AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಕೊರೊನಾ! ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.10.21ಕ್ಕೆ ಏರಿಕೆ

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 7,113 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,90,299 ಕ್ಕೆ ಏರಿಕೆಯಾಗಿದೆ. 12,90,299 ಸೋಂಕಿತರ ಪೈಕಿ 12,41,721 ಜನರು ಗುಣಮುಖರಾಗಿದ್ದಾರೆ.

ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಕೊರೊನಾ! ಬೆಂಗಳೂರಿನಲ್ಲಿ ಪಾಸಿಟಿವಿಟಿ ರೇಟ್ ಶೇ.10.21ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
TV9 Web
| Edited By: sandhya thejappa|

Updated on:Jan 09, 2022 | 12:29 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕ ಮನೆಮಾಡಿದೆ. ನಿನ್ನೆ ಒಂದೇ ದಿನ ರಾಜ್ಯದಲ್ಲಿ 8,906 ಜನರಿಗೆ ಕೊರೊನಾ ಸೋಂಕು ತಗುಲಿದೆ. ಕೊರೊನಾ ಪಾಸಿಟಿವಿಟಿ ರೇಟ್ ಕೂಡಾ ಹೆಚ್ಚಾಗುತ್ತಿದ್ದು, ಬೆಂಗಳೂರು ನಗರದಲ್ಲಿ ನಿನ್ನೆ ಶೇ.10.21 ರಷ್ಟು ದಾಖಲಾಗಿದೆ. ಇನ್ನು ಬೆಂಗಳೂರು ಗ್ರಾಮಾಂತರದಲ್ಲಿ ಶೇ.9.36 ಕೊರೊನಾ ಪಾಸಿಟಿವಿಟಿ ರೇಟ್ ಇದೆ. ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇಂದು 9,020 ಕೊವಿಡ್ ಕೇಸ್ ಪತ್ತೆಯಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 7,113 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,90,299 ಕ್ಕೆ ಏರಿಕೆಯಾಗಿದೆ. 12,90,299 ಸೋಂಕಿತರ ಪೈಕಿ 12,41,721 ಜನರು ಗುಣಮುಖರಾಗಿದ್ದಾರೆ.

ಬೇರೆ ಜಿಲ್ಲೆಗಳ ಪಾಸಿಟಿವಿಟಿ ರೇಟ್ ಎಷ್ಟಿದೆ? ಶಿವಮೊಗ್ಗದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇ.2.19 ರಷ್ಟಿದೆ. ಮಂಡ್ಯದಲ್ಲಿ 10.41, ಮೈಸೂರು 6.83, ಕಲಬುರಗಿ, 3.55, ಹಾಸನ 4.99, ಧಾರವಾಡ 0.7, ಉಡುಪಿ 1.88, ಕೋಲಾರ 5.72, ತುಮಕೂರು 8.2, ದಕ್ಷಿಣ ಕನ್ನಡ 1.15, ಬಳ್ಳಾರಿ 9, ಚಿಕ್ಕಮಗಳೂರಿನಲ್ಲಿ ಶೇ.3.11 ರಷ್ಟಿದೆ. ಇನ್ನು ವಿಜಯಪುರದಲ್ಲಿ 0, ಉತ್ತರ ಕನ್ನಡ 2.46, ಚಿಕ್ಕಬಳ್ಳಾಪುರ 3.43, ಬೆಳಗಾವಿ 5.11, ಚಾಮರಾಜನಗರ 2, ರಾಮನಗರ ಶೇ.12.32 ರಷ್ಟಿದೆ.

ಕೊಪ್ಪಳದಲ್ಲಿ 0.71 ರಷ್ಟಿದ್ದರೆ, ದಾವಣಗೆರೆ 9.77, ಚಿತ್ರದುರ್ಗ 6.46, ಕೊಡಗು 0.27, ಯಾದಗಿರಿ 4.58, ಬೀದರ್ 1.14, ಬಾಗಲಕೋಟೆ 0.49, ಗದಗ 1.2, ರಾಯಚೂರು 1.8, ಮತ್ತು ಹಾವೇರಿಯಲ್ಲಿ ಶೇ. 0.78 ರಷ್ಟು ಕೊರೊನಾ ಪಾಸಿಟಿವಿಟಿ ರೇಟ್ ದಾಖಲಾಗಿದೆ.

ಇದನ್ನೂ ಓದಿ

ಶಶಿಕಲಾ ಜೊಲ್ಲೆ ದಂಪತಿಯಿಂದ ಸೇಡಿನ ರಾಜಕಾರಣ ಆರೋಪ; ಸದಲಗಾ ಪೊಲೀಸ್ ಠಾಣೆ ಮುಂದೆ ನೂರಾರು ಜನರಿಂದ ಧರಣಿ

Covid 19: ದೇಶದಲ್ಲಿ ಏರುತ್ತಿದೆ ಕೊರೊನಾ; ಒಂದೇ ದಿನ 1,59,632 ಪ್ರಕರಣ ಪತ್ತೆ, 327 ಜನರ ಸಾವು

Published On - 12:12 pm, Sun, 9 January 22

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್