ಕರ್ನಾಟಕದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳ! ಹತ್ತು ದಿನದಲ್ಲಿ 461 ಮಂದಿ ಕೊವಿಡ್​ಗೆ ಬಲಿ

100 ಕೊರೊನಾ ಸಾವಿನ ಪೈಕಿ 8 ಮಂದಿ ಮನೆಯಲ್ಲೇ ಸಾವಿಗೀಡಾಗುತ್ತಿದ್ದಾರೆ. ಈ ಸಾವಿನಲ್ಲಿ ಬಹುತೇಕ ಮಂದಿ ಹಿರಿಯ ವಯಸ್ಕರಾಗಿದ್ದರೆ. ಮನೆಯಲ್ಲೇ ಕೊರೊನಾಗೆ ಬಲಿಯಾಗುತ್ತಿರಲು ಕಾರಣ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಕರ್ನಾಟಕದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳ! ಹತ್ತು ದಿನದಲ್ಲಿ 461 ಮಂದಿ ಕೊವಿಡ್​ಗೆ ಬಲಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: sandhya thejappa

Updated on:Feb 02, 2022 | 12:10 PM

ಬೆಂಗಳೂರು: ರಾಜ್ಯದಲ್ಲಿ ಸದ್ಯ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಭೀತಿಗೆ ಕಾರಣವಾಗಿದೆ. ಕಳೆದ ಹತ್ತು ದಿನದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ಜನವರಿ 22 ರಿಂದ 31ರ ವರೆಗೆ ಕರ್ನಾಟಕದಲ್ಲಿ (Karnataka) ಸುಮಾರು 461 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 39 ಮಂದಿ ಚಿಕತ್ಸೆಗೆ ಮುನ್ನವೇ ಕೊರೊನಾಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. 39 ಸಾವಿನ ಪೈಕಿ, 32 ಮಂದಿ ಮನೆಯಲ್ಲೇ ಸಾವಿಗೀಡಾಗಿದ್ದಾರೆ. ಇನ್ನು 7 ಮಂದಿ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

100 ಕೊರೊನಾ ಸಾವಿನ ಪೈಕಿ 8 ಮಂದಿ ಮನೆಯಲ್ಲೇ ಸಾವಿಗೀಡಾಗುತ್ತಿದ್ದಾರೆ. ಈ ಸಾವಿನಲ್ಲಿ ಬಹುತೇಕ ಮಂದಿ ಹಿರಿಯ ವಯಸ್ಕರಾಗಿದ್ದರೆ. ಮನೆಯಲ್ಲೇ ಕೊರೊನಾಗೆ ಬಲಿಯಾಗುತ್ತಿರಲು ಕಾರಣ ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆರೋಗ್ಯ ಸಮಸ್ಯೆ ಇರುವವರು ಎಚ್ಚರ ವಹಿಸದೇ ಇರುವುದು ಮನೆಯಲ್ಲಿ ಮೃತಪಡುತ್ತಿದ್ದಾರೆ. ರೋಗ ಲಕ್ಷಣಗಳು ಇದ್ದರೂ ಕೊವಿಡ್ ಟೆಸ್ಟ್​ಗೆ ಮುಂದಾಗುತ್ತಿಲ್ಲ.

24 ಗಂಟೆಯಲ್ಲಿ 1,61,386 ಕೊವಿಡ್ ಕೇಸ್ ಪತ್ತೆ: ದೇಶದಲ್ಲಿ 24 ಗಂಟೆಯಲ್ಲಿ 1,61,386 ಕೊವಿಡ್ ಕೇಸ್ ಪತ್ತೆಯಾಗಿದ್ದು, 24 ಗಂಟೆಯಲ್ಲಿ 1,733 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 2,81,109 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ಭಾರತದಲ್ಲಿ 16,21,603 ಕೊವಿಡ್ ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಪ್ರತಿನಿತ್ಯದ ಕೊವಿಡ್ ಪಾಸಿಟಿವಿಟಿ ದರ ಶೇ.9.26 ಇದೆ. 167.29 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ.

