AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Corona Review Meeting: ಜನವರಿ 25ರ ಹೊತ್ತಿಗೆ ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ತೀವ್ರ: ಸಚಿವ ಆರ್ ಅಶೋಕ್

ಜನವರಿ 25, 26ರ ಒಳಗೆ ಇದು ಪೀಕ್​ಗೆ ಹೋಗುತ್ತೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಕೊರೊನಾ ವಸ್ತುಸ್ಥಿತಿ ಪರಾಮರ್ಶನಾ ಸಭೆಯ ನಂತರ ಅವರು ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದರು.

Corona Review Meeting: ಜನವರಿ 25ರ ಹೊತ್ತಿಗೆ ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ತೀವ್ರ: ಸಚಿವ ಆರ್ ಅಶೋಕ್
ಸಚಿವ ಆರ್ ಅಶೋಕ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 17, 2022 | 5:57 PM

Share

ಬೆಂಗಳೂರು: ಇಡೀ ದೇಶದಲ್ಲಿ ಭಾರತದಲ್ಲಿಯೇ ಅತಿಹೆಚ್ಚು ಕೊರೊನಾ ಟೆಸ್ಟಿಂಗ್ ಕರ್ನಾಟಕದಲ್ಲಿ ನಡೆಯುತ್ತಿದೆ. ಐದಾರು ಜಿಲ್ಲೆಗಳಲ್ಲಿ ಲಸಿಕಾಕರಣ (vaccination) ಕಡಿಮೆಯಾಗಿದೆ. ಆ ಜಿಲ್ಲೆಗಳಿಗೆ ಹೆಚ್ಚು ಗಮನ ಕೊಡಬೇಕು. ಆ ಜಿಲ್ಲಾಧಿಕಾರಿಗಳೊಂದಿಗೆ ಪ್ರತ್ಯೇಕವಾಗಿ ಸಭೆ ಮಾಡ್ತೀವಿ. ಆಕ್ಸಿಜನ್ ಪ್ಲಾಂಟ್ (Oxygen Plant) ಇರುವ ಕಡೆ ಜನರೇಟರ್ ವ್ಯವಸ್ಥೆ ಮಾಡಿಕೊಳ್ಳಲು ಸೂಚಿಸಲಾಗಿದೆ. ಜನವರಿ 25, 26ರ ಒಳಗೆ ಇದು ಪೀಕ್​ಗೆ ಹೋಗುತ್ತೆ ಎಂದು ಕಂದಾಯ ಸಚಿವ ಆರ್.ಅಶೋಕ್ (R. Ashok) ಹೇಳಿದರು. ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಕೊರೊನಾ ವಸ್ತುಸ್ಥಿತಿ ಪರಾಮರ್ಶನಾ ಸಭೆಯ ನಂತರ ಅವರು ಮಾಧ್ಯಮ ಪ್ರತಿನಿಧಿಗಳಿಗೆ ವಿವರಣೆ ನೀಡಿದರು.

ಶುಕ್ರವಾರದ ವರೆಗೂ (ಜ.21) ಕಾದುನೋಡುವ ತಂತ್ರ ಅನುಸರಿಸುತ್ತೇವೆ. ಅಲ್ಲಿಯವರೆಗೂ ರಾತ್ರಿ ಕರ್ಫ್ಯೂ ಸೇರಿದಂತೆ ಈಗಿರುವ ಎಲ್ಲ ನಿಯಮಗಳೂ ಯಥಾವತ್ತು ಮುಂದುವರಿಯಲಿವೆ. ಜ.21ರಂದು ಮತ್ತೊಮ್ಮೆ ಸಭೆ ನಡೆಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ. ಲಾಕ್​ಡೌನ್ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸಹ ಲಾಕ್​ಡೌನ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಶುಕ್ರವಾರದ (ಜ. 21) ಸಭೆಯಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಜವಾಬ್ದಾರಿ ಹೊತ್ತಿರುವ ಎಲ್ಲ ಸಚಿವರೂ ಮತ್ತು ಅಧಿಕಾರಿಗಳೂ ಪಾಲ್ಗೊಳ್ಳಲಿದ್ದಾರೆ. ಅನಂತರವೇ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಹೊಟೆಲ್ ಅಥವಾ ಇತರ ಯಾರಿಗೋ ಸಹಾಯ ಮಾಡಲೆಂದು ನಿಯಮ ಸಡಿಲಿಸಲು ಆಗುವುದಿಲ್ಲ. ಕರ್ನಾಟಕದ ಆರೂವರೆ ಕೋಟಿ ಜನರ ಪ್ರಾಣ ರಕ್ಷಣೆ ನಮ್ಮ ಗುರಿ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ, ವಿಶ್ವಸಂಸ್ಥೆ ಮತ್ತು ನಮ್ಮ ಕಾರ್ಯಪಡೆ ಸಮಿತಿ ಸದಸ್ಯರ ಶಿಫಾರಸುಗಳನ್ನು ಗಮನಿಸಿ, ಜನರ ಪರವಾಗಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಶುಕ್ರವಾರದ ಹೊತ್ತಿಗೆ ಕೊರೊನಾ ಸೋಂಕು ಕಡಿಮೆಯಾದರೆ ಒಳ್ಳೇ ಸುದ್ದಿಯೇ ಬರಬಹುದು ಎಂದು ಸುಳಿವು ನೀಡಿದರು.

ಕರ್ನಾಟಕದಲ್ಲಿ ಪ್ರಸ್ತುತ ಪ್ರತಿದಿನ 1.5 ಲಕ್ಷ ಟೆಸ್ಟಿಂಗ್ ಮಾಡಲಾಗುತ್ತಿದೆ. ಈ ಸಂಖ್ಯೆಯನ್ನು ಇನ್ನಷ್ಟು ಹೆಚ್ಚಿಸುವ ಅಗತ್ಯವಿಲ್ಲ. 1.5 ಲಕ್ಷಕ್ಕೂ ಹೆಚ್ಚಿನ ಟೆಸ್ಟಿಂಗ್ ಬೇಡ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಬೆಂಗಳೂರಿಗೆ 75 ಸಾವಿರ, ಉಳಿದೆಡೆ 75 ಸಾವಿರ ಟೆಸ್ಟಿಂಗ್ ಗುರಿ ನಿಗದಿಪಡಿಸಿದರೆ. ಟೆಸ್ಟಿಂಗ್ ಪ್ರಮಾಣ ಹೆಚ್ಚಿಸುವುದರಿಂದ ಯಾವುದೇ ಉಪಯೋಗವಿಲ್ಲ ಸಾಕು ಎಂದು ತಜ್ಞರು ಸಭೆಯಲ್ಲಿ ಸಲಹೆ ನೀಡಿದರು ಎಂದು ಅಶೋಕ್ ಹೇಳಿದರು.

ಇದನ್ನೂ ಓದಿ:

Corona Review Meeting: ಕೊರೊನಾ ಪರಿಸ್ಥಿತಿ ಪರಾಮರ್ಶೆ: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

Udupi Paryaya 2022: ಕೊರೊನಾ ಹಿನ್ನೆಲೆ ಸರಳ ಪರ್ಯಾಯ ಮಹೋತ್ಸವ; ಹೇಗಿರಲಿದೆ ಈ ಬಾರಿಯ ಉಡುಪಿ ಪರ್ಯಾಯ?

Published On - 5:30 pm, Mon, 17 January 22