AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಮತ್ತೆ ಹೆಚ್ಚಾದ ಕೊರೊನಾ; 4ನೇ ಅಲೆ ಭೀತಿ, ಇಂದು ಸಂಜೆ ಆರೋಗ್ಯ ಇಲಾಖೆಯಿಂದ ತಾಂತ್ರಿಕ ಸಲಹಾ ಸಮಿತಿ ಜೊತೆ ಮಹತ್ವದ ಸಭೆ

ಒಂದು ವಾರದಿಂದ ರಾಜ್ಯದಲ್ಲಿ ಕೊವಿಡ್ ಕೇಸ್ ಹೆಚ್ಚಳ ಹಿನ್ನೆಲೆ ಕೊವಿಡ್ ಹೆಚ್ಚಿದ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಕೊರೊನಾ 4ನೇ ಅಲೆ ಎದುರಿಸಲು ಈಗಿನಿಂದಲೇ ತಯಾರಿ ಶುರುವಾಗಿದೆ.

ರಾಜ್ಯದಲ್ಲಿ ಮತ್ತೆ ಹೆಚ್ಚಾದ ಕೊರೊನಾ; 4ನೇ ಅಲೆ ಭೀತಿ, ಇಂದು ಸಂಜೆ ಆರೋಗ್ಯ ಇಲಾಖೆಯಿಂದ ತಾಂತ್ರಿಕ ಸಲಹಾ ಸಮಿತಿ ಜೊತೆ ಮಹತ್ವದ ಸಭೆ
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Jun 06, 2022 | 9:47 PM

Share

ಬೆಂಗಳೂರು: ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಹಾಮಾರಿ ಕೊರೊನಾ ವೈರಸ್ ಪ್ರಕರಣಗಳ (Coronavirus Case) ಸಂಖ್ಯೆ ಹೆಚ್ಚುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಸಾವಿರ ಗಡಿ ದಾಟಿದೆ. ಇದರಿಂದ ನಾಲ್ಕನೇ ಅಲೆ (Corona 4th wave) ಭೀತಿ ಎದುರಾಗಿದೆ. ಹೊಸ ಕೋವಿಡ್ ತಳಿ ಕಾಣಿಸಿಕೊಂಡರೆ ನಾಲ್ಕನೇ ಅಲೆ ನಿಶ್ಚಿತವಾದರೂ ಆತಂಕಪಡುವ ಅಗತ್ಯವಿಲ್ಲ. ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೋವಿಡ್ ನಿಯಮಾವಳಿಗಳನ್ನು (Covid19 Rules) ಕಡ್ಡಾಯವಾಗಿ ಪಾಲಿಸಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ.

ಇನ್ನು ಒಂದು ವಾರದಿಂದ ರಾಜ್ಯದಲ್ಲಿ ಕೊವಿಡ್ ಕೇಸ್ ಹೆಚ್ಚಳ ಹಿನ್ನೆಲೆ ಕೊವಿಡ್ ಹೆಚ್ಚಿದ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಕೊರೊನಾ 4ನೇ ಅಲೆ ಎದುರಿಸಲು ಈಗಿನಿಂದಲೇ ತಯಾರಿ ಶುರುವಾಗಿದೆ. ಆರೋಗ್ಯ ಇಲಾಖೆ, ತಾಂತ್ರಿಕ ಸಲಹಾ ಸಮಿತಿ ಮೊರೆ ಹೋಗಿದ್ದು ಇಂದು ಸಂಜೆ 7 ಗಂಟೆಗೆ ಟಾಸ್ಕ್ ಫೋರ್ಸ್ ಜತೆ ಇಲಾಖೆಯ ಮಹತ್ವದ ಸಭೆ ನಡೆಸಲಿದೆ. ಕೊರೊನಾ ಪ್ರಕರಣ ಹೆಚ್ಚಳ ಸಂಬಂಧ ಚರ್ಚೆ ನಡೆಯಲಿದೆ. ಮುನ್ನೆಚ್ಚರಿಕಾ ಕ್ರಮಗಳ ಕುರಿತು ತಾಂತ್ರಿಕ ಸಲಹಾ ಸಮಿತಿ ಜತೆ ಸಭೆ ನಡೆಸುವುದಾಗಿ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪಠ್ಯಗಳಲ್ಲಿನ ಎಡವಟ್ಟಿಗೆ ಕಾರಣರಾದ ಶಿಕ್ಷಣ ಸಚಿವರ ರಾಜೀನಾಮೆಯನ್ನ ಕೂಡಲೇ ಪಡೆಯಬೇಕು ಎಂದು ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಸಿದ್ದರಾಮಯ್ಯ

