ವೇಗವಾಗಿ ಹರಡುತ್ತಿದೆ ರೂಪಾಂತರಿ ಕೊರೊನಾ ವೈರಸ್! ಕಡ್ಡಾಯವಾಗಿ ಮಾಸ್ಕ್ ಧರಿಸಲು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮನವಿ

ಟೆಸ್ಟ್​ನಲ್ಲಿ ಪಾಸಿಟಿವ್ ಬಂದರೆ ಪ್ರತ್ಯೇಕವಾಗಿ ಇಡಲಾಗುತ್ತದೆ. ಒಂದು ವಾರದ ಬಳಿಕ ಮತ್ತೊಂದು ಟೆಸ್ಟ್ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ.

ವೇಗವಾಗಿ ಹರಡುತ್ತಿದೆ ರೂಪಾಂತರಿ ಕೊರೊನಾ ವೈರಸ್! ಕಡ್ಡಾಯವಾಗಿ ಮಾಸ್ಕ್ ಧರಿಸಲು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮನವಿ
ಆರೋಗ್ಯ ಸಚಿವ ಡಾ ಕೆ ಸುಧಾಕರ್
Follow us
TV9 Web
| Updated By: sandhya thejappa

Updated on:Nov 27, 2021 | 11:39 AM

ಬೆಂಗಳೂರು: ಕೆಲವು ದಿನಗಳಿಂದ ಆಫ್ರಿಕಾ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಕೊರೊನಾ (Coronavirus) ಹೊಸ ತಳಿ ಪತ್ತೆಯಾಗಿದೆ. ಕೊರೊನಾ ಡೆಲ್ಟಾ ಎರಡನೇ ಅಲೆಯಲ್ಲಿ ವ್ಯಾಪಕವಾಗಿ ಹರಡಿತ್ತು. ಈಗ ಹೊಸದಾಗಿ ಒಮಿಕ್ರಾನ್ ಕಾಣಿಸಿಕೊಂಡಿದೆ. ಸಮುದಾಯಕ್ಕೆ ವೇಗವಾಗಿ ಹರಡುತ್ತದೆ ಎನ್ನುವ ಮಾಹಿತಿ ಇದೆ ಎಂದು ತಿಳಿಸಿದ ಆರೋಗ್ಯ ಸಚಿವ ಡಾ.ಕೆ ಸುಧಾಕರ್, ರೂಪಾಂತರಿ ಕೊವಿಡ್ ವೈರಸ್ ಬಹಳ ವೇಗವಾಗಿ ಹರಡುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯೇ ಈ ಬಗ್ಗೆ ಮಾಹಿತಿ ನೀಡಿದೆ. ಹೊಸ ವೈರಸ್ ಬಗ್ಗೆ ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ನಿನ್ನೆ ಇದೇ ವಿಚಾರವಾಗಿ ಸಭೆ ಮಾಡಿ ಗೈಡ್​ಲೈನ್ಸ್ ರಿಲೀಸ್ ಮಾಡಲಾಗಿದೆ. ರೂಪಾಂತರಿ ವೈರಸ್ ಇರುವ ದೇಶದಿಂದ ಬಂದರೆ ಏರ್​ಪೋರ್ಟ್​ನಲ್ಲೆ ಟೆಸ್ಟ್ ಮಾಡಲಾಗುತ್ತದೆ ಅಂತ ತಿಳಿಸಿದ್ದಾರೆ.

ಟೆಸ್ಟ್​ನಲ್ಲಿ ಪಾಸಿಟಿವ್ ಬಂದರೆ ಪ್ರತ್ಯೇಕವಾಗಿ ಇಡಲಾಗುತ್ತದೆ. ಒಂದು ವಾರದ ಬಳಿಕ ಮತ್ತೊಂದು ಟೆಸ್ಟ್ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಹೇಳಿಕೆ ನೀಡಿದ್ದಾರೆ.

ಧಾರವಾಡದ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿಗಳಿಗೂ ಟೆಸ್ಟ್ ನಡೆಸಲಾಗಿದೆ. ಜಿನೋಮಿಕ್ ಸೀಕ್ವೆನ್ಸ್ ಟೆಸ್ಟಿಂಗ್​ಗೆ ಸ್ಯಾಂಪಲ್ ಕಳಿಸಿದ್ದೇವೆ. ಟೆಸ್ಟ್ ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ಗಂಭೀರ ಸಮಸ್ಯೆ ಇಲ್ಲ ಅಂತ ಸುಧಾಕರ್ ಹೇಳಿದ್ದಾರೆ.

