ಕಾಂಗ್ರೆಸ್​ನ SC, ST ಸಚಿವರು, ಶಾಸಕರು ಒಗ್ಗಟ್ಟಿನ ಶಕ್ತಿ ಪ್ರದರ್ಶನ ಮಾಡಿದ್ದು, SCSP-TSP ಅನುದಾನ ಬೇರೆ ಯೋಜನೆಗಳಿಗೆ ಬಳಸ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಜೆಟ್​ನಲ್ಲಿ SC, ST ಸಮುದಾಯಕ್ಕೆ ವಿಶೇಷ ಕೊಡುಗೆ‌ ನೀಡಬೇಕು. SCSP-TSP ಹಣ ಯಾವುದಕ್ಕೆ ಮೀಸಲಿದೆಯೋ ಅದಕ್ಕೇ ಬಳಸಬೇಕು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಭೇಟಿಯಾಗುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದ್ದು, ದಲಿತ ಸಿಎಂ ಬೇಡಿಕೆ ಕುರಿತಾಗಿ ಸಮುದಾಯದಿಂದ ಹೈಕಮಾಂಡ್ ಮುಂದೆ ಹಕ್ಕು ಮಂಡನೆ ಬಗ್ಗೆಯೂ ಸಮಾಲೋಚನೆ ಈ ವೇಳೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಎಸ್​ಸಿಎಸ್​ಪಿ-ಟಿಎಸ್​ಪಿಯ 9 ಸಾವಿರ ಕೋಟಿ ರೂ. ಹಣ ಗ್ಯಾರಂಟಿಗೆ ಬಳಸಿಕೊಂಡ ಸರ್ಕಾರ

SCSP, TSP ಹಣ ನೀಡದ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಈ ಹಿಂದೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ರೋಷಾವೇಶ ಪ್ರದರ್ಶಿಸಿದ್ದರು. ಎಸ್​ಸಿಎಸ್​ಪಿ, ಟಿಎಸ್​ಪಿಗೆ ಅನುದಾನ ಹಂಚಿಕೆ ಮಾಡದಿರುವುದು ಯಾಕೆ? ಏನು ಅಂದುಕೊಂಡಿದ್ದೀರಿ? SCSP, TSP ಹಣ ಬೇರೆ ಕಡೆ ಬಳಸುತ್ತಿದ್ದೀರಾ? ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ಏರುಧ್ವನಿಯಲ್ಲಿಯೇ ಸಚಿವರು ಪ್ರಶ್ನಿಸಿದ್ದು, ಮಹದೇವಪ್ಪ ಅವರ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ಕಕ್ಕಾಬಿಕ್ಕಿ ಆದ ಪ್ರಸಂಗ ನಡೆದಿತ್ತು. ಆ ಬೆನ್ನಲ್ಲಿಯೇ ಈಗ ಸಮುದಾಯದ ನಾಯಕರ ಸಭೆ ನಡೆದಿರೋದು ಭಾರೀ ಕುತೂಹಲ ಮೂಡಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 10:30 am, Wed, 4 February 26

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More