Coronavirus 4th Wave: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳ: ನಾಲ್ಕನೇ ಅಲೆಯ ಆತಂಕ
ಕಳೆದ 6 ದಿನಗಳಲ್ಲಿ ಬೆಂಗಳೂರಿನಲ್ಲಿ ಸೋಂಕು ಪ್ರಕರಣಗಳು ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದು ಕಂಡು ಬಂದಿದೆ.
ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ 4ನೇ ಅಲೆಯ ಆತಂಕ ಕಾಣಿಸಿಕೊಂಡಿದೆ. ಕಳೆದ ಒಂದು ವಾರದಿಂದ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಾಗಿದ್ದು, ಕೇಂದ್ರ ಆರೋಗ್ಯ ಇಲಾಖೆಯು ಸರ್ಕಾರಕ್ಕೆ ಈಗಾಗಲೇ ಪತ್ರವೊಂದನ್ನು ಬರೆದಿದೆ. ದೇಶದಲ್ಲಿ ವರದಿಯಾಗುತ್ತಿರುವ ಕೊರೊನಾ ಸೋಂಕಿನ ಅಂಕಿಅಂಶಗಳನ್ನು ವಿಶ್ಲೇಷಿಸಿದರೆ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯ ಸೋಂಕಿತರು ಪತ್ತೆಯಾಗುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 301 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ಪೈಕಿ 291 ಪ್ರಕರಣಗಳು ಬೆಂಗಳೂರಿನಲ್ಲಿಯೇ ವರದಿಯಾಗಿವೆ.
ಕಳೆದ 6 ದಿನಗಳಲ್ಲಿ ಬೆಂಗಳೂರಿನಲ್ಲಿ ಸೋಂಕು ಪ್ರಕರಣಗಳು ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವುದು ಕಂಡು ಬಂದಿದೆ.
ದಿನಾಂಕ | ಸೋಂಕು ಪ್ರಕರಣಗಳು | ಬೆಂಗಳೂರು ನಗರ | ರಾಜ್ಯದಲ್ಲಿ ಒಟ್ಟು ಸಕ್ರಿಯ ಸೋಂಕಿತರು |
ಜೂನ್ 1 | 178 | 158 | 2,001 |
ಜೂನ್ 2 | 297 | 276 | 2,204 |
ಜೂನ್ 3 | 259 | 243 | 2,229 |
ಜೂನ್ 4 | 222 | 210 | 2,260 |
ಜೂನ್ 5 | 301 | 291 | 2,414 |
ಕೇರಳದಲ್ಲಿ ನೊರೊವೈರಸ್ ಪತ್ತೆ
ಕೇರಳದ ಇಬ್ಬರು ಮಕ್ಕಳಲ್ಲಿ ನೊರೊವೈರಸ್ ಸೋಂಕು ಪತ್ತೆಯಾಗಿದೆ. ತಿರುವನಂತಪುರಂನ ವಿಝಿಂಜಂ ಪ್ರದೇಶದಲ್ಲಿ ಈ ಮಕ್ಕಳು ವಾಸವಿದ್ದರು. ಸೋಂಕಿತ ಇಬ್ಬರು ಮಕ್ಕಳ ಸ್ಥಿತಿ ಸ್ಥಿರವಾಗಿದೆ ಎಂದು ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.
ಕೇಂದ್ರದಿಂದ ಪತ್ರ
ಭಾರತದಲ್ಲಿ ಕೊರೊನಾ ಸೋಂಕು (Coronavirus Infection) ಪ್ರಕರಣಗಳು ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯು (Union Health Department) ಐದು ರಾಜ್ಯಗಳಿಗೆ ಪತ್ರ ಬರೆದಿದ್ದು ಸೋಂಕು ಹರಡುವುದನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚಿಸಿದೆ. ತಮಿಳುನಾಡು, ಕೇರಳ, ತೆಲಂಗಾಣ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದು, ಕೆಲವು ರಾಜ್ಯಗಳಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಾಗಿ ವರದಿಯಾಗುತ್ತಿದೆ ಎಂದು ಹೇಳಿದ್ದಾರೆ. ಸೋಂಕು ಸ್ಥಳೀಯವಾಗಿ ಹೆಚ್ಚಾಗುತ್ತಿರುವ ವಿದ್ಯಮಾನದ ಬಗ್ಗೆಯೂ ಅವರು ಗಮನ ಸೆಳೆದಿದ್ದಾರೆ.
ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:14 pm, Mon, 6 June 22