ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ರೂ. ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ

ಜಲಾವೃತ ಪ್ರದೇಶಗಳಲ್ಲಿನ ಜನರಿಗೆ ಆಶ್ರಯ ನೀಡಲು ಸೂಚಿಸಲಾಗಿದ್ದು, ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 900 ಕೋಟಿ ರೂ. ಇದೆ. ಬೆಳೆ ಸಮೀಕ್ಷೆ ಮಾಡಿ, ಪರಿಹಾರಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಮಳೆಯಿಂದ ಹಾನಿಯಾದ ಮನೆಗಳಿಗೆ 10 ಸಾವಿರ ರೂ. ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ
ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Aug 29, 2022 | 11:21 AM

ಬೆಂಗಳೂರು: ಮಳೆಯಿಂದ ಹಾನಿಯಾದ ಮನೆಗಳಿಗೆ ತಕ್ಷಣ 10 ಸಾವಿರ ಪರಿಹಾರ ನೀಡುವಂತೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆರೆಕಟ್ಟೆಗಳಿರುವ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಮಳೆ ಹಾನಿ ಪರಿಹಾರ ನೀಡಲು ಹಿಂದೆ ಮುಂದೆ ನೋಡಬಾರದು. ಬಿದ್ದಿರುವ ವಿದ್ಯುತ್​ ಕಂಬಗಳನ್ನ 24 ಗಂಟೆಗಳಲ್ಲಿ ದುರಸ್ತಿಗೊಳಿಸುವಂತೆ ಬೆಸ್ಕಾಂಗೆ ಸೂಚನೆ ನೀಡಲಾಗಿದೆ. ಜಲಾವೃತ ಪ್ರದೇಶಗಳಲ್ಲಿನ ಜನರಿಗೆ ಆಶ್ರಯ ನೀಡಲು ಸೂಚಿಸಲಾಗಿದ್ದು, ಎಲ್ಲ ಜಿಲ್ಲಾಧಿಕಾರಿಗಳ ಖಾತೆಯಲ್ಲಿ 900 ಕೋಟಿ ರೂ. ಇದೆ. ಬೆಳೆ ಸಮೀಕ್ಷೆ ಮಾಡಿ, ಪರಿಹಾರಕ್ಕೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು. 16 ಜಿಲ್ಲೆಗಳ ಡಿಸಿಗಳ ಜೊತೆ ನಿನ್ನ ಸಭೆಯನ್ನ ಮಾಡಿದ್ದೇನೆ. ಅಧಿಕಾರಿಗಳಿಂದ ಮಾಹಿತಿ ಪಡೆದು ಸೂಚನೆ ನೀಡಿದ್ದೇನೆ. ಬೆಂಗಳೂರು-ಮೈಸೂರು ಸಂಪರ್ಕಕ್ಕೆ ಪರ್ಯಾಯ ಮಾರ್ಗಕ್ಕೆ ಸೂಚನೆಯನ್ನು ನೀಡಲಾಗಿದೆ. ನಮ್ಮ ಸಿಎಸ್​ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜತೆ ಸಭೆ ಮಾಡಲಾಗಿದೆ ಎಂದು ಹೇಳಿದರು.

ದೆಹಲಿ ಭೇಟಿ ಕುರಿತು ಯಡಿಯೂರಪ್ಪ ಜೊತೆ ಮಾತುಕತೆ

ದೆಹಲಿ ಭೇಟಿ ಕುರಿತು ಯಡಿಯೂರಪ್ಪ ಜೊತೆ ಸಿಎಂ ಬೊಮ್ಮಾಯಿ ಮಾತುಕತೆ ಮಾಡಿದ್ದು, ಪಕ್ಷದ ಸಂಘಟನೆ ಕುರಿತು, ಪಕ್ಷದ ಕಾರ್ಯಕ್ರಮಗಳ ಕುರಿತು ಬಿಎಸ್​​ವೈ ಜತೆ ಚರ್ಚೆ ಮಾಡಿದ್ದೇನೆ. ರಾಜ್ಯದ 6 ಕಡೆಗಳಲ್ಲಿ ದೊಡ್ಡ ರ್ಯಾಲಿಗಳನ್ನು ಮಾಡುತ್ತೇವೆ. ಸೆ.8ರಂದು ಜನೋತ್ಸವ ಸಮಾವೇಶದ ಕುರಿತು ಮಾತುಕತೆ ಮಾಡಲಾಗಿದೆ ಎಂದು ಹೇಳಿದರು.

