AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Metro Pillar collapsed ಮೆಟ್ರೋ ಕಂಬಿ ಕುಸಿದು ತಾಯಿ, ಮಗು ಸಾವು ಪ್ರಕರಣ: ಐವರ ವಿರುದ್ಧ ಕೇಸ್ ಬುಕ್

ರಾಕ್ಷಸನ ಹಲ್ಲುಗಳಂತೆ ಕಾಣೋ ಈ ರಾಡ್​ಗಳೇ ತುಂಬಿದ ಮೆಟ್ರೋ ಪಿಲ್ಲರ್ ನಡುರೋಡಲ್ಲೇ ಇಬ್ಬರು ಅಮಾಯಕರ ಉಸಿರನ್ನೇ ನಿಲ್ಲಿಸಿದೆ. ಈ ಬಗ್ಗೆ ದೂರು ದಾಖಲಾಗಿದೆ.

Metro Pillar collapsed ಮೆಟ್ರೋ ಕಂಬಿ ಕುಸಿದು ತಾಯಿ, ಮಗು ಸಾವು ಪ್ರಕರಣ: ಐವರ ವಿರುದ್ಧ ಕೇಸ್ ಬುಕ್
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Jan 10, 2023 | 8:55 PM

Share

ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ (Namma Metro)  ಪಿಲ್ಲರ್ ಬಿದ್ದು ತಾಯಿ-ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದೂರು (FIR) ದಾಖಲಾಗಿದೆ. ಮೃತ ತೇಜಸ್ವಿನಿ ಪತಿ ಲೋಹಿತ್ ಕುಮಾರ್ ಅವರು ದೂರು ನೀಡಿದ್ದು, ಸೈಟ್ ಇಂಜಿನಿಯರ್ಸ್‌, ಕಂಟ್ರ್ಯಾಕ್ಟರ್ಸ್‌, BMRCL ಆಫೀಸರ್ಸ್‌, ಸೈಟ್ ಇನ್‌ಚಾರ್ಜ್‌ ಆಫೀಸರ್ಸ್ ಸೇರಿದಂತೆ ಇತರರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಇದನ್ನೂ ಓದಿ: Bengaluru Metro: ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್​​ ಕಬ್ಬಿಣದ ರಾಡುಗಳು ಬಿದ್ದು ತಾಯಿ ಮತ್ತು ಮಗು ಸಾವು

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಗುತ್ತಿಗೆದಾರ, ಅಧಿಕಾರಿಗೆ BMRCLನೋಟಿಸ್ ನೀಡಿದ್ದು, ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಐಐಎಸ್ಸಿಗೆ ಮನವಿ ಮಾಡಲಾಗಿದೆ. ಆಂತರಿಕ ತಾಂತ್ರಿಕ ತಂಡದಿಂದಲೂ ಘಟನೆ ಬಗ್ಗೆ ತನಿಖೆ ನಡೆಸಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ಮೃತರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. BMRCL ಸಹ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದೆ.

ಘಟನೆ ಹಿನ್ನೆಲೆ

ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಕಂಬಿ ಬಿದ್ದು ಇಂದು(ಜನವರಿ 10) ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ. ಮೃತ ತೇಜಸ್ವಿನಿ ಅವರು ಹಾಗೂ ಅವರ ಪತಿ ತಮ್ಮಿಬ್ಬರು ಅವಳಿ ಮಕ್ಕಳ ಜೊತೆಯಲ್ಲಿ ಬೈಕ್‌ನಲ್ಲಿ ಹೊರಟಿದ್ದರು. ಈ ವೇಳೆ ಪಿಲ್ಲರ್‌ ಅವರ ಬೈಕ್ ಮೇಲೆ ಬಿದ್ದಿತ್ತು. ಅವರ ಕುಟುಂಬದ ನಾಲ್ವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಜನರು ಗಾಯಗೊಂಡಿದ್ದ ತಾಯಿ ಮತ್ತು ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ತೇಜಸ್ವಿನಿ ಹಾಗೂ ಮಗು ವಿಹಾನ್ ಮೃತಟ್ಟಿದ್ದಾರೆ. ಒಂದು ವರ್ಷದ ಮಗು ಮತ್ತು ಲೋಹಿತ್‌ ಕುಮಾರ್ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಮೆಟ್ರೋ ನಿರ್ಲಕ್ಷ್ಯ, ಗುತ್ತಿಗೆದಾರನ ಬೇಜವಾಬ್ದಾರಿ, ಅಧಿಕಾರಿಗಳ ಕೆಲಸಗಳ್ಳತನಕ್ಕೆ ಇಬ್ಬರ ಬದುಕೇ ಅಂತ್ಯವಾಗಿದೆ. ಪತಿಯ ಜೊತೆಗೆ ಬೈಕ್​ನಲ್ಲಿ ಹೋಗ್ತಿದ್ದ 28 ವರ್ಷದ ತಾಯಿ ತೇಜಸ್ವಿನಿ, ಮತ್ತಾಕೆಯ ಮಗ ವಿಹಾನ್ ಕೊನೆಯುಸಿರೆಳೆದಿದ್ದಾರೆ. ಅಷ್ಟಕ್ಕೂ, ಇಲ್ಲಿ ಮೆಟ್ರೋ ಅಧಿಕಾರಿಗಳ, ಗುತ್ತಿಗೆದಾರರ, ಕಾಮಗಾರಿ ನಡೆಸ್ತಿದ್ದ ಕಂಪನಿಯ ಸಿಬ್ಬಂದಿಯ, ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯ ಎದ್ದು ಕಾಣ್ತಿದೆ. ಅಷ್ಟು ದೊಡ್ಡ ರಾಡ್ ಕುಸಿದು ಬೀಳುತ್ತೆ ಎಂದು ಗೊತ್ತಿದ್ರೂ, ಬೇಜವಾಬ್ದಾರಿ ತೋರಿದ್ದಕ್ಕೆ ಇಂಥಾ ದುರಂತ ಸಂಭವಿಸಿದೆ.

Published On - 8:54 pm, Tue, 10 January 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