ಬೆಂಗಳೂರಿನಲ್ಲಿ ಕೂಲ್ ಕೂಲ್ ವೆದರ್; ಎರಡು ದಿನ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರಿನ ಸುತ್ತಮುತ್ತ ಇನ್ನೇರಡು ದಿನ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ, ಚೆನ್ನೈಗೆ ಅಪ್ಪಳಿಸುವ ಚಂಡಮಾರುತದಿಂದ ಕರ್ನಾಟಕಕ್ಕೂ ಎಫೆಕ್ಟ್ ಆಗುವ ಸಾಧ್ಯತೆ ಇದೆ ಅಂತ ತಿಳಿಸಿದೆ.

ಬೆಂಗಳೂರಿನಲ್ಲಿ ಕೂಲ್ ಕೂಲ್ ವೆದರ್; ಎರಡು ದಿನ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಸಾಂದರ್ಭಿಕ ಚಿತ್ರ

ಬೆಂಗಳೂರು: ಎರಡು ದಿನಗಳ ನಂತರ ಬೆಂಗಳೂರಿನಲ್ಲಿ ವೆದರ್ ಕೂಲ್ ಕೂಲ್ ಆಗಿದೆ. ಇನ್ನು ನಗರದ ಕೆಲವು ಕಡೆ ತುಂತುರು ಮಳೆಯಾಗುತ್ತಿದೆ. ರಾಜ್ಯದ ರಾಜಧಾನಿಯಲ್ಲಿ ಇನ್ನೂ ಎರಡ್ಮೂರು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನ ಸುತ್ತಮುತ್ತ ಇನ್ನೇರಡು ದಿನ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ, ಚೆನ್ನೈಗೆ ಅಪ್ಪಳಿಸುವ ಚಂಡಮಾರುತದಿಂದ ಕರ್ನಾಟಕಕ್ಕೂ ಎಫೆಕ್ಟ್ ಆಗುವ ಸಾಧ್ಯತೆ ಇದೆ ಅಂತ ತಿಳಿಸಿದೆ.

ಮೈಸೂರು ಭಾಗ, ಉಡುಪಿವರೆಗೂ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆ ನೀಡಿದೆ. ಅಲ್ಲದೇ ಕರ್ನಾಟಕದಲ್ಲಿ ನವೆಂಬರ್ 28 ರವರೆಗೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇಂದು (ನ.27) ತಮಿಳುನಾಡು ಮತ್ತು ಕೇರಳದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದಲ್ಲೂ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಹಾವೇರಿಯಲ್ಲಿ ಮಳೆ ಹೆಚ್ಚಾಗಲಿದ್ದು, ಇಂದು ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಾಳೆ (ನ.28) ದಕ್ಷಿಣ ಅಂಡಮಾನ್ ಸಮುದ್ರದ ಮೇಲೆ ತಾಜಾ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ. ದಕ್ಷಿಣ ಮಧ್ಯ ಬಂಗಾಳ ಕೊಲ್ಲಿಯ ಮೇಲೆ ವಾಯುಭಾರ ಕುಸಿತವಾಗಿ ನವೆಂಬರ್ 30ರಂದು ಚಲಿಸುವ ಸಾಧ್ಯತೆಯಿದೆ. ಈಶಾನ್ಯ ಮಾನ್ಸೂನ್ ಸೀಸನ್​ನಲ್ಲಿ ಇಲ್ಲಿಯವರೆಗೆ ಯಾವುದೇ ಚಂಡಮಾರುತ ಉಂಟಾಗಿಲ್ಲ. ಯಾವಾಗಲೂ ಆಯಾ ಋತುವಿನಲ್ಲಿ ಒಂದು ಅಥವಾ ಎರಡು ಚಂಡಮಾರುತಗಳು ಅಂಡಮಾನ್ ಸಮುದ್ರದಲ್ಲಿ ಹುಟ್ಟಿಕೊಳ್ಳುತ್ತವೆ.

ಇಂದಿನಿಂದ ನವೆಂಬರ್ 28ರವರೆಗೆ ಚಂಡಮಾರುತದ ಭೀತಿ ಎದುರಾಗಿರುವುದರಿಂದ ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಮಳೆಯಿಂದ ಅವಾಂತರಗಳು ಸೃಷ್ಟಿಯಾಗುವ ಹಿನ್ನೆಲೆ ಬಿಬಿಎಂಪಿ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ. ಡಿಸಿಗಳು ಚಂಡಮಾರುತ ಹಾಗೂ ಮಳೆಯ ಹಾನಿಯ ನಿಯಂತ್ರಣದ ಕಡೆ ಗಮನ ನೀಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಇದನ್ನೂ ಓದಿ

Wriddhiman Saha: ಕಳಪೆ ಆಟದ ನಡುವೆ 3ನೇ ದಿನ ವಿಕೆಟ್ ಕೀಪಿಂಗ್​ಗೆ ಬರದ ವೃದ್ದಿಮಾನ್ ಸಾಹ: ಕಾರಣವೇನು ಗೊತ್ತೇ?

Karnataka Weather Today: ಕರ್ನಾಟಕದಲ್ಲಿ ಇನ್ನೆರಡು ದಿನ ಮಳೆ ಅಬ್ಬರ; ತಮಿಳುನಾಡಿನಲ್ಲಿ ಆರೆಂಜ್ ಅಲರ್ಟ್ ಘೋಷಣೆ

Published On - 10:42 am, Sat, 27 November 21

Click on your DTH Provider to Add TV9 Kannada