Weekend Curfew: ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ತೆರವು: ಕಠಿಣ ನಿಯಮ ಜಾರಿಗೆ ನಿರ್ಧಾರ

Coronavirus Restrictions: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.

Weekend Curfew: ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ ತೆರವು: ಕಠಿಣ ನಿಯಮ ಜಾರಿಗೆ ನಿರ್ಧಾರ
ನೈಟ್​ ಕರ್ಫ್ಯೂ ವೇಳೆ ಪೊಲೀಸರು ರಸ್ತೆಗೆ ಬ್ಯಾರಿಕೇಡ್ ಹಾಕುತ್ತಿದ್ದಾರೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jan 21, 2022 | 5:28 PM

ಬೆಂಗಳೂರು: ಕರ್ನಾಟಕದಲ್ಲಿ ವೀಕೆಂಡ್ ಕರ್ಫ್ಯೂ (Weekend Curfew) ತೆರವುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಕಂದಾಯ ಸಚಿವ ಆರ್.ಅಶೋಕ್ (R Ashok) ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದರು.

ಸಭೆ, ಸಮಾರಂಭಗಳಿಗೆ ಈಗ ಇರುವ ನಿಯಮವನ್ನೇ ಯಥಾಸ್ಥಿತಿಯಲ್ಲಿ ಮುಂದುವರಿಸಲಾಗುವುದು. ಹಿಂದೆ ಇದ್ದಂತೆಯೇ ಱಲಿ, ದೊಡ್ಡ ಕಾರ್ಯಕ್ರಮಗಳ ಮೇಲಿನ ನಿರ್ಬಂಧ ಮುಂದುವರಿಯಲಿದೆ. ವೀಕೆಂಡ್ ಕರ್ಫ್ಯೂ ತೆರವುಗೊಳಿಸಿ ಕಠಿಣ ನಿಯಮ ಜಾರಿಗೊಳಿಸಲಾಗುವುದು. ಬೆಂಗಳೂರಿಗೆ ಆಗಮಿಸುವ ವಿದೇಶಿಯರ ಮೇಲೆಯೂ ತೀವ್ರ ನಿಗಾ ಇರಿಸಲಾಗುವುದು. ಲಸಿಕೆ ಪ್ರಮಾಣವನ್ನು ಇನ್ನಷ್ಟು ತೀವ್ರಗೊಳಿಸಬೇಕು ಎಂಬ ನಿರ್ಧಾರವನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಹೊಸ ಮಾರ್ಗದರ್ಶಿ ಸೂತ್ರಗಳನ್ನು ಸರ್ಕಾರ ಶೀಘ್ರ ಬಿಡುಗಡೆ ಮಾಡಲಿದೆ.

ಕರ್ನಾಟಕದಲ್ಲಿ ನಾಳೆಯಿಂದಲೇ (ಜ.21) ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ರದ್ದಾಗಿದೆ. ಯಾವುದೇ ಶಾಸಕರು ಅಥವಾ ಸಚಿವರ ಒತ್ತಡಕ್ಕೆ ಮಣಿದು ಕರ್ಫ್ಯೂ ರದ್ದುಪಡಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ. ತಜ್ಞರ ಅಭಿಪ್ರಾಯದಂತೆ ವೀಕೆಂಡ್ ಕರ್ಫ್ಯೂ ರದ್ದುಪಡಿಸಲಾಗಿದೆ. ರಾಜ್ಯದಲ್ಲಿ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 7ರವರೆಗೆ ರಾತ್ರಿ ಕರ್ಫ್ಯೂ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಆಸ್ಪತ್ರೆಗೆ ಸೇರುವವರ ಸಂಖ್ಯೆ ಹೆಚ್ಚಾದರೆ ವೀಕೆಂಡ್ ಕರ್ಫ್ಯೂ ಜಾರಿಮಾಡುವುದು ಅನಿವಾರ್ಯವಾಗುತ್ತದೆ. ವೀಕೆಂಡ್ ಕರ್ಫ್ಯೂ ಹೊರತುಪಡಿಸಿ ಉಳಿದೆಲ್ಲ ಕೊವಿಡ್ ನಿಯಮಗಳು ಎಂದಿನಂತೆ ಮುಂದುವರಿಯಲಿವೆ ಎಂದು ಅಶೋಕ್ ತಿಳಿಸಿದರು.

