ಕೇರಳದಲ್ಲಿ ಕೊರೊನಾ ಹೆಚ್ಚಳ; ಬೆಂಗಳೂರಿನಿಂದ ಅಯ್ಯಪ್ಪ ದರ್ಶನಕ್ಕೆ ತೆರಳಿರುವ ಭಕ್ತರಿಗೆ ಶಾಕ್ ಕೊಡುತ್ತಾ ಬಿಬಿಎಂಪಿ?

ಕೇರಳದಲ್ಲಿ ಕೊರೊನಾ(Corona) ಹೆಚ್ಚಳವಾಗಿದೆ. ಈ ಮಧ್ಯೆ ಬೆಂಗಳೂರಿ(Bengaluru)ನಿಂದ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತರು ಕೇರಳಕ್ಕೆ ಹೋಗಿದ್ದು, ಪಾಲಿಕೆಗೆ ಟೆನ್ಷನ್ ಆಗಿ ಪರಿಣಮಿಸಿದೆ. ಈ ಹಿನ್ನಲೆ ದರ್ಶನದ ಬಳಿಕ ವಾಪಾಸ್​ ಬಂದವರಿಗೆ ಸ್ಕ್ರೀನಿಂಗ್ ಮಾಡಿಸುವ ಬಗ್ಗೆ ಪಾಲಿಕೆಯಲ್ಲಿ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಯುತ್ತಿದೆ.

ಕೇರಳದಲ್ಲಿ ಕೊರೊನಾ ಹೆಚ್ಚಳ; ಬೆಂಗಳೂರಿನಿಂದ ಅಯ್ಯಪ್ಪ ದರ್ಶನಕ್ಕೆ ತೆರಳಿರುವ ಭಕ್ತರಿಗೆ ಶಾಕ್ ಕೊಡುತ್ತಾ ಬಿಬಿಎಂಪಿ?
ಬಿಬಿಎಂಪಿ, ಅಯ್ಯಪ್ಪ ಭಕ್ತರು
Follow us
Vinayak Hanamant Gurav
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 19, 2023 | 2:47 PM

ಬೆಂಗಳೂರು, ಡಿ.19: ಕೇರಳದಲ್ಲಿ ಕೊರೊನಾ(Corona) ಹೆಚ್ಚಳವಾಗಿದೆ. ಈ ಮಧ್ಯೆ ಬೆಂಗಳೂರಿ(Bengaluru)ನಿಂದ ಅಯ್ಯಪ್ಪನ ದರ್ಶನಕ್ಕಾಗಿ ಭಕ್ತರು ಕೇರಳಕ್ಕೆ ಹೋಗಿದ್ದು, ಪಾಲಿಕೆಗೆ ಟೆನ್ಷನ್ ಆಗಿ ಪರಿಣಮಿಸಿದೆ. ಈ ಕುರಿತು ಮಾತನಾಡಿದ ಬಿಬಿಎಂಪಿ(BBMP)ಆರೋಗ್ಯ ವಿಭಾಗದ ವಿಶೇಷ ಆಯುಕ್ತ ರೆಡ್ಡಿ ಶಂಕರ್ ಬಾಬು ‘ಅಯ್ಯಪ್ಪ ದರ್ಶನದ ಬಳಿಕ ವಾಪಾಸ್ ಆಗುವ ಭಕ್ತಾದಿಗಳಿಗೆ ಸ್ಕ್ರೀನಿಂಗ್ ಮಾಡಿಸುವ ಬಗ್ಗೆ ಪಾಲಿಕೆಯಲ್ಲಿ ಅಧಿಕಾರಿಗಳ ಚರ್ಚೆ ನಡೆಯುತ್ತಿದೆ. ಆದರೆ, ನಾಳಿ(ಡಿ.20)ನ ಕೇಂದ್ರ ಆರೋಗ್ಯ ಇಲಾಖೆಯ ಸಭೆ ಬಳಿಕ ಬರುವ ಮಾರ್ಗಸೂಚಿಗೆ ಬಿಬಿಎಂಪಿ ಕಾಯುತ್ತಿದೆ ಎಂದರು.

