ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಕೊರೊನಾ: ಆಸ್ಪತ್ರೆಗಳಲ್ಲಿ ಸರ್ವ ಸಿದ್ಧ

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ನಗರದ ಎಲ್ಲಾ ಆಸ್ಪತ್ರೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ವಿಕ್ಟೋರಿಯಾ, ವಾಣಿ ವಿಲಾಸ, ಮಿಂಟೋ ಆಸ್ಪತ್ರೆಗಳಲ್ಲಿ ಸಿ‌ದ್ಧತೆ ಮಾಡಿಕೊಂಡಿದ್ದು, ಆಸ್ಪತ್ರೆಯ ಒಪಿಡಿ ಬ್ಲಾಕ್​ಗಳಲ್ಲಿ ಟ್ರಯಾಜ್ ಸೆಂಟರ್ ನಿರ್ಮಾಣ ಮಾಡಲಾಗಿದೆ.

ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಕೊರೊನಾ: ಆಸ್ಪತ್ರೆಗಳಲ್ಲಿ ಸರ್ವ ಸಿದ್ಧ
ಪ್ರಾತಿನಿಧಿಕ ಚಿತ್ರ
Follow us
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ

Updated on: Dec 22, 2023 | 4:42 PM

ಬೆಂಗಳೂರು, ಡಿಸೆಂಬರ್​ 22: ದೇಶದಲ್ಲಿ ಮಹಾಮಾರಿ ಕೊರೊನಾ (Corona) ಕಾಟ ಮತ್ತೆ ಶುರುವಾಗಿದೆ. ಕೇರಳದಲ್ಲಿ ಅಬ್ಬರಿಸುತ್ತಿರುವ ಕೊರೊನಾ ಸದ್ಯ ರಾಜ್ಯಕ್ಕೂ ಕಾಲಿಟ್ಟಿದೆ. ಕರ್ನಾಟಕದಲ್ಲಿ ಸಕ್ರೀಯ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ರಾಜ್ಯದಲ್ಲಿ ನಿನ್ನೆ 92 ಪ್ರಕರಣಗಳ ಸಂಖ್ಯೆ ಇಂದು 115ಕ್ಕೆ ತಲುಪಿದೆ. ಒಂದೇ ದಿನದಲ್ಲಿ 23 ಕೇಸ್​ಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ನಗರದ ಎಲ್ಲಾ ಆಸ್ಪತ್ರೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಕೊವಿಡ್ ಆತಂಕ: ಬೆಂಗಳೂರು ನಗರದ ಆಸ್ಪತ್ರೆಗಳಲ್ಲಿ ಸಿದ್ಧತೆ

ವಿಕ್ಟೋರಿಯಾ, ವಾಣಿ ವಿಲಾಸ, ಮಿಂಟೋ ಆಸ್ಪತ್ರೆಗಳಲ್ಲಿ ಸಿ‌ದ್ಧತೆ ಮಾಡಿಕೊಂಡಿದ್ದು, ಆಸ್ಪತ್ರೆಯ ಒಪಿಡಿ ಬ್ಲಾಕ್​ಗಳಲ್ಲಿ ಟ್ರಯಾಜ್ ಸೆಂಟರ್ ನಿರ್ಮಾಣ ಮಾಡಲಾಗಿದೆ. ನಿತ್ಯ ಆಸ್ಪತ್ರೆ ಕ್ಯಾಂಪಸ್​ನಲ್ಲಿ ಸಿಬ್ಬಂದಿಗಳು RT-PCR ಟೆಸ್ಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿಗೆ ಜೆಎನ್.1 ನ ಆತಂಕ; 45 ಸ್ಯಾಂಪಲ್​ಗಳನ್ನು ಜೆನೆಮಿಕ್ ಸೀಕ್ವೆನ್ಸ್​ಗೆ ಕಳಿಸಿದ ಆರೋಗ್ಯ ಇಲಾಖೆ

ನಿನ್ನೆ 200 ಜನರಿಗೆ ಟೆಸ್ಟ್ ಮಾಡಲಾಗಿದ್ದು, 10 ಜನರಿಗೆ ಪಾಸಿಟಿವ್​ ಕಂಡುಬಂದಿತ್ತು. ಕೊವಿಡ್ ಸೋಂಕಿತರಿಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಪುರುಷರು, ಮಹಿಳೆಯರು, ಮಕ್ಕಳಿಗೆ ಪ್ರತ್ಯೇಕ ವಾರ್ಡ್​ ನಿರ್ಮಾಣ ಮಾಡಲಾಗಿದೆ.

