ಬೆಂಗಳೂರು: ರಾಜ್ಯದಲ್ಲಿ ಹಾಗೂ ಬೆಂಗಳೂರಿನಲ್ಲಿ ದಿನೇದಿನೆ ಮಹಾಮಾರಿ ಕೊರೊನಾ (Coronavirus) ಸೋಂಕು ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಇಂದು 1,073 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಬೆಂಗಳೂರಿನಲ್ಲಿಂದು 1,008 ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು ಬೆಂಗಳೂರಿನಲ್ಲಿ ಓರ್ವರು ಮೃತಪಟ್ಟಿದ್ದಾರೆ(Death). ರಾಜ್ಯದಲ್ಲಿ ಒಟ್ಟು 6,134 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದ್ದು ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ರೇಟ್ ಶೇಕಡಾ 4.19ರಷ್ಟಿದೆ.
ಇಂದಿನ 01/07/2022 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/dGB6TRwJ3G@CMofKarnataka @BSBommai @mla_sudhakar @Comm_dhfwka @MDNHM_Kar @BBMPCOMM @mysurucitycorp @mangalurucorp @DDChandanaNews @PIBBengaluru @KarnatakaVarthe pic.twitter.com/5CmVUehIe3
— K'taka Health Dept (@DHFWKA) July 1, 2022
ದೇಶದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಕೊರೊನಾ ಲಸಿಕೆಯ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್ಗೆ ಲಸಿಕೆಯನ್ನು ಮೊದಲು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. ಇದೀಗ ಬೂಸ್ಟರ್ ಡೋಸ್ ಕೂಡ ನೀಡಲಾಗುತ್ತಿದೆ.