Conjunctivitis: ಬೆಂಗಳೂರಿನಲ್ಲಿ ಕಾಂಜಂಕ್ಟಿವಿಟಿಸ್ ಪ್ರಕರಣ ಹೆಚ್ಚಳ ; ಪೋಷಕರಲ್ಲಿ ಹೆಚ್ಚಿದ ಆತಂಕ

|

Updated on: Jul 29, 2023 | 7:34 AM

ಪಿಂಕ್‌ ಐ ಅಥವಾ ಕಾಂಜಂಕ್ಟಿವಿಟಿಸ್ ಜನರಲ್ಲಿ ಆತಂಕ ಮೂಡಿಸಿದ್ದು, ಕಳೆದ ಮೂರ್ನಾಲ್ಕು ವಾರಗಳಲ್ಲಿ ಬೆಂಗಳೂರಲ್ಲಿ ಪ್ರಕರಣ ಏರಿಕೆಯಾಗುತ್ತಿದೆ.

Conjunctivitis: ಬೆಂಗಳೂರಿನಲ್ಲಿ ಕಾಂಜಂಕ್ಟಿವಿಟಿಸ್ ಪ್ರಕರಣ ಹೆಚ್ಚಳ ; ಪೋಷಕರಲ್ಲಿ ಹೆಚ್ಚಿದ ಆತಂಕ
ಕಾಂಜಂಕ್ಟಿವಿಟಿಸ್
Follow us on

ಬೆಂಗಳೂರು: ಪಿಂಕ್‌ ಐ ಅಥವಾ ಕಾಂಜಂಕ್ಟಿವಿಟಿಸ್ (Conjunctivitis) ಜನರಲ್ಲಿ ಆತಂಕ ಮೂಡಿಸಿದ್ದು, ಕಳೆದ ಮೂರ್ನಾಲ್ಕು ವಾರಗಳಲ್ಲಿ ಬೆಂಗಳೂರಿನಲ್ಲಿ (Bengaluru) ಪ್ರಕರಣ ಏರಿಕೆಯಾಗುತ್ತಿದೆ. ಕಳೆದ ಮೂರ್ನಾಲ್ಕು ವರ್ಷಗಳ ನಂತರ ಕಣ್ಣಿಗೆ ಬೇನೆ ಕಾಟ ಶುರುವಾಗಿದೆ. ಇದು ಹೆಚ್ಚಾಗಿ ಮಕ್ಕಳಲ್ಲಿ ಕಂಡುಬರುತ್ತಿದ್ದು, ಪೋಷಕರಲ್ಲಿ ತಳಮಳ ಶುರುವಾಗಿದೆ. ತೇವಾಂಶ ಹೆಚ್ಚಾದಾಗ ಅಥವಾ ಚಳಿಗಾಲದ ವಾತಾವರಣದಲ್ಲಿ ಹುಟ್ಟಿಕೊಳ್ಳುವ ಈ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮವನ್ನು ಉಂಟು ಮಾಡುತ್ತಿದೆ.

ಶಂಕರ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞ ಡಾ.ಆನಂದ್ ಬಾಲಸುಬ್ರಮಣ್ಯಂ ಮಾತನಾಡಿ, ಕಳೆದ ಮೂರು ವಾರಗಳಲ್ಲಿ ರೋಗಿಗಳ ಸಂಖ್ಯೆ ಶೇ.50ರಷ್ಟು ಹೆಚ್ಚಿದೆ, ಆದರೆ ಒಂದು ವಾರದಲ್ಲಿ ಶೇ.90ರಷ್ಟು ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಮಳೆಗಾಲದಲ್ಲಿ ಕಂಡುಬರುವ ಕಾಂಜಂಕ್ಟಿವಿಟಿಸ್ ಸೋಂಕು ಎಂದರೇನು? ತಜ್ಞರು ನೀಡಿರುವ ಮಾಹಿತಿ ಇಲ್ಲಿದೆ

ಹೆಚ್ಚಿನವರಿಗೆ ರೋಗವು ಸ್ವಾಭಾವಿಕವಾಗಿ ಪರಿಹಾರವಾಗಿದ್ದರೂ, ವೈದ್ಯರ ಸಲಹೆಯನ್ನು ಪಡೆಯುವುದು ಮುಖ್ಯವಾಗಿದೆ. ಆಸ್ಪತ್ರೆಯು ನಮ್ಮ ನಾಲ್ಕು ಆಸ್ಪತ್ರೆಗಳಲ್ಲಿ ದಿನಕ್ಕೆ ಸುಮಾರು 100 ಕಾಂಜಂಕ್ಟಿವಿಟಿಸ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರಲ್ಲಿ 35-40 ಪ್ರತಿಶತ ಮಕ್ಕಳಿದ್ದಾರೆ. ಈ ರೋಗಕ್ಕೆ ತುತ್ತಾದವರು ಚೇತರಿಸಿಕೊಳ್ಳಲು ಆರು ತಿಂಗಳಿಂದ ಒಂದು ವರ್ಷ ತೆಗೆದುಕೊಳ್ಳಬಹುದು ಎಂದು ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ ರೋಹಿತ್ ಶೆಟ್ಟಿ ಹೇಳಿದರು.

ಅಲರ್ಜಿ, ಆಸ್ತಮಾ ಮತ್ತು ಒಣ ಕಣ್ಣುಗಳಂತಹ ಗುಣಲಕ್ಷಣಗಳನ್ನು ಹೊಂದಿರುವ ರೋಗಿಗಳು ಮತ್ತು ಕಾಂಟ್ಯಾಕ್ಟ್ ಲೆನ್ಸ್‌ಗಳನ್ನು ಬಳಸುವವರು ಆಕ್ರಮಣಕಾರಿ ಕಾಂಜಂಕ್ಟಿವಿಟಿಸ್‌ಗೆ ಹೆಚ್ಚು ಗುರಿಯಾಗುತ್ತಾರೆ. ಈ ರೋಗ ಹರಡವುದನ್ನು ತಡೆಗಟ್ಟಲು ಕೈ ತೊಳೆಯುತ್ತಿರಬೇಕು. ರೋಗಕ್ಕೆ ತುತ್ತಾದ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ ಎಂದು ವೈದ್ಯರು ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