ಐಸಿಯುನಲ್ಲಿ 6 ಬೆಡ್​ಗಳನ್ನು ಇರಿಸಲಾಗಿದೆ. ಚಿಕಿತ್ಸೆ ನೀಡಲು ನರ್ಸ್, ವೈದ್ಯರು, ಟೆಕ್ನಷಿಯನ್ಸ್​​​ಗಳನ್ನು ಆಸ್ಪತ್ರೆ ಹೊಂದಿದೆ. ಆಸ್ಪತ್ರೆಯಲ್ಲಿ ಪಿಪಿಇ ಕಿಟ್, ಮಾಸ್ಕ್, ಆಕ್ಸಿಜನ್ ಸಿಲಿಂಡರ್, ಲಿಕ್ವಿಡ್ ಆಕ್ಸಿಜನ್ ಹಾಗೂ ಆಕ್ಸಿಜನ್ ಜನರೇಟರ್​ಗಳನ್ನ ಪರಿಶೀಲಿಸಿ ಸಿದ್ಧಗೊಳಿಸಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಂದು 10 ಕೊವಿಡ್ ಕೇಸ್ ಪತ್ತೆ

ನಿನ್ನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 200 ಜನರಿಗೆ ಕೊವಿಡ್ ಟೆಸ್ಟ್​ ಮಾಡಲಾಗಿತ್ತು. ಈ ಪೈಕಿ ಇಂದು 10 ಜನರಿಗೆ ಕೊವಿಡ್ ಸೋಂಕು ದೃಢ ಪಟ್ಟಿದೆ. ಆಸ್ಪತ್ರೆಯ ಸಿಬ್ಬಂದಿಗಳು ಪ್ರತಿದಿನ 300 ಕೊವಿಡ್​ ಟೆಸ್ಟ್​ ಮಾಡುತ್ತಿದ್ದಾರೆ. ವಿಕ್ಟೋರಿಯಾ, ವಾಣಿವಿಲಾಸ, ಟ್ರಾಮಾ ಕೇರ್​​ನಲ್ಲಿ ಕೊವಿಡ್ ಟೆಸ್ಟ್ ಮಾಡಲಾಗುತ್ತಿದೆ.

ಮಗುವಿಗೆ ಕೊವಿಡ್ ಸೋಂಕು ದೃಡ

ಬೆಂಗಳೂರು ಗ್ರಾಮಾಂತರದಲ್ಲಿ ಮೊದಲ ಕೊರೊನಾ ಕೇಸ್ ಪತ್ತೆಯಾಗಿದೆ. ದೇವನಹಳ್ಳಿ ತಾಲೂಕಿನ ನಲ್ಲೂರು ಬಳಿ ಓರ್ವ ಮಗುವಿಗೆ ಸೋಂಕು ತಗುಲಿದೆ. ಜ್ವರ ಮತ್ತು ಕೆಮ್ಮು ಅಂತ ಟೆಸ್ಟ್ ಮಾಡಿಸಿದ್ದ ಮಗುವಿಗೆ ಕೊರೊನಾ ದೃಢಪಟ್ಟಿದೆ. ಸಾರಿ ಕೇಸ್ ಹಿನ್ನೆಲೆ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಐಸೋಲೆಷನ್ ಮಾಡಲಾಗಿದೆ. ಆರೋಗ್ಯ ಅಧಿಕಾರಿಗಳು ಸ್ಪರ್ಶ ಮಕ್ಕಳಿಗೆ ಸ್ಕ್ರೀನಿಂಗ್ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.