ಯಾರೆಷ್ಟೇ ಚೀರಾಡಲಿ, ಬೇಕಿದ್ರೆ ಬಟ್ಟೆ ಹರಿದುಕೊಳ್ಳಲಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಪ್ರಿಯಾಂಕ್ ಖರ್ಗೆ

ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕಾ ಖರ್ಗೆ ರಾಜೀನಾಮೆ ನೀಡುವಂತೆ ಒತ್ತಾಯ ಕೇಳಿಬರುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಪ್ರಿಯಾಂಕ್, ಯಾರೆಷ್ಟೇ ಚೀರಾಡಲಿ, ಬೇಕಿದ್ದರೆ ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ರಾಜು ಕಪನೂರು ಕಾಂಗ್ರೆಸ್ ಸೇರುವ​ ಮೊದಲು ಬಿಜೆಪಿಯಲ್ಲಿದ್ದರು, ಬಿಜೆಪಿ ಎಸ್​ಸಿ ಮೋರ್ಚಾ ಅಧ್ಯಕ್ಷರಾಗಿದ್ದರು ಎಂದರು.

Follow us
ಪ್ರಸನ್ನ ಗಾಂವ್ಕರ್​
| Updated By: ನಯನಾ ರಾಜೀವ್

Updated on:Dec 30, 2024 | 12:29 PM

ಬೆಂಗಳೂರು, ಡಿಸೆಂಬರ್ 30: ಯಾರೆಷ್ಟೇ ಚೀರಾಡಲಿ, ಬೇಕಿದ್ದರೆ ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದಾರೆ. ಬೀದರ್​ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಬಿಜೆಪಿಯು ಸಚಿವ ಪ್ರಿಯಾಂಕಾ ಖರ್ಗೆ ರಾಜೀನಾಮೆಗೆ ಪಟ್ಟು ಹಿಡಿದಿದೆ. ಈ ಕುರಿತು ಮಾತನಾಡಿರುವ ಪ್ರಿಯಾಂಕಾ ಯಾರೆಷ್ಟೇ ಚೀರಾಡಿದರೂ, ಬಟ್ಟೆ ಹರಿದುಕೊಂಡರೂ, ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ಯಾವುದಾದರೂ ದಾಖಲೆ ಇದ್ದರೆ ತೋರಿಸಲಿ ಎಂದಿದ್ದಾರೆ.

ನನ್ನ ರಾಜೀನಾಮೆ ಕೇಳಲು ವಿಜಯೇಂದ್ರಾ ಸುಪ್ರೀಂಕೋರ್ಟಾ? ರಾಜು ಕಪನೂರ್ ನನ್ನ ಆಪ್ತ ಅಲ್ಲ ಎಂದು ನಾನು ಹೇಳಿಯೇ ಇಲ್ಲ. ರಾಜು ಕಪನೂರು ಕಾಂಗ್ರೆಸ್ ಸೇರುವ​ ಮೊದಲು ಬಿಜೆಪಿಯಲ್ಲಿದ್ದರು, ಬಿಜೆಪಿ ಎಸ್​ಸಿ ಮೋರ್ಚಾ ಅಧ್ಯಕ್ಷರಾಗಿದ್ದರು ಎಂದರು.

ವಿಜಯೇಂದ್ರ ವಿರುದ್ಧ ಮನಿ ಲ್ಯಾಂಡರಿಂಗ್​ ಕೇಸ್ ದಾಖಲಾಗಿದೆ, ವಿಜಯೇಂದ್ರ ಯಾಕೆ ರಾಜೀನಾಮೆ ಕೊಡುತ್ತಿಲ್ಲ ಎಂದು ಪ್ರಶ್ನಿಸಿದರು. ಕಲಬುರಗಿ ಮುತ್ತಿಗೆಗೆ ಎಷ್ಟು ಜನ ಬರ್ತೀರಿ ಅಂತಾ ಮೊದಲೇ ಹೇಳಿ, ಅಷ್ಟು ಜನರಿಗೆ ಟೀ ವ್ಯವಸ್ಥೆ ಮಾಡ್ತೇವೆ, ಇಲ್ಲದಿದ್ದರೆ ನೀರನ್ನೂ ಕೊಟ್ಟಿಲ್ಲ ಅಂತಾ ಪ್ರತಿಭಟನೆ ಮಾಡ್ತೀರಾ ಎಂದು ಹೇಳಿದರು.

