40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಮತ್ತೆ ಜೀವ: ಹೋರಾಟಕ್ಕೆ ಸಜ್ಜಾದ ಗುತ್ತಿಗೆದಾರರ ಸಂಘ

ಗುತ್ತಿಗೆದಾರರು ದೂರು ನೀಡಿ ಒಂದೂವರೆ ವರ್ಷವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕೆಂಪಣ್ಣ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆಯುವ ಪತ್ರದಲ್ಲಿ ಪ್ರಸ್ತಾಪಿಸಲಿದ್ದಾರೆ.

40 ಪರ್ಸೆಂಟ್ ಕಮಿಷನ್ ಆರೋಪಕ್ಕೆ ಮತ್ತೆ ಜೀವ: ಹೋರಾಟಕ್ಕೆ ಸಜ್ಜಾದ ಗುತ್ತಿಗೆದಾರರ ಸಂಘ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Aug 24, 2022 | 1:12 PM

ಬೆಂಗಳೂರು: ಕರ್ನಾಟಕ ಸರ್ಕಾರದ ಆಡಳಿತದ (Karnataka Government) ವಿವಿಧ ಹಂತಗಳಲ್ಲಿ ಬೇರೂರಿರುವ ಭ್ರಷ್ಟಾಚಾರದ ವಿರುದ್ಧ ಗುತ್ತಿಗೆದಾರರ ಸಂಘವು (Contractor Association) ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿದೆ. 40 ಪರ್ಸೆಂಟ್ ಕಮಿಷನ್ ಆರೋಪ ಮತ್ತೆ ಜೀವ ಪಡೆದುಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿಗೆ (PM Narendra Modi) ಮತ್ತೊಂದು ಪತ್ರ ಬರೆಯಲು ಗುತ್ತಿಗೆದಾರರ ಸಂಘ ಮುಂದಾಗಿದೆ. ಸ್ವಾತಂತ್ರ್ಯ ದಿನಾಚರಣೆ ವೇಳೆ ಭ್ರಷ್ಟಾಚಾರದ ಪ್ರಧಾನಿ ಮೋದಿ ಪ್ರಸ್ತಾಪಿಸಿದ್ದರು. ದೇಶಕ್ಕೆ ಭ್ರಷ್ಟಾಚಾರ ದೊಡ್ಡ ಮಾರಕ, ಶತ್ರು ಎಂದಿರುವ ಮೋದಿ ಅವರ ಮಾತನ್ನೇ ಉಲ್ಲೇಖಿಸಿ‌ ಅಭಿನಂದನೆ ಪತ್ರ ಬರೆಯಲು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮುಂದಾಗಿದ್ದಾರೆ.

ಗುತ್ತಿಗೆದಾರರು ದೂರು ನೀಡಿ ಒಂದೂವರೆ ವರ್ಷವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಏನು ಕ್ರಮ ಕೈಗೊಂಡಿದ್ದೀರಿ ಎಂದು ಕೆಂಪಣ್ಣ ಪ್ರಸ್ತಾಪಿಸಲಿದ್ದಾರೆ. ಈ ಮೂಲಕ ಮತ್ತೊಮ್ಮೆ ರಾಜ್ಯ ಸರ್ಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪವನ್ನು ಮತ್ತೆ ಮುಂಚೂಣಿಗೆ ತರಲು ಗುತ್ತಿಗೆದಾರರ ಸಂಘ ಮುಂದಾಗಿದೆ. ಈ ಮಧ್ಯೆ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನೂ ಭೇಟಿ ಮಾಡಿರುವ ಗುತ್ತಿಗೆದಾರರ ಸಂಘದ ನಿಯೋಗ ಭೇಟಿ ಮಾಡಿ ಚರ್ಚೆ ನಡೆಸಿದೆ.

ಸಿದ್ದರಾಮಯ್ಯ ಮನೆಗೆ ಗುತ್ತಿಗೆದಾರರ ಸಂಘದ 30ಕ್ಕೂ ಹೆಚ್ಚು ಸದಸ್ಯರು ಭೇಟಿ ನೀಡಿದ್ದಾರೆ. ಕರ್ನಾಟಕದ ವಿಧಾನಸಭೆ ಚುನಾವಣೆ ಇನ್ನೊಂದು ವರ್ಷದಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಅವರು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ನಂತರ ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಬಗ್ಗೆ ಇಡೀ ದೇಶದಲ್ಲಿ ಚರ್ಚೆ ಆರಂಭವಾಗಿತ್ತು.

ಇದನ್ನೂ ಓದಿ: ಗುತ್ತಿಗೆದಾರರಿಂದ ಆತ್ಮಹತ್ಯೆ ಮಾಡಿಕೊಳ್ಳುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ: ಪ್ರತಿಭಟನೆ ಎಚ್ಚರಿಕೆ

Contractor-Association-Lett

ಗುತ್ತಿಗೆದಾರರ ಸಂಘ ಬರೆದಿರುವ ಪತ್ರ

ಕೆಂಪಣ್ಣಗೆ ಪಿಎಂ ಕಾರ್ಯಾಲಯದಿಂದ ಕರೆ

ರಾಜ್ಯದಲ್ಲಿ 40 ಪಸೆಂಟ್ ಕಮಿಷನ್ ವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ (PM Narendra Modi) ಪತ್ರ ಬರೆದಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣಗೆ ಪ್ರಧಾನಿ ನರೇಂದ್ರ ಮೋದಿ ಕಾರ್ಯಾಲಯದ ಅಧಿಕಾರಿಗಳು ಕರೆ ಮಾಡಿ ಮಾತನಾಡಿದ್ದರು. ಆರೋಪದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಪಿಎಂ ಕಾರ್ಯಾಲಯವು ಕೆಂಪಣ್ಣ ಅವರಿಗೆ ಸೂಚನೆ ನೀಡಿತ್ತು. ಅದರಂತೆ ರಾಜ್ಯ ಗುತ್ತಿಗೆದಾರರ ಸಂಘದಿಂದ ಬೆಂಗಳೂರಿನಲ್ಲಿರುವ ಕೇಂದ್ರ ಗೃಹ ಇಲಾಖೆಯ ಅಧಿಕಾರಿಗೆ ದಾಖಲಾತಿ ಸಲ್ಲಿಕೆ ಮಾಡಲು ಗುತ್ತಿಗೆದಾರರ ಸಂಘ ಮುಂದಾಗಿತ್ತು.

Published On - 12:55 pm, Wed, 24 August 22