ಮಕ್ಕಳಿಗೆ ಬರೆಯಿಟ್ಟ ಕೊರೊನಾ: ಮಹಾಮಾರಿ ಕೊರೊನಾ ಬೆಂಗಳೂರು ಶಾಲಾ ಮಕ್ಕಳ ಶಿಕ್ಷಣಕ್ಕೆ ಬರೆಯಿಟ್ಟಿದೆ. ಕೊರೊನಾ ಕಾಟದಿಂದ ಶಾಲೆಗಳಲ್ಲಿ ಶಿಕ್ಷಣ ಕಾರ್ಯ ಸರಿಯಾಗಿ ನಡೆಯುತ್ತಿಲ್ಲ. ಆದರೆ ಇಲ್ಲಿ ಮತ್ತೊಂದು ಸಮಸ್ಯೆ ಎದುರಾಗಿದೆ. ಶಿಕ್ಷಣ ಇಲಾಖೆಗೆ ಅರ್ಧಕ್ಕೆ ಶಾಲೆಬಿಟ್ಟ ಮಕ್ಕಳ ಪತ್ತೆ ಟೆನ್ಷನ್ ಶುರುವಾಗಿದೆ. ಶಾಲೆ ಬಿಟ್ಟವರ ಪೈಕಿ ಅರ್ಧಕ್ಕಿಂತ ಕಡಿಮೆ ಮಕ್ಕಳು ಮಾತ್ರ ಶಾಲೆಗೆ ವಾಪಸ್ ಆಗಿದ್ದಾರೆ. ಇನ್ನು ಉಳಿದವರನ್ನು ಮತ್ತೆ ಶಾಲೆಗೆ ಕರೆತರುವುದು ದೊಡ್ಡ ಸವಾಲಾಗಿದೆ. ಕೊರೊನಾ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆ ಮಕ್ಕಳ ಸುರಕ್ಷತೆಗಾಗಿ ಶಾಲೆಗಳನ್ನು ಬಂದ್ ಮಾಡಿಸಿತ್ತು. ಸದ್ಯ ಕೊರೊನಾ ಕಡಿಮೆಯಾದ ಹಿನ್ನೆಲೆ ಮತ್ತೆ ಶಾಲೆಗಳನ್ನು ತೆರೆಯಲಾಗಿದೆ. ಆದ್ರೆ ಮಕ್ಕಳ ಸಂಖ್ಯೆಯಲ್ಲಿ ಭಾರಿ ಇಳಿಕೆಯಾಗಿದೆ. ಅನೇಕ ಮಕ್ಕಳು ಶಾಲೆಗಳ ಮೇಲೆ ಒಲವು ಕಳೆದುಕೊಂಡಿದ್ದಾರೆ.

ಇದನ್ನೂ ಓದಿ

ಅನುಮತಿ ಪಡೆಯದೆ ರಸ್ತೆ ಅಗೆದರೆ ಬೀಳುತ್ತೆ FIR; ಬೆಸ್ಕಾಂ, ಜಲಮಂಡಳಿ ನಿರ್ಲಕ್ಷ್ಯಕ್ಕೆ ಕಡಿವಾಣ ಹಾಕಲು ಮುಂದಾದ ಬಿಬಿಎಂಪಿ

ಬೆಂಗಳೂರಿನಲ್ಲಿ ಗುಂಪು ಕಟ್ಟಿ ಮನೆಗಳ್ಳತನ ಮಾಡುತ್ತಿದ್ದ ನಟೋರಿಯಸ್ ರೌಡಿ ಅರೆಸ್ಟ್! ಬಂಧಿತರಿಂದ ಅರವತ್ತು ಲಕ್ಷ ಚಿನ್ನಾಭರಣ ವಶ

Published On - 12:07 pm, Wed, 2 February 22

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