ಮತ್ತಷ್ಟು ಓದಿ: ಗುತ್ತಿಗೆದಾರ ಸಚಿನ್ ಪಾಂಚಾಳ್​ರದ್ದು ಸರ್ಕಾರಿ ಯೋಜಿತ ಆತ್ಮಹತ್ಯೆ: ಬಿವೈ ವಿಜಯೇಂದ್ರ ಆರೋಪ

ಬಿಜೆಪಿಯಲ್ಲೇ ಬಿ.ವೈ.ವಿಜಯೇಂದ್ರ ಅವರ ಮಾತಿಗೆ ಕಿಮ್ಮತ್ತಿಲ್ಲ, ಉಳಿದವರು ಯಾಕೆ ಅವರ ಮಾತಿಗೆ ಕಿಮ್ಮತ್ತು ಕೊಡಬೇಕು ಎಂದು ಪ್ರಶ್ನೆ ಂಆಡಿದರು. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ವಿರುದ್ಧ ಗಂಭೀರ ಆರೋಪಗಳನ್ನು ಮಾಡಿ ಬೀದರ್‌ನ 26 ವರ್ಷದ ಗುತ್ತಿಗೆದಾರ ಸಚಿನ್ ಮಾನಪ್ಪ ಪಾಂಚಾಳ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.

ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.27ರಂದೇ ಸಚಿವ ಪ್ರಿಯಾಂಕ್ ಖರ್ಗೆ ಗೃಹ ಸಚಿವ ಡಾ. ಪರಮೇಶ್ವರ್​ಗೆ ಪತ್ರ ಬರೆದಿದ್ದಾರೆ.

ಪ್ರಕರಣದಲ್ಲಿ ಸಂಶಯ ಮೂಡಿಸುವಂಥ ಹಲವು ವಿಷಯ ನಡೆಯುತ್ತಿವೆ, ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಸತ್ಯಾಂಶ ತಿಳಿಯಲು ಸ್ವತಂತ್ರ ತನಿಖಾ ಸಂಸ್ಥೆಯ ಸಿಐಡಿಗೆ ವಹಿಸಬೇಕೆಂದು ಮನವಿ ಮಾಡಲಾಗಿದೆ.

ಕಾಂಗ್ರೆಸ್​ ಸರ್ಕಾರ ಬಂದಾಗಿನಿಂದ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿವೆ, ಸರಣಿ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಹಿಂದೆಂದೂ ನೋಡಿರಲಿಲ್ಲ ಎಂದು ವಿಜಯೇಂದ್ರ ಹೇಳಿದ್ದಾರೆ. ಸಹೋದರಿಯರು ದೂರು ಕೊಡಲು ಹೋದಾಗ 12 ಗಂಟೆಗಳ ಕಾಲ ಪೊಲೀಸರು ಏನೂ ತಲೆಕೆಡಿಸಿಕೊಂಡಿಲ್ಲ, ಹೆಣ್ಣುಮಕ್ಕಳಿಗೆ ಹೀಯಾಳಿಸಿ ಅಪಮಾನ ಮಾಡಿ ಪೊಲೀಸರು ನಿಂದಿಸಿರುವುದು ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದರು.

ಕಲಬುರಗಿ ಜಿಲ್ಲೆಯ ಪೊಲೀಸ್ ಠಾಣೆಗಳು ಕಾಂಗ್ರೆಸ್​ ಕಚೇರಿಗಳಾಗಿವೆ, ಕಲಬುರಗಿ ಜಿಲ್ಲೆ ಯಾರ ಕಪಿಮುಷ್ಠಿಯಲ್ಲಿದೆ ಎಂದು ಬಸ್​ ನಿಲ್ದಾಣದಲ್ಲಿ ನಿಂತು ಕೇಳಿದರೂ ಹೇಳುತ್ತಾರೆ ಎಂದರು. ಕಾಂಗ್ರೆಸ್​ನವರು ಬೆಳಗಿನ ಜಾವ 2-3 ಗಂಟೆಗೆ ಸಚಿನ್ ಕುಟುಂಬದವರನ್ನು ಭೇಟಿ ಮಾಡುತ್ತಾರೆ, ಕಾಂಗ್ರೆಸ್​ನವರು ಹಗಲು ಕಾರ್ಯಾಚರಣೆ ಮಾಡುವುದಿಲ್ಲ ಎಂದು ದೂರಿದ್ದರು.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:20 pm, Mon, 30 December 24

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