ಇಂದು ನಡೆಯುವ ಸಭೆಯ ಪ್ರಮುಖ ಚರ್ಚೆಗಳು ಇಂದು ಸಂಜೆ ನಡೆಯುವ ಸಭೆಯಲ್ಲಿ ಹಲವು ಅಂಶಗಳ ಬಗ್ಗೆ ಚರ್ಚೆ ನಡೆಯುತ್ತೆ. 1. ನೆರೆಯ ರಾಜ್ಯಗಳ ಕೋವಿಡ್ ಸ್ಥಿತಿ ಗತಿ ಚರ್ಚೆ 2. ರಾಜ್ಯದಲ್ಲಿ ಮತ್ತೆ ಜಿನೋಮಿಕ್ ಸೀಕ್ವೆನ್ಸ್ ಹೆಚ್ಚಳದ ಬಗ್ಗೆ ಸಲಹೆ 3. ಕೋವಿಡ್ ಟೆಸ್ಟಿಂಗ್ ರೇಟ್ ಹೆಚ್ಚಳಕ್ಕೆ ಸೂಚನೆ 4. ಅಂತರಾಷ್ಟ್ರೀಯ ಪ್ರಯಾಣಿಕರ ಮೇಲೆ ಹದ್ದಿನ ಕಣ್ಣಿಡಲು ಸೂಚನೆ 5. ಕೋವಿಡ್ ರೂಲ್ಸ್ ಜಾರಿ ಬಗ್ಗೆ ಸಲಹೆ ಸಾಧ್ಯತೆ 6. ಐಐಎಸ್ ಸಿ ವರದಿ ಕುರಿತು ಚರ್ಚೆ ಸಾಧ್ಯತೆ 7. ಕಡ್ಡಾಯ ಮಾಸ್ಕ್ ರೂಲ್ಸ್ ಜಾರಿ ಬಗ್ಗೆ ಚಿಂತನೆ 8. ಕೋವಿಡ್ ಕ್ಲಸ್ಟರ್ ನಲ್ಲಿ ಸೋಂಕು ಹರಡುವಿಕೆ, ಹೊಸ ವೇರಿಯೆಂಟ್ ಬಗ್ಗೆ ಚರ್ಚೆ ಸಾಧ್ಯತೆ 9. ನಾಲ್ಕನೇ ಅಲೆ ರಾಜ್ಯಕ್ಕೆ ಯಾವಾಗ ಕಾಲಿಡುವ ಸಾಧ್ಯತೆ ಕುರಿತು ಚರ್ಚೆ ಸಾಧ್ಯತೆ 10. ಮತ್ತೊಮ್ಮೆ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲು ಸಲಹೆ ಸಾಧ್ಯತೆ ಎಂದು ಆರೋಗ್ಯ ಇಲಾಖೆಯ ಆಯುಕ್ತ ಡಿ ರಂದೀಪ್ ಮಾಹಿತಿ ನೀಡಿದ್ದಾರೆ.

ರಾಜ್ಯದ ಇತರೆ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದೇಶದಲ್ಲಿ ವರದಿಯಾಗುತ್ತಿರುವ ಕೊರೊನಾ ಸೋಂಕಿನ ಅಂಕಿಅಂಶಗಳನ್ನು ವಿಶ್ಲೇಷಿಸಿದರೆ ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚಿನ ಸಂಖ್ಯೆಯ ಸೋಂಕಿತರು ಪತ್ತೆಯಾಗುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯದಲ್ಲಿ ಇಂದು 230 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಬೆಂಗಳೂರಲ್ಲಿ ಇಂದು 222 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ರಾಜ್ಯದಲ್ಲಿ ಒಟ್ಟು 2,441  ಸಕ್ರಿಯ ಪ್ರಕರಣಗಳು ವರದಿಯಾಗಿವೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್​ ಶೇಕಡಾ 1.92ರಷ್ಟಿದೆ. ಇದನ್ನೂ ಓದಿ: ಮಂಡ್ಯದ ಆರೆಸ್ಸೆಸ್ ಕಾರ್ಯಕರ್ತರು ಸಿದ್ದರಾಮಯ್ಯನವರಿಗೆ ಚೆಡ್ಡಿಗಳನ್ನು ಪಾರ್ಸೆಲ್ ಮೂಲಕ ಕಳಿಸಿದ್ದಾರೆ

Published On - 5:39 pm, Mon, 6 June 22