ST Somashekar: ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ಗೆ ಕೊವಿಡ್‌

ನನಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಆದರೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲ, ಆರೋಗ್ಯವಾಗಿದ್ದೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ

ST Somashekar: ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ಗೆ ಕೊವಿಡ್‌


ಬೆಂಗಳೂರು: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ (S.T.Somashekhar) ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ವಿಷಯವನ್ನು ಅವರು ಟ್ವೀಟ್ ಮೂಲಕ ದೃಢಪಡಿಸಿದ್ದಾರೆ. ನನಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಆದರೆ ಸೋಂಕಿನ ಯಾವುದೇ ಲಕ್ಷಣಗಳಿಲ್ಲ, ಆರೋಗ್ಯವಾಗಿದ್ದೇನೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ. ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ವಿನಂತಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಚಿವರಾದ ಕಂದಾಯ ಸಚಿವ ಆರ್.ಅಶೋಕ್, ಶಿಕ್ಷಣ ಸಚಿವ ಬಿ.ಸಿ.ನಾಗೇಶ್​, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್​
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನಿನ್ನೆಯಷ್ಟೇ ಕೊರೊನಾ ಸೋಂಕು ದೃಢಪಟ್ಟಿತ್ತು. ಹೋಮ್​ ಕ್ವಾರಂಟೈನ್​ನಲ್ಲಿರುವ ಬಸವರಾಜ ಬೊಮ್ಮಾಯಿ, ನಾನು ಆರೋಗ್ಯವಾಗಿದ್ದೇನೆಂದು ತಿಳಿಸಿ ಟ್ವೀಟ್ ಮಾಡಿದ್ದಾರೆ. ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್ (Coronavirus) ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್​ ಮೂಲಕ ಮಾಹಿತಿ ನೀಡಿ ಮನವಿ ಮಾಡಿಕೊಂಡಿದ್ದಾರೆ. ಸಿಎಂ ಬೊಮ್ಮಾಯಿ‌ ಕೊವಿಡ್ ಪಾಸಿಟಿವ್ ಆಗಿರುವ ಹಿನ್ನೆಲೆ ಸಿಎಂ ಅಧಿಕೃತ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ. ನಾಳೆಯಿಂದ ಮೂರು ದಿನಗಳ ಕಾಲ ನಿಗದಿಯಾಗಿದ್ದ ಕಾವೇರಿ ಕಾಮಗಾರಿ ಪರಿಶೀಲನಾ ಸಭೆಗಳು ಕೂಡಾ ರದ್ದುಗೊಂಡಿದ್ದವು.

ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ಪಾಸಿಟಿವ್​ ದೃಢವಾಗಿದೆ. ಇಂದು (ಜನವರಿ 10) ಸಿಎಂ ಬೊಮ್ಮಾಯಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಸಾಹಿತಿ ಡಾ. ಚಂದ್ರಶೇಖರ ಪಾಟೀಲ ಅಂತ್ಯಕ್ರಿಯೆಯಲ್ಲಿ ಭಾಗಿ ಆಗಿದ್ದರು. ಬೂಸ್ಟರ್​ ಡೋಸ್ ಕೊರೊನಾ ಲಸಿಕೆ ಕಾರ್ಯಕ್ರಮ ಉದ್ಘಾಟಿಸಿದ್ದರು. ಆಡಳಿತ ಸುಧಾರಣೆ ಕುರಿತು ಸಭೆ ನಡೆಸಿದ್ದರು. ವಿಶ್ರಾಂತ ಕುಲಪತಿಗಳ ನಿಯೋಗದ ಜತೆ ಸಭೆಯಲ್ಲಿ ಭಾಗಿಯಾಗಿದ್ದರು. ಈ ಮಧ್ಯೆ, ಬಸವರಾಜ ಬೊಮ್ಮಾಯಿ ಕೊರೊನಾ ಪಾಸಿಟಿವ್ ಆಗಿದ್ದರು.

ಬೊಮ್ಮಾಯಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊರೊನಾ ಬಂದಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇಂದು ದೂರವಾಣಿ ಕರೆ ಮಾಡಿ ಮಾತನಾಡಿದ ಪ್ರಧಾನಿ ಬೊಮ್ಮಾಯಿಯವರ ಆರೋಗ್ಯ ವಿಚಾರಿಸಿದ್ದಾರೆ. ಸೂಕ್ತ ಚಿಕಿತ್ಸೆ ಪಡೆಯಿರಿ ಎಂದು ಸಿಎಂಗೆ ಪ್ರಧಾನಿ ಸಲಹೆ ನೀಡಿದ್ದಾರೆ. 5 ನಿಮಿಷಗಳ ಕಾಲ ಪ್ರಧಾನಿ ಮತ್ತು ಸಿಎಂ ಮಾತುಕತೆ ನಡೆಸಿದ್ದಾರೆ. ತಮಗೆ ಕೊವಿಡ್ ತಗುಲಿದ ಬಗ್ಗೆ ವಿವರಣೆ ನೀಡಿದ್ದಾರೆ.

ಇದನ್ನೂ ಓದಿ: PM Modi: ದೇಶದಲ್ಲಿ ಏರಿಕೆಯಾಗುತ್ತಿರುವ ಕೊರೊನಾ, ಒಮಿಕ್ರಾನ್​; ಜ.13ರಂದು ಎಲ್ಲ ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಮೋದಿ ಸಭೆ
ಇದನ್ನೂ ಓದಿ: ಕೊರೊನಾ ಸೋಂಕಿತರ ಸಂಪರ್ಕಕ್ಕೆ ಬಂದ ಎಲ್ಲರನ್ನೂ ತಪಾಸಣೆ ಮಾಡುವ ಅಗತ್ಯವಿಲ್ಲ; ಹೊಸ ಮಾರ್ಗಸೂಚಿ ಪ್ರಕಟಿಸಿದ ಐಸಿಎಂಆರ್​

Click on your DTH Provider to Add TV9 Kannada