ಮನವಿ ಮಾಡಿದ ಸುಧಾಕರ್ 45 ಲಕ್ಷ ಜನ ಇನ್ನೂ 2ನೇ ಡೋಸ್ ಲಸಿಕೆಯನ್ನು ಪಡೆದಿಲ್ಲ. ಅವಧಿ ಮುಗಿದಿದ್ದರೂ ಕೆಲವರು ಲಸಿಕೆಯನ್ನು ಪಡೆದಿಲ್ಲ. ಉದಾಸೀನ ಮಾಡದೆ ಕೊವಿಡ್ ಲಸಿಕೆಯನ್ನು ಪಡೆಯಬೇಕು. ಉದಾಸೀನ ಮಾಡಿದರೆ ಗಂಭೀರ ಸಮಸ್ಯೆ ಎದುರಿಸಬೇಕಾಗುತ್ತದೆ. ಲಸಿಕೆ ಪಡೆಯದವರು ತಕ್ಷಣವೇ ಪಡೆಯಬೇಕೆಂದು ಮನವಿ ಮಾಡಿದ ಸಚಿವರು, ರೂಪಾಂತರಿ ವೈರಸ್ ಬರುತ್ತಿರುವ ಹಿನ್ನೆಲೆ ಎಚ್ಚೆತ್ತುಕೊಳ್ಳಬೇಕು. ನಾವು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚು ಲಸಿಕೆ ನೀಡಿದ್ದೇವೆ. ಎಲ್ಲರೂ ಒಟ್ಟಾಗಿ ಕೊರೊನಾ ಸೋಂಕು ಸೋಲಿಸಬೇಕಾಗಿದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಅಂತ ತಿಳಿಸಿದರು.

B.1.1.529 ರೂಪಾಂತರಿಗೆ ‘ಒಮಿಕ್ರಾನ್’ ಎಂದು ಹೆಸರು. ‘ಒಮಿಕ್ರಾನ್’ ವೈರಸ್ ಹರಡುವ ಪ್ರಮಾಣ ಹೆಚ್ಚಾಗಿದೆ. ಆದರೆ ರೋಗ ಲಕ್ಷಣಗಳು ಮೊದಲಿನಂತೆ ಇವೆ. ಡೆಲ್ಟಾಗಿಂತ ಗಂಭೀರ ಇದ್ಯಾ ಎಂದು ಪರಿಶೀಲಿಸಬೇಕು. ಜಿನೋಮಿಕ್ ಸೀಕ್ವೆನ್ಸಿಂಗ್ ಮೂಲಕ ತಿಳಿಯಬೇಕಾಗಿದೆ ಅಂತ ಹೇಳಿದರು.

ಮುಂದುವರಿದು ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಔಷಧ ಕೊರತೆ ಇರಲ್ಲ. ಸೋಮವಾರದಿಂದ ಕೊರತೆ ಆಗದಂತೆ ನೋಡಿಕೊಳ್ಳುತ್ತೇವೆ. ಎಲ್ಲ ಔಷಧ ಪೂರೈಕೆ ಮಾಡುವುದಕ್ಕೆ ಕ್ರಮಕೈಗೊಳ್ಳುತ್ತೇವೆ. ಸೋಮವಾರದಿಂದ ಔಷಧಕ್ಕಾಗಿ ಚೀಟಿ ಬರೆದುಕೊಡಲ್ಲ. ಹೊರಗೆ ಔಷಧ ತರುವಂತೆ ಚೀಟಿ ಬರೆದುಕೊಡುವುದಿಲ್ಲ. ಈ ನಿಟ್ಟಿನಲ್ಲಿ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನುಡಿದರು.

ಇದನ್ನೂ ಓದಿ

ವಿಜಯನಗರ: ಪುನೀತ್‌ ರಾಜ್​ಕುಮಾರ್​ ಪುಣ್ಯಸ್ಮರಣೆ; 75 ಜನರಿಂದ ನೇತ್ರದಾನ, ರಕ್ತದಾನ, ಅನ್ನ ಸಂತರ್ಪಣೆ

ತೆಲಂಗಾಣದ ಮಹೀಂದ್ರಾ ಯೂನಿವರ್ಸಿಟಿಯಲ್ಲಿ 30 ಮಂದಿಗೆ ಕೊರೊನಾ ಸೋಂಕು; ವಿಶ್ವವಿದ್ಯಾಲಯ ಲಾಕ್​, ಸೋಂಕಿತರು ಆಸ್ಪತ್ರೆಗೆ ದಾಖಲು

Published On - 10:24 am, Sat, 27 November 21

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!