ಕೇಂದ್ರ ಸರ್ಕಾರದ ನಿರ್ಧಾರವೂ ಬಂದ ಬಳಿಕ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಸದ್ಯಕ್ಕೆ ಬೆಂಗಳೂರಲ್ಲಿ ಕೋವಿಡ್ ಪ್ಯಾ‌ನಿಕ್ ಪರಿಸ್ಥಿತಿ ಇಲ್ಲ. ಜನ ಹೆದರುವುದು ಬೇಡ, ಕೇಸ್ ಕಡಿಮೆ ಇದೆ. ಆದರೂ ಮುನ್ನೆಚ್ಚರಿಕೆ ಅಗತ್ಯವಿದ್ದು, ರಾಜ್ಯ ಸರ್ಕಾರ ಮತ್ತು ಕೇಂದ್ರದ ಗೈಡ್ ಲೈನ್ಸ್ ಪ್ರಕಾರ ಕ್ರಮಗಳನ್ನ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ:ಕೊರೊನಾ ಪರೀಕ್ಷೆ ಹೆಚ್ಚಿಸುತ್ತೇವೆ, ನಿರ್ಬಂಧ ಸದ್ಯಕ್ಕಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ರಾಜ್ಯದಲ್ಲಿ ಕೊರೋನಾ ಸೋಂಕು ಹರಡುವ ಭೀತಿ ಹಿನ್ನೆಲೆ ಕೋವಿಡ್ ನಿಯಂತ್ರಣಕ್ಕೆ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್​ ನಡೆಸಲು ಆರೋಗ್ಯ ಇಲಾಖೆ ಸೂಚನೆ ನೀಡಿದ್ದು, ಇದರ ಜೊತೆಗೆ ಕೊವೀಡ್ ತುರ್ತು ಪರಿಸ್ಥಿತಿ ನಿಭಾಯಿಸಲು ಇಲಾಖೆಯು ವ್ಯವಸ್ಥೆ ಮಾಡಿಕೊಂಡಿದೆ. ಅದರಂತೆ ಆರೋಗ್ಯ ಸೌಲಭ್ಯಗಳ ಲಭ್ಯತೆ, ಹಾಸಿಗೆಗಳ ಸಾಮರ್ಥ್ಯ, ವೈದ್ಯರು, ದಾದಿಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿ ಸೇರಿದಂತೆ ಮಾನವ ಸಂಪನ್ಮೂಲಗಳ ಲಭ್ಯತೆ. ತಾಂತ್ರಿಕ ಮತ್ತು ಅಕ್ಸಿಜನ್ ಬೆಂಬಲ ಸೌಲಭ್ಯಗಳೊಂದಿಗೆ ಆಂಬ್ಯುಲೆನ್ಸ್ ಸೇವೆ. ಪರೀಕ್ಷಾ ಸಾಮರ್ಥ್ಯ ಮತ್ತು ವೈದ್ಯಕೀಯ ಆಮ್ಲಜನಕದ ಲಭ್ಯತೆಯ ಪರಿಶೀಲನೆ, ಆರೋಗ್ಯ ಇಲಾಖೆ ರಾಜ್ಯಾದ್ಯಂತ ಸ್ಥಾಪಿಸಲಾಗಿರುವ ಆಕ್ಸಿಜನ್‌ ಪ್ಲಾಂಟ್‌, ಆಕ್ಸಿಜನ್‌ ಜನರೇಟರ್‌ ಪರೀಶೀಲನೆಯ ಜೊತೆಗೆ ಕೋವಿಡ್‌ ಉಪಕರಣಗಳು, ಸಿಬ್ಬಂದಿ ಹಾಗೂ ವ್ಯವಸ್ಥೆಗಳು ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಸೂಚನೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Tue, 19 December 23

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