Published On - 11:19 am, Mon, 29 August 22

ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಹಿಮಾಲಯದಲ್ಲಿ ಸಿಕ್ಕಿ ಬಿದ್ದ ಕಂದು ಕರಡಿಯನ್ನು ರಕ್ಷಿಸಿದ ಭಾರತೀಯ ಸೈನಿಕರು
ಮಾತಿಗೆ ಅಡ್ಡಿಪಡಿಸುತ್ತಿದ್ದ ರಾಯರೆಡ್ಡಿಯವರಿಗೆ ಸುಮ್ಮನಿರಲು ಹೇಳಿದ ಯತ್ನಾಳ್
ಮಾತಿಗೆ ಅಡ್ಡಿಪಡಿಸುತ್ತಿದ್ದ ರಾಯರೆಡ್ಡಿಯವರಿಗೆ ಸುಮ್ಮನಿರಲು ಹೇಳಿದ ಯತ್ನಾಳ್
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಗೋಡೆ ಬಳಿ ಹೋಗಿ ಅಳುತ್ತಿರುವ ಹನುಮಂತ; ಬಿಗ್ ಬಾಸ್​ ಮನೆಯಲ್ಲಿ ಏನಾಯ್ತು?
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ಮಂತ್ರಿಗಳಿಗೆ ಪ್ರಶ್ನೆ ಕೇಳಿದರೆ ಕಾಂಗ್ರೆಸ್ ಶಾಸಕರು ನಿಲ್ಲೋದ್ಯಾಕೆ? ಯತ್ನಾ
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ವಿರೋಧಫಕ್ಷದವರು ಸಭಾತ್ಯಾಗ ಮಾಡೋದು ವಾಡಿಕೆ, ಆದರೆ ಇಲ್ಲಿ ಸಿಎಂ!
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಎಲ್ಲರ ಆಟಕ್ಕೆ ಅಡ್ಡಗಾಲು ಹಾಕಿದ ಮಂಜು, ಗೌತಮಿ ಫುಲ್ ಗರಂ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಸಚಿವೆ
ಸಿಎಂ ಕರೆದಿರುವ ವಿಷಯ ಹೇಳಿದಾಗ ಸಿಸಿ ಪಾಟೀಲ್ ಕುಂಟುನೆಪ ಹೇಳಿದರು: ಸಚಿವೆ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸ್ವಾಮೀಜಿ ಬಿಜೆಪಿಯವರಾ ಅಂತ ಕೇಳುತ್ತಿರೋದು ಹಾಸ್ಯಾಸ್ಪದ: ಅಶೋಕ
ಸಾಕಿದ ಮಾವುತ ಬಿಟ್ಟು ಹೊರಟಾಗ ಓಡೋಡಿ ಹೋಗಿ ಎಳೆದು ತಂದ ಆನೆ ಮರಿ
ಸಾಕಿದ ಮಾವುತ ಬಿಟ್ಟು ಹೊರಟಾಗ ಓಡೋಡಿ ಹೋಗಿ ಎಳೆದು ತಂದ ಆನೆ ಮರಿ
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್
ಕೃಷ್ಣ ಅವರ ಅಂತ್ಯಕ್ರಿಯೆ ಸರ್ಕಾರ ನಡೆಸಿಕೊಟ್ಟ ರೀತಿ ಅಭಿನಂದನೀಯ: ವಿಶ್ವನಾಥ್