ದೆಹಲಿ ಸೇರಿ ಕೆಲ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗ್ತಿದೆ; ಮುನ್ನೆಚ್ಚರಿಕೆ ಕ್ರಮ ಅಗತ್ಯ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ದೆಹಲಿ ಮತ್ತು ಕೆಲ ರಾಜ್ಯಗಳಲ್ಲಿ ಕಳೆದ ಒಂದು ವಾರದಿಂದ ಗಣನೀಯವಾಗಿ ಕೊರೊನಾ ಕೇಸ್ಗಳು ಹೆಚ್ಚಾಗುತ್ತಿವೆ. ಇದರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಸಂಗ್ರಹಿಸಲು ಸೂಚನೆ ನೀಡಿದ್ದೇನೆ. ಈಗಾಗಲೇ ಮಾಸ್ಕ್ ಧರಿಸಲು ಹೇಳಿದ್ದರೂ ಜನರು ಧರಿಸುತ್ತಿಲ್ಲ. ಮೂರನೇ ಡೋಸ್ ಯಾರು ಸರಿಯಾಗಿ ತೆಗೆದುಕೊಂಡಿಲ್ಲ. -ಡಾ.ಕೆ.ಸುಧಾಕರ್

ದೆಹಲಿ ಸೇರಿ ಕೆಲ ರಾಜ್ಯಗಳಲ್ಲಿ ಕೊರೊನಾ ಹೆಚ್ಚಾಗ್ತಿದೆ; ಮುನ್ನೆಚ್ಚರಿಕೆ ಕ್ರಮ ಅಗತ್ಯ -ಆರೋಗ್ಯ ಸಚಿವ ಡಾ.ಕೆ.ಸುಧಾಕರ್
ಡಾ.ಕೆ. ಸುಧಾಕರ್
Follow us
TV9 Web
| Updated By: ಆಯೇಷಾ ಬಾನು

Updated on:Apr 20, 2022 | 12:48 PM

ಬೆಂಗಳೂರು: ದೆಹಲಿ ಸೇರಿ ಕೆಲ ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಈಗಾಗಲೇ ಮಾಸ್ಕ್ ಧರಿಸಲು ಹೇಳಿದ್ದರೂ ಜನರು ಧರಿಸುತ್ತಿಲ್ಲ. 3ನೇ ಡೋಸ್ ಲಸಿಕೆಯನ್ನ ಸರಿಯಾಗಿ ತೆಗೆದುಕೊಂಡಿಲ್ಲ. ಸುಮಾರು 30 ಲಕ್ಷ ಜನ 2ನೇ ಡೋಸ್ ಲಸಿಕೆಯನ್ನ ಪಡೆದಿಲ್ಲ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗೂ ರಾಜ್ಯದಲ್ಲಿ ಕೊರೊನಾದ ನಾಲ್ಕನೇ ಅಲೆ ಬಂದಿಲ್ಲ. ಆದರೂ ಮಾಸ್ಕ್ ಧರಿಸುವ ಹಾಗೂ ಲಸಿಕೆ ಪಡೆಯುವ ಮೂಲಕ ಜನರು ಹೆಚ್ಚು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ತಿಳಿಸಿದ್ದಾರೆ.

