ಪೆಟ್ರೋಲ್, ಡೀಸೆಲ್‌ ಬೆಲೆ 100 ನಾಟೌಟ್! ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಪೆಟ್ರೋಲ್ ಪಿಕ್‌ಪಾಕೆಟ್ ಪ್ರತಿಭಟನೆ

Petrol Diesel price hike: ಭಾರತದಲ್ಲಿ ಇಂಧನ ದರ 100ರ ಗಡಿ ದಾಟಿದೆ. ಹೀಗಾಗಿ ಇಂಧನ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ಹಣದುಬ್ಬರ ವಿರುದ್ಧ ಕಾಂಗ್ರೆಸ್ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದೆ. ಎಲ್ಲಾ ಕೊವಿಡ್ ನಿಯಮಗಳನ್ನು ಅನುಸರಿಸಿ ಪ್ರತಿಭಟನೆ ಮಾಡಲು ಕಾರ್ಯಕರ್ತರಿಗೆ ಸೂಚಿಸಲಾಗಿದೆ.

ಪೆಟ್ರೋಲ್, ಡೀಸೆಲ್‌ ಬೆಲೆ 100 ನಾಟೌಟ್! ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಪೆಟ್ರೋಲ್ ಪಿಕ್‌ಪಾಕೆಟ್ ಪ್ರತಿಭಟನೆ
ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರಕಾರ ನಿರಂತರ ಪೆಟ್ರೋಲ್, ಡೀಸೆಲ್‌ ಬೆಲೆ ಏರಿಸುತ್ತಿರುವುದನ್ನು ಖಂಡಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಸಮೀಪ 100 ನಾಟೌಟ್, ಪೆಟ್ರೋಲ್ ಪಿಕ್‌ಪಾಕೆಟ್ ಪ್ರತಿಭಟನೆ ನಡೆಸಿತು. ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್ ಮತ್ತಿತರರು ಪಾಲ್ಗೊಂಡಿದ್ದಾರೆ. ಈ ಪ್ರತಿಭಟನೆಯೂ ಇಂದಿನಿಂದ ಹಂತ-ಹಂತವಾಗಿ ರಾಜ್ಯಾದ್ಯಂತ ಐದು ದಿನಗಳ ಕಾಲ ನಡೆಯಲಿದೆ. 

ಇನ್ನು ಬೆಂಗಳೂರಿನ ವಸಂತಪುರಂ ಪೆಟ್ರೋಲ್ ಬಂಕ್ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ಲೇಟ್ ಸ್ಪೂನ್ ಹಿಡಿದು ವಿಭಿನ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಪೆಟ್ರೋಲ್ ದರ ಇಳಿಸಬೇಕು ಪೆಟ್ರೋಲ್ ದರ ಏರಿಕೆ ಇಂದಾಗಿ ಸಾರ್ವಜನಿಕ ತೊಂದರೆಯಾಗ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸೆಕ್ಷನ್ 144 ಜಾರಿ ಇದ್ದರೂ ಪ್ರತಿಭಟನೆ ಹಿನ್ನೆಲೆಯಲ್ಲಿ ಹೈಗ್ರೌಂಡ್ಸ್ ಠಾಣೆ ಪೊಲೀಸರು ಕೈ ನಾಯಕರನ್ನು ವಶಕ್ಕೆ ಪಡೆದಿದ್ದು ಮುಚ್ಚಳಿಕೆ ಹಾಗೂ ಇತರ ಮಾಹಿತಿ ಪಡೆದು ಬಿಟ್ಟು ಕಳುಹಿಸಿದ್ದಾರೆ.

congress protest

ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ ಕಂಡಿಸಿ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರತಿಭಟನೆ

ಭಾರತದಲ್ಲಿ ಇಂಧನ ದರ 100ರ ಗಡಿ ದಾಟಿದೆ.  (Petrol Diesel price 100 not out) ಹೀಗಾಗಿ ಇಂಧನ ಬೆಲೆ ಏರಿಕೆ ಮತ್ತು ಹೆಚ್ಚುತ್ತಿರುವ ಹಣದುಬ್ಬರ ವಿರುದ್ಧ ಕಾಂಗ್ರೆಸ್ ಇಂದು ಸಾಂಕೇತಿಕ ಪ್ರತಿಭಟನೆ ನಡೆಸಿದೆ. ಎಲ್ಲಾ ಕೊವಿಡ್ ನಿಯಮಗಳನ್ನು ಅನುಸರಿಸಿ ಪ್ರತಿಭಟನೆ ಮಾಡಲು ಕಾರ್ಯಕರ್ತರಿಗೆ ಸೂಚಿಸಲಾಗಿದೆ.

ದೆಹಲಿಯಲ್ಲಿ ಪವನ್ ಬನ್ಸಾಲ್, ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ಹರೀಶ್ ರಾವತ್ ಮತ್ತು ಅಜಯ್ ಮಾಕೆನ್ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ಹಿರಿಯ ನಾಯಕರೊಂದಿಗೆ, ಯುವ ನಾಯಕರಾದ ಗೌರವ್ ಗೊಗೊಯ್, ದೇವೇಂದ್ರ ಯಾದವ್, ದೆಹಲಿ ಉಸ್ತುವಾರಿ ಶಕ್ತಿ ಸಿಂಗ್ ಗೋಹಿಲ್ ಕೂಡ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬೆಲೆ ಏರಿಕೆ, ತುರ್ತು ಬೇಡಿಕೆಯನ್ನು ಇಡೇರಿಸುವಂತೆ ಸಾಂಕೇತಿಕ ಪ್ರತಿಭಟನೆ ನಡೆಸಲು ರಾಜ್ಯ ಘಟಕಗಳಿಗೆ ಕರೆ ಕೊಟ್ಟಿದ್ದಾರೆ.

“ಹಿಂದಿನ ಯುಪಿಎ ಸರ್ಕಾರಕ್ಕೆ ಹೋಲಿಸಿದರೆ ಬಿಜೆಪಿ ಸರ್ಕಾರ ಅಬಕಾರಿ ಸುಂಕವನ್ನು ಪೆಟ್ರೋಲ್‌ಗೆ 23.87 ರೂ. ಮತ್ತು ಡೀಸೆಲ್‌ಗೆ 28.37 ರೂ.ಗಳನ್ನು ಹೆಚ್ಚಿಸಿದೆ. ತಪ್ಪು ನೀತಿಗಳು ಮತ್ತು ಭಾರಿ ತೆರಿಗೆಗಳಿಂದಾಗಿ ದೇಶದ ಅನೇಕ ಭಾಗಗಳಲ್ಲಿ ಪೆಟ್ರೋಲ್ ಬೆಲೆ 100 ರೂ ದಾಟಿದೆ. ಮತ್ತು ಡೀಸೆಲ್ ಬೆಲೆ ಲೀಟರ್ಗೆ 100 ರೂಗಳನ್ನು ದಾಟಲಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: Puri Rath Yatra 2021: ಕೊರೊನಾದ್ದೇ ಪ್ರತಾಪ… ಪುರಿ ಜಗನ್ನಾಥ ರಥ ಯಾತ್ರೆ ಈ ಬಾರಿಯೂ ಭಕ್ತರಿಲ್ಲದೆ ಭಣಗುಡಲಿದೆ!