ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆ: ಕಲಬುರಗಿ, ಕೋಲಾರದಲ್ಲಿ ತಲಾ ಒಬ್ಬರು ಬಲಿ

ಕಲಬುರಗಿ, ಕೋಲಾರ ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ 775 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6,398 ಇದೆ.

ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆ: ಕಲಬುರಗಿ, ಕೋಲಾರದಲ್ಲಿ ತಲಾ ಒಬ್ಬರು ಬಲಿ
ಪ್ರಾತಿನಿಧಿಕ ಚಿತ್ರ
TV9kannada Web Team

| Edited By: Ayesha Banu

Jul 05, 2022 | 9:13 PM

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೊನಾ(Coronavirus) ಮತ್ತೆ ತನ್ನ ಪ್ರಭಾವ ಹೆಚ್ಚು ಮಾಡುತ್ತಿದೆ. ರಾಜ್ಯದಲ್ಲಿ ಇಂದು (ಜುಲೈ 5) 839 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದಾರೆ(Death) . ಕಲಬುರಗಿ, ಕೋಲಾರ ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ 775 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ರಾಜ್ಯದಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಸಂಖ್ಯೆ 6,398 ಇದೆ. ಹಾಗೂ ರಾಜ್ಯದಲ್ಲಿ ಕೊವಿಡ್​ ಪಾಸಿಟಿವಿಟಿ ರೇಟ್​ ಶೇಕಡಾ 3.40 ಇದೆ.

ಇನ್ನು ನಿನ್ನೆ 749 ಹೊಸ ಪ್ರಕರಣಗಳು ಪತ್ತೆಯಾಗಿದ್ದವು. ಇಂದು 839 ಪ್ರಕರಣಗಳು ವರದಿಯಾಗಿವೆ. ಇಂದು 913 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಒಟ್ಟು 3927353 ಜನ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಂದು ಒಟ್ಟು 24,652 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು ಈ ಪೈಕಿ 839 ಜನರಲ್ಲಿ ಸೋಂಕು ಪತ್ತೆಯಾಗಿದೆ. ಒಟ್ಟು 6398 ಸಕ್ರಿಯ ಪ್ರಕರಣಗಳು ದಾಖಲಾಗಿವೆ. ಸೋಂಕಿಗೆ ಒಟ್ಟು 40080 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಇದನ್ನೂ ಓದಿ: ‘ಐರನ್ ಮ್ಯಾನ್ ತರ ಇದ್ರು, ಯಾಕೆ ಹಿಂಗಾಯ್ತೋ ಗೊತ್ತಿಲ್ಲ’; ಕಿಶೋರ್ ಪತ್ತಿಕೊಂಡ ಬಗ್ಗೆ ತಂದೆ ರಿಯಾಕ್ಷನ್

ಭಾರತದಲ್ಲಿ 13086 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ, 19 ಸಾವು ಭಾರತದಲ್ಲಿ ಮಂಗಳವಾರ (ಜುಲೈ 5) ಒಟ್ಟು 13,086 ಹೊಸ ಕೊವಿಡ್ ಸೋಂಕು ಪ್ರಕರಣಗಳು ವರದಿಯಾಗಿದ್ದು ಕಳೆದ 24 ಗಂಟೆಗಳಲ್ಲಿ 19 ಮಂದಿ ಮೃತಪಟ್ಟಿದ್ದಾರೆ. ಒಂದು ದಿನದಲ್ಲಿ ಚೇತರಿಸಿಕೊಂಡವರ ಸಂಖ್ಯೆ 12,456. ಸೋಮವಾರ (ಜುಲೈ 4) ಒಟ್ಟು 16,135 ಪ್ರಕರಣಗಳು ವರದಿಯಾಗಿದ್ದವು. ಈ ಸಂಖ್ಯೆಗೆ ಹೋಲಿಸಿದರೆ ಮಂಗಳವಾರ ವರದಿಯಾಗಿರುವ ಪ್ರಕರಣಗಳ ಸಂಖ್ಯೆ ಸುಮಾರು 3 ಸಾವಿರದಷ್ಟು ಕಡಿಮೆ. ದೇಶದಲ್ಲಿ ಪ್ರಸ್ತುತ 1,14,475 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 5,25,242 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈವರೆಗೆ 4,28,91,933 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೇಶದ ದೈನಂದಿನ ಪಾಸಿಟಿವಿಟಿ ಸರಾಸರಿಯು ಶೇ 2.90 ಇದ್ದರೆ ವಾರದ ಪಾಸಿಟಿವಿಟಿ ಸರಾಸರಿಯು ಶೇ 3.81 ಇದೆ. ದೇಶದಲ್ಲಿ ಈವರೆಗೆ 198.09 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ.

ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಲು ಇರುವ ಕಾರಣಗಳ ಬಗ್ಗೆ ವಿಜ್ಞಾನಿಗಳು ಪರಿಶೀಲಿಸುತ್ತಿದ್ದಾರೆ. BA.2.75 ಮತ್ತು ಇತರ ಕೆಲವು ಒಮಿಕ್ರಾನ್ ರೂಪಾಂತರಿಯ ಉಪತಳಿಗಳು ಹೆಚ್ಚು ಗಮನ ಸೆಳೆಯುತ್ತಿದೆ. BA.2.75 ಉಪತಳಿಯು BA.2 ತಳಿಗೆ ಸೇರಿದ್ದು, ಭಾರತದಲ್ಲಿ ಕಳೆದ ಒಂದು ವರ್ಷದಿಂದ ಇದು ಹೆಚ್ಚಾಗಿ ಕಂಡುಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಕಂಡುಬರುತ್ತಿರುವ ಒಮಿಕ್ರಾನ್ ಉಪತಳಿಗಳಲ್ಲಿ ಈ ತಳಿಯು ಶೇ 18ರಷ್ಟು ಹೆಚ್ಚಾಗಿ ಕಂಡುಬರುತ್ತಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada