ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರಿಗೆ ಕೊರೊನಾ ಪಾಸಿಟಿವ್! ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

| Updated By: sandhya thejappa

Updated on: Jan 22, 2022 | 11:49 AM

ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೇವೇಗೌಡರು, ನಿನ್ನೆ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಂದರೆ ಕೊರೊನಾ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು.

ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡರಿಗೆ ಕೊರೊನಾ ಪಾಸಿಟಿವ್! ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡ
Follow us on

ಬೆಂಗಳೂರು: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡರಿಗೆ (HD Devegowda) ಕೊರೊನಾ (Coronavirus) ಸೋಂಕು ತಗುಲಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದೇವೇಗೌಡರು, ನಿನ್ನೆ (ಜ.21) ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಂದರೆ ಕೊರೊನಾ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿತ್ತು. ಸದ್ಯ ಮಣಿಪಾಲ್ (Manipal) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಮ್ಮು ಇದ್ದ ಹಿನ್ನೆಲೆ ಕೊವಿಡ್ ಪರೀಕ್ಷೆ ಮಾಡಿಸಿದ್ದರು. ಈ ವೇಳೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜನವರಿ 15ಕ್ಕೆ ದೇವೇಗೌಡರ ಸೊಸೆ ಅನಿತಾ ಕುಮಾರಸ್ವಾಮಿಗೆ ಕೊರೊನಾ ಸೋಂಕು ತಗುಲಿತ್ತು. ಅವರು ತಮ್ಮ ಬೆಂಗಳೂರಿನ ನಿವಾಸದಲ್ಲಿ ಚಿಕಿತ್ಸೆ ಪಡೆದಿದ್ದರು.

ದೇವೇಗೌಡರಿಗೆ ಕೊವಿಡ್ ಪಾಸಿಟಿವ್ ಬಂದಿರುವ ವಿಚಾರಕ್ಕೆ ಸಂಬಂಧಿಸಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಮಾಜಿ‌ ಪ್ರಧಾನಿ ದೇವೇಗೌಡರ ಜತೆ ಮಾತನಾಡುತ್ತೇನೆ. ಅವರ ಕುಟುಂಬ, ಮಣಿಪಾಲ್ ವೈದ್ಯರ ಜತೆಗೂ ಮಾತನಾಡುತ್ತೇನೆ. ಈ ವಯಸ್ಸಲ್ಲೂ ಅವರು ಆರೋಗ್ಯವಾಗಿದ್ದಾರೆ. ಆದರೆ ಕೊವಿಡ್ ಯಾರಿಗೂ ಬಿಟ್ಟಿಲ್ಲ ಅಂತ ತಿಳಿಸಿದರು.

ಶೀಘ್ರ ಗುಣಮುಖರಾಗಲೆಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹಾರೈಸಿದ್ದಾರೆ. ಟ್ವೀಟ್​ ಮೂಲಕ ಹಾರೈಸಿದ್ದಾರೆ. ದೇವೇಗೌಡರಿಗೆ ಕೊರೊನಾ ಸೋಂಕು ತಗುಲಿರುವುದು ವಿಷಾದಕರ ಸಂಗತಿ. ದೇವೇಗೌಡರು ಕೊರೊನಾ ವಿರುದ್ಧ ಗೆದ್ದು ಬರಲಿ ಅಂತ ವಿಧಾನ ಪರಿಷತ್​ ಸದಸ್ಯ ಶರವಣ ಟ್ವೀಟ್​ ಮಾಡಿದ್ದಾರೆ

ಗುಣಮುಖರಾದ ಸಿಎಂ                                                                                                                                                                            ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೂ ಕೊರೊನಾ ದೃಢಪಟ್ಟಿತ್ತು. ಆದರೆ ಜನವರಿ 17ರಂದು ನಡೆಸಿದ ಪರೀಕ್ಷೆಯಲ್ಲಿ ಕೊರೊನಾ ನೆಗೆಟಿವ್ ಇದೆ. ಬೊಮ್ಮಾಯಿ ಅವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ರಕ್ತದೊತ್ತಡ, ಶುಗರ್, ರಕ್ತ ಹೆಪ್ಪುಕಟ್ಟುವುದಕ್ಕೆ ಸಂಬಂಧಿಸಿದಂತೆ ಹಲವು ತಪಾಸಣೆಗಳನ್ನು ನಡೆಸಲಾಗಿತ್ತು. ಡಿ-ಡೈಮರ್ ಟೆಸ್ಟ್​ ಹಾಗೂ ಶ್ವಾಸಕೋಶ ಎಕ್ಸ್​ರೇ ತೆಗೆಸಲಾಗಿದೆ. ಇಸಿಜಿ ಹಾಗೂ ಇಕೋ ಟೆಸ್ಟ್​ ಮಾಡಿ ಹೃದಯದ ಆರೋಗ್ಯ ತಪಾಸಣೆ ಮಾಡಿದ್ದರು.

ಇದನ್ನೂ ಓದಿ

PM Modi: ಇಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ; ಸರ್ಕಾರಗಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಪರಿಶೀಲನೆ

ಅಮೆಜಾನ್ ಕಂಪನಿ ಹೆಸರಲ್ಲಿ ವಂಚನೆ! ಬೆಂಗಳೂರಿನಲ್ಲಿ ಗೋಡೌನ್ ಮಾಡಿ ಬಾಡಿಗೆ ಕೊಡುತ್ತೇನೆ ಎಂದು ವಂಚಿಸಿದ್ದ ಅರೋಪಿ ಅರೆಸ್ಟ್

Published On - 10:14 am, Sat, 22 January 22