AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆದಾರನ ಅಪಹರಣ ಪ್ರಕರಣ: BBMP ಮಾಜಿ ಕಾರ್ಪೊರೇಟರ್‌ ವೆಂಕಟೇಶ್ ಬಂಧನ

ಗುತ್ತಿಗೆದಾರನನ್ನು ಅಪಹರಿಸಿ ಮೂರು ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣ ಸಂಬಂಧ ಬೆಂಗಳೂರಿನ ಯಶವಂತಪುರ ಠಾಣಾ ಪೊಲೀಸರು ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಜಿ.ಕೆ.ವೆಂಕಟೇಶ್ ಅವರನ್ನು ಅಧಿಕೃತವಾಗಿ ಬಂಧಿಸಿದ್ದಾರೆ. ಕಿಡ್ನ್ಯಾಪ್ ಆಗಿದ್ದ ಗುತ್ತಿಗೆದಾರ ಚಂದ್ರು ದೂರಿನ ಮೇರೆಗೆ ವೆಂಕಟೇಶ್​ ಬಂಧನವಾಗಿದೆ.

ಗುತ್ತಿಗೆದಾರನ ಅಪಹರಣ ಪ್ರಕರಣ: BBMP ಮಾಜಿ ಕಾರ್ಪೊರೇಟರ್‌ ವೆಂಕಟೇಶ್ ಬಂಧನ
ಗುತ್ತಿಗೆದಾರನ ಅಪಹರಣ ಪ್ರಕರಣ ಸಂಬಂಧ BBMP ಮಾಜಿ ಕಾರ್ಪೊರೇಟರ್‌ ವೆಂಕಟೇಶ್​ನನ್ನು ಬಂಧಿಸಿದ ಯಶವಂತಪುರ ಠಾಣಾ ಪೊಲೀಸರು
Shivaprasad B
| Edited By: |

Updated on: Oct 20, 2023 | 7:27 PM

Share

ಬೆಂಗಳೂರು, ಅ.20: ಗುತ್ತಿಗೆದಾರನನ್ನು ಅಪಹರಿಸಿ ಮೂರು ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣ ಸಂಬಂಧ ನಗರದ ಯಶವಂತಪುರ ಠಾಣಾ ಪೊಲೀಸರು ಬಿಬಿಎಂಪಿ (BBMP) ಮಾಜಿ ಕಾರ್ಪೊರೇಟರ್‌ ಜಿ.ಕೆ.ವೆಂಕಟೇಶ್ ಅವರನ್ನು ಅಧಿಕೃತವಾಗಿ ಬಂಧಿಸಿದ್ದಾರೆ. ಕಿಡ್ನ್ಯಾಪ್ ಆಗಿದ್ದ ಗುತ್ತಿಗೆದಾರ ಚಂದ್ರು ದೂರಿನ ಮೇರೆಗೆ ವೆಂಕಟೇಶ್​ ಬಂಧನವಾಗಿದೆ.

ಯಶವಂತಪುರ ವಾರ್ಡ್‌ನಲ್ಲಿ ಕಾಮಗಾರಿವೊಂದರ ಗುತ್ತಿಗೆ ಚಂದ್ರು ಪಾಲಾಗಿತ್ತು. ಇದರಿಂದ ಕೆಂಡಾಮಂಡಲವಾಗಿದ್ದ ಯಶವಂತಪುರದ ವಾರ್ಡ್​ನ ಮಾಜಿ ಕಾರ್ಪೊರೇಟರ್ ಜಿ.ಕೆ.ವೆಂಕಟೇಶ್, ಎರಡು ದಿನಗಳ ಹಿಂದೆ ಅಪಹರಿಸಿ 3 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದರು.

ಇದನ್ನೂ ಓದಿ: ರಾಜಧಾನಿ ಬೆಂಗಳೂರು ಹೆಬ್ಬಾಗಿಲಲ್ಲೇ ನಡೀತು ಸಿನಿಮಾ ಶೈಲಿಯ ಕಿಡ್ನಾಪ್, ಎರಡು ದಿನಗಳ ಬಳಿಕ ಯುವಕನ ಮೃತದೇಹ ಪತ್ತೆ

ನಿನ್ನಿಂದ ನಷ್ಟ ಆಗಿದೆ, ಕಾಮಗಾರಿ ಕೈತಪ್ಪಿದೆ, ಅದನ್ನು ಭರಿಸುವಂತೆ ಬೆದರಿಕೆಯೂ ಹಾಕಿದ್ದರು. ಬಳಿಕ 3 ಕೋಟಿ ರೂಪಾಯಿ ಚೆಕ್ ಪಡೆದು ಹಲ್ಲೆ ಮಾಡಿ ಚಂದ್ರುನನ್ನು ಬಿಡುಗಡೆ ಮಾಡಿದ್ದರು. ಘಟನೆ ಸಂಬಂಧ ಚಂದ್ರು ಅವರು ಯಶವಂತಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೆಂಕಟೇಶ್ ಅವರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದರು. ಇದೀಗ ವೆಂಕಟೇಶ್​ ಅವರನ್ನು ಯಶ್ವಂತಪುರ ಠಾಣಾ ಪೊಲೀಸರು ಅಧಿಕೃತವಾಗಿ ಬಂಧಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್