ದೆಹಲಿ ಮತ್ತು ಕೆಲ ರಾಜ್ಯಗಳಲ್ಲಿ ಕಳೆದ ಒಂದು ವಾರದಿಂದ ಗಣನೀಯವಾಗಿ ಕೊರೊನಾ ಕೇಸ್ಗಳು ಹೆಚ್ಚಾಗುತ್ತಿವೆ. ಇದರ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ಸಂಗ್ರಹಿಸಲು ಸೂಚನೆ ನೀಡಿದ್ದೇನೆ. ಈಗಾಗಲೇ ಮಾಸ್ಕ್ ಧರಿಸಲು ಹೇಳಿದ್ದರೂ ಜನರು ಧರಿಸುತ್ತಿಲ್ಲ. ಮೂರನೇ ಡೋಸ್ ಯಾರು ಸರಿಯಾಗಿ ತೆಗೆದುಕೊಂಡಿಲ್ಲ. ಎರಡನೇ ಡೋಸ್ ಸುಮಾರು 30 ಲಕ್ಷ ಜನ ಇನ್ನು ತೆಗೆದುಕೊಂಡಿಲ್ಲ. ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡುತ್ತೇನೆ. ಇನ್ನು ನಮ್ಮ ರಾಜ್ಯಕ್ಕೆ ನಾಲ್ಕನೇ ಅಲೆ ಎಂಟ್ರಿ ಆಗಿಲ್ಲ. ಪ್ರತಿನಿತ್ಯ ಪರೀಕ್ಷೆ ಮಾಡುತ್ತಿದ್ದೇವೆ. ಯಾವುದೇ ರೀತಿ ಕೇಸ್ಗಳು ಏರಿಕೆಯಾಗಿಲ್ಲ. ನಿಯಮಗಳನ್ನು ಮತ್ತೆ ತರುವ ಬಗ್ಗೆ ಈಗಲೇ ಹೇಳುವುದು ಕಷ್ಟಸಾಧ್ಯ. ಈಗಿನ ಪರಿಸ್ಥಿತಿಯಲ್ಲಿ ರಾಜ್ಯ ಒಳ್ಳೆಯ ರೀತಿಯಲ್ಲಿ ನಿಯಂತ್ರಣ ಮಾಡಿದೆ. ಜನರು ಕೂಡ ಕೆಲ ನಿಯಮಗಳನ್ನು ಪಾಲನೆ ಮಾಡಬೇಕು. ಮಾಸ್ಕನ್ನು ಧರಿಸುವುದರಿಂದ ಯಾವುದೇ ರೀತಿ ತೊಂದರೆ ಇಲ್ಲ ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಪ್ರಯಾಣಿಕರ ಮೇಲೆ ನಿಗಾ ಇಡುವುದು ಸೇರಿದಂತೆ ಹಲವು ಕ್ರಮ ವಹಿಸಲಾಗಿದೆ. ಆದರೂ ಬೇರೆ ರಾಜ್ಯಗಳಲ್ಲಿ ಸೋಂಕು ಹೆಚ್ಚಾದಾಗ ಸಹಜವಾಗಿ ಹರಡುತ್ತದೆ. ಆದ್ದರಿಂದ ಜನರು ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕಿದೆ. ಹೆಚ್ಚು ಜನರು ಸೇರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆ ಹೆಚ್ಚಾಗಿ ನೀಡಿರುವುದರಿಂದ ಮೂರನೇ ಅಲೆ ನಿಯಂತ್ರಣಕ್ಕೆ ಬಂದಿದೆ. ಆದರೆ ರಾಜ್ಯದಲ್ಲಿ ನಾಲ್ಕನೇ ಅಲೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ 97.9% ಜನರು ಎರಡನೇ ಡೋಸ್ ಪಡೆದುಕೊಂಡಿದ್ದಾರೆ. ಮೊದಲ ಡೋಸ್ ಅನ್ನು ಪಡೆದವರ ಪ್ರಮಾಣ 100% ದಾಟಿದೆ. 12 ವರ್ಷ ಮೇಲ್ಪಟ್ಟವರಲ್ಲಿ ಹೆಚ್ಚಿನವರಿಗೆ ಲಸಿಕೆ ಕೊಡಿಸಬೇಕಿದೆ. ಪೋಷಕರು ಈ ಬಗ್ಗೆ ಗಮನ ನೀಡಬೇಕು ಎಂದರು.

ಭ್ರಷ್ಟಾಚಾರ ಹುಟ್ಟುಹಾಕಿದ ಪಕ್ಷ ಕಾಂಗ್ರೆಸ್ 25 ವರ್ಷ ಮೇಲ್ಪಟ್ಟವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಇದು ಸಂವಿಧಾನ ನೀಡಿರುವ ಅವಕಾಶವಿದೆ. ಅದೇ ಆಧಾರದಲ್ಲಿ ಸ್ವಾಮೀಜಿಗಳು ಕೂಡ ಸ್ಪರ್ಧೆ ಮಾಡಬಹುದು. ಕಾಂಗ್ರೆಸ್ ಪಕ್ಷವು ಇಡೀ ದೇಶದಲ್ಲಿ ಭ್ರಷ್ಟಾಚಾರವನ್ನು ಹುಟ್ಟುಹಾಕಿದ ಪಕ್ಷವಾಗಿದೆ. ಕಾಂಗ್ರೆಸ್ಸಿಗರು ಇದೇ ಭ್ರಷ್ಟಾಚಾರದ ಆರೋಪವನ್ನು ಮಾಡಿ ಚುನಾವಣೆ ಎದುರಿಸಲು ಮುಂದಾಗಿದ್ದಾರೆ. ಬೇರೆ ರಾಜ್ಯಗಳಲ್ಲಿ ವಿಫಲರಾದಂತೆಯೇ ಕರ್ನಾಟಕದಲ್ಲೂ ಅವರು ವಿಫಲರಾಗುವುದು ಖಚಿತ ಎಂದರು.

ಇದನ್ನೂ ಓದಿ: CM Bommai Press Meet: ಯಾವುದೇ ಮೌಖಿಕ ಆದೇಶದ ಕಾಮಗಾರಿ ಮಾಡಬಾರದು, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ

ದಿಂಗಾಲೇಶ್ವರ ಸ್ವಾಮೀಜಿ ನನ್ನ ಪರ ಮಾತಾಡಿದ್ದಕ್ಕೆ ಅಭಿನಂದನೆ; ಆದ್ರೆ ಕಮಿಷನ್ ಬಗ್ಗೆ ಆರೋಪಿಸುವ ಬದಲಿಗೆ ದಾಖಲೆ ನೀಡಲಿ -ಕೆ.ಎಸ್.ಈಶ್ವರಪ್ಪ

Published On - 12:02 pm, Wed, 20 April 22

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್