ಮುರುಘಾಶ್ರೀ ವಿರುದ್ಧ ಪಿತೂರಿ ಪ್ರಕರಣ: ಬಸವರಾಜನ್ ದಂಪತಿ ವಿರುದ್ದ ದಾಖಲಾಗಿದ್ದ ಕೇಸ್​ ರದ್ದುಪಡಿಸಿದ ಹೈಕೋರ್ಟ್​

| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 03, 2023 | 2:49 PM

ಚಿತ್ರದುರ್ಗದ ಮುರುಘಾಮಠ(Murugha Mutt)ದ ಮಾಜಿ ಆಡಳಿತಾಧಿಕಾರಿ ಎಸ್.ಕೆ ಬಸವರಾಜನ್ ಮೊಬೈಲ್‌ನಲ್ಲಿನ ಸಂಭಾಷಣೆ ಆಧರಿಸಿ ಎಫ್ಐಆರ್ ದಾಖಲಿಸಲಾಗಿತ್ತು. ಬಳಿಕ ಈ ಪ್ರಕರಣ ರದ್ದು ಕೋರಿ ಎಸ್.ಕೆ.ಬಸವರಾಜನ್ ಹಾಗೂ ಸೌಭಾಗ್ಯ ದಂಪತಿ ಮನವಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಅವರ ಅರ್ಜಿ ಪುರಸ್ಕರಿಸಿ ಪ್ರಕರಣವನ್ನು ರದ್ದುಪಡಿಸಿದೆ.

ಮುರುಘಾಶ್ರೀ ವಿರುದ್ಧ ಪಿತೂರಿ ಪ್ರಕರಣ: ಬಸವರಾಜನ್ ದಂಪತಿ ವಿರುದ್ದ ದಾಖಲಾಗಿದ್ದ ಕೇಸ್​ ರದ್ದುಪಡಿಸಿದ ಹೈಕೋರ್ಟ್​
ಬಸವರಾಜನ್ ದಂಪತಿ ,ಮುರುಘಾಶ್ರೀ
Follow us on

ಬೆಂಗಳೂರು, ನ.03: ಮುರುಘಾ ಶ್ರೀ ವಿರುದ್ಧ ಷಡ್ಯಂತ್ರ ನಡೆಸಿದ ಆರೋಪದ ಮೇಲೆ ಎಸ್.ಕೆ ಬಸವರಾಜನ್ (S.K.Basavarajan) ದಂಪತಿ ಮೇಲೆ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಚಿತ್ರದುರ್ಗದ ಮುರುಘಾಮಠ(Murugha Mutt)ದ ಮಾಜಿ ಆಡಳಿತಾಧಿಕಾರಿ ಎಸ್.ಕೆ ಬಸವರಾಜನ್ ಮೊಬೈಲ್‌ನಲ್ಲಿನ ಸಂಭಾಷಣೆ ಆಧರಿಸಿ ಎಫ್ಐಆರ್ ದಾಖಲಿಸಲಾಗಿತ್ತು. ಬಳಿಕ ಈ ಪ್ರಕರಣ ರದ್ದು ಕೋರಿ ಎಸ್.ಕೆ.ಬಸವರಾಜನ್ ಹಾಗೂ ಸೌಭಾಗ್ಯ ದಂಪತಿ ಮನವಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಅವರ ಅರ್ಜಿ ಪುರಸ್ಕರಿಸಿ ಪ್ರಕರಣವನ್ನು ರದ್ದುಪಡಿಸಿದೆ.

ಘಟನೆ ವಿವರ

ಎಸ್.ಕೆ.ಬಸವರಾಜನ್ ಮುರುಘಾ ಶ್ರೀಗಳ ವಿರುದ್ಧ ಪಿತೂರಿ ನಡೆಸಿರುವುದು ಬಹಿರಂಗಗೊಂಡಿತ್ತು. ಶ್ರೀಗಳ ವಿರುದ್ಧ ಸುಳ್ಳು ಕೇಸ್‌ ದಾಖಲಿಸಲು ಸಂತ್ರಸ್ತೆಗೆ ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಪ್ರಚೋದನೆ ನೀಡಿದ್ದ ಆಡಿಯೋ ವೈರಲ್ ಆಗಿತ್ತು. ಈ ಸಂಬಂಧ ನ.9ರಂದು ಮುರುಘಾಮಠದ ಉಸ್ತುವಾರಿ ಬಸವಪ್ರಭುಶ್ರೀ ಅವರು ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ನವೆಂಬರ್ 10ರಂದು ಬಸವರಾಜೇಂದ್ರ ಬಂಧಿಸಿ ಪೊಲೀಸರ ವಿಚಾರಣೆ ಆರಂಭಿಸಿದ್ದರು. ಮುರುಘಾ ಶ್ರೀ ವಿರುದ್ಧ ಪಿತೂರಿ ನಡೆಸಿದ ಪ್ರಕರಣ ಸಂಬಂಧ ಮಾಜಿ ಶಾಸಕರೂ ಆಗಿದ್ದ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್  ಹಾಗೂ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಪೊಲೀಸರು 2022 ಡಿಸೆಂಬರ್​ 16 ರಂದು ದಾವಣಗೆರೆಯಲ್ಲಿ ಅಧಿಕೃತವಾಗಿ ಬಂಧಿಸಿ ಮಹಿಳಾ ಸಾಂತ್ವನ ಕೇಂದ್ರಕ್ಕೆ ಬಿಟ್ಟಿದ್ದರು.

ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧ ಷಡ್ಯಂತರ ಪ್ರಕರಣ; ತನಿಖೆ ವರ್ಗಾವಣೆ ಬಗ್ಗೆ ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಆಡಿಯೋದಲ್ಲಿ ಮುಖ್ಯವಾಗಿ ಇರುವುದು ಏನು?

ಮುರುಘಾ ಶರಣರ ವಿರುದ್ಧ ಸುಳ್ಳು ದೂರು ನೀಡುವಂತೆ ವ್ಯಕ್ತಿಯೊಬ್ಬರು ಸಂತ್ರಸ್ತೆಗೆ ಕರೆ ಮಾಡಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಸಂಭಾಷಣೆ 14 ನಿಮಿಷ 15 ಸೆಕೆಂಡ್‌ ಕಾಲ ಇದ್ದು, ಕರೆ ಮಾಡಿದ ವ್ಯಕ್ತಿ ಬಾಲಕಿಗೆ ಸುಳ್ಳು ದೂರು ನೀಡುವಂತೆ ಪ್ರಚೋದನೆ ಮಾಡಿದ್ದಲ್ಲದೆ, ಸಹಾಯ ಮಾಡುವುದಾಗಿ ಆಮಿಷವನ್ನೂ ಒಡ್ಡಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:48 pm, Fri, 3 November 23