ಆಸ್ಪತ್ರೆಗೆ ಸೇರುವವರ ಸಂಖ್ಯೆ ಕಡಿಮೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದರಿಂದ ವೀಕೆಂಡ್ ಕರ್ಫ್ಯೂ ರದ್ದುಪಡಿಸಲಾಗಿದೆ. ಕೊರೊನಾ 3ನೇ ಅಲೆಯಲ್ಲಿ ಆಸ್ಪತ್ರೆಗೆ ಸೇರುವವರ ಸಂಖ್ಯೆ ಶೇ.5ರಷ್ಟು ಮಾತ್ರ ಇದೆ. ಎಲ್ಲ ತಜ್ಞರ ಒಟ್ಟು ಅಭಿಪ್ರಾಯ ಪಡೆದೇ ನಿಯಮಗಳನ್ನು ರೂಪಿಸಲಾಗಿದೆ. ವೀಕೆಂಡ್ ಕರ್ಫ್ಯೂ ರದ್ದು ಪಡಿಸುವಾಗಲೂ ಅವರ ಅಭಿಪ್ರಾಯಗಳನ್ನು ಪಡೆದುಕೊಳ್ಳಲಾಗಿದೆ. ಪಾರ್ಟಿ, ಬಾರ್‌ಗಳಲ್ಲಿ ಚಟುವಟಿಕೆ ನಿಯಂತ್ರಿಸುವ ಉದ್ದೇಶದಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಯಲಿದೆ ಎಂದು ಅವರು ತಿಳಿಸಿದರು. ವೀಕೆಂಡ್ ಕರ್ಫ್ಯೂ ಅಥವಾ ನೈಟ್​ ಕರ್ಫ್ಯೂ ಕರ್ನಾಟಕದಲ್ಲಿ ಮಾತ್ರವೇ ಅಲ್ಲ, ದೇಶದ ಇತರ ರಾಜ್ಯಗಳಲ್ಲೂ ಜಾರಿಯಲ್ಲಿದೆ. ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ಕೊವಿಡ್ ಸ್ಥಿತಿಗತಿ ಕುರಿತು ಪರಿಶೀಲನಾ ಸಭೆಯ ಮುಖ್ಯಾಂಶಗಳು: ಜನವರಿ 20ರ ಮಾಹಿತಿಯಂತೆ ರಾಜ್ಯದಲ್ಲಿ ಒಟ್ಟು 2,93,231 ಸಕ್ರಿಯ ಪ್ರಕರಣಗಳು ಇವೆ. ಇದರಲ್ಲಿ 2.86 ಲಕ್ಷ ಮಂದಿ ಹೋಂ ಐಸೋಲೇಷನ್ ನಲ್ಲಿ ಇದ್ದಾರೆ ಒಟ್ಟು 5344 ಸೊಂಕಿತರು ಆಸ್ಪತ್ರೆಗೆ ದಾಖಲಾಗಿದ್ದು, ಅದರಲ್ಲಿ 340 ಜನ ಐಸಿಯುನಲ್ಲಿ ಇದ್ದಾರೆ. 127 ಮಂದಿ ವೆಂಟಿಲೇಟರ್​ನಲ್ಲಿ ಇದ್ದಾರೆ. ಬೆಂಗಳೂರು ಹೊರತುಪಡಿಸಿ ಮೈಸೂರು, ತುಮಕೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿ ದರ ಶೇ. 19.94 ರಷ್ಟಿದೆ. ಮಕ್ಕಳ ಪಾಸಿಟಿವಿಟಿ ದರ ಶೇ 8ರಷ್ಟಿದ್ದು, ವಯಸ್ಕರ ಪಾಸಿಟಿವಿಟಿ ದರ ಶೇ 16.57 ರಷ್ಟಿದೆ.

ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳ ಪ್ರಮಾಣದ ಮೇಲೆ ನಿಗಾ ವಹಿಸಲಾಗುತ್ತಿದೆ. ರಾಜ್ಯದಲ್ಲಿ ಮಂಜೂರಾಗಿರುವ 243 ಪಿಎಸ್ಎ ಪ್ಲಾಂಟ್​ಗಳ ಪೈಕಿ 225 ಕಾರ್ಯಾರಂಭ ಮಾಡಿವೆ. ಎಲ್ಲ ಜಿಲ್ಲಾ ಆಸ್ಪತ್ರೆಗಳು, 113 ತಾಲ್ಲೂಕು ಆಸ್ಪತ್ರೆಗಳಲ್ಲಿ ಪಿಎಸ್ ಎ ಪ್ಲಾಂಟ್ ಗಳು ಕಾರ್ಯಾರಂಭ ಮಾಡಿವೆ. ಸರಾಸರಿ ಮೂರು ದಿನಕ್ಕೆ ದ್ವಿಗುಣಗೊಳ್ಳುತ್ತಿದೆ. ಒಬ್ಬ ಸೋಂಕಿತನಿಂದ ಸರಾಸರಿ 2.6 ಜನರಿಗೆ ಹರಡುತ್ತಿದೆ. ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ತಗಲುತ್ತಿದೆ. ಬೆಂಗಳೂರಿನ ಜೊತೆಗೆ ಇತರ ಜಿಲ್ಲೆಗಳಲ್ಲಿಯೂ ಕೋವಿಡ್ ಪ್ರಕರಣಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ.

ವಾರಾಂತ್ಯ ಕರ್ಫ್ಯೂ ವಿಧಿಸಿದರೂ ದೊಡ್ಡ ಪರಿಣಾಮ ಉಂಟಾಗಿಲ್ಲ. ಸೊಂಕಿತರ ಸಂಖ್ಯೆ ಮತ್ತು ಪಾಸಿಟಿವಿಟಿ ದರ ಹೆಚ್ಚಾದರೂ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಶೇ 5 ರಿಂದ 6ರ ಮದ್ಯದಲ್ಲಿದೆ. ಚೇತರಿಸಿಕೊಳ್ಳುತ್ತಿರುವ ಸೊಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಆದರೆ, ಮುಂದಿನ ವಾರದಲ್ಲಿ ಪ್ರಕರಣಗಳ ಸಂಖ್ಯೆ ಉತ್ತುಂಗಕ್ಕೆ (peak) ತಲುಪುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಕೋವಿಡ್ 19 ನಿರ್ವಹಣೆಯ ಮುಂಚೂಣಿಯ ಕಾರ್ಯಕರ್ತರು ಹೆಚ್ಚಿನ ಪ್ರಮಾಣದಲ್ಲಿ ಸೋಂಕಿಗೆ ಒಳಗಾಗುತ್ತಿರುವುದನ್ನು ಸಭೆಯಲ್ಲಿ ಗಮನಿಸಲಾಯಿತು. ಜನರ ಜೀವ ಮತ್ತು ಜೀವನ ನಿರ್ವಹಣೆ ಎರಡೂ ಸರಿದೂಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.  ಈ ಎಲ್ಲ ಅಂಶಗಳನ್ನು ಪರಿಶೀಲಿಸಿದ ನಂತರ ರಾತ್ರಿ ಕರ್ಫ್ಯೂ ಅವಧಿಯನ್ನು ವಾರದ ಏಳೂ ದಿನಗಳಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5ರವರೆಗೆ ಜಾರಿಯಲ್ಲಿಡಲು ನಿರ್ಧರಿಸಲಾಯಿತು.

ಸಾರ್ವಜನಿಕರ ಬೇಡಿಕೆಯ ಮೇರೆಗೆ ಹಾಗೂ ತಜ್ಞರೊಂದಿಗೆ ಚರ್ಚಿಸಿದ ಅಂಶಗಳನ್ನು ಆಧರಿಸಿ, ಈ ವಾರಾಂತ್ಯದಲ್ಲಿ ವಾರಾಂತ್ಯ ಕರ್ಫ್ಯೂವನ್ನು ಸದ್ಯಕ್ಕೆ ಹಿಂಪಡೆಯಲು ನಿರ್ಧರಿಸಲಾಯಿತು. ಆದರೆ ಮುಂದಿನವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣವನ್ನು ನೋಡಿಕೊಂಡು ನಿರ್ಬಂಧಗಳನ್ನು ವಿಧಿಸುವ ಬಗ್ಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಭೆ ನಿರ್ಣಯಿಸಿತು. ಮಾತ್ರವಲ್ಲದೆ, ಮಾಲ್, ಹೋಟೆಲ್, ಬಾರ್, ಕ್ಲಬ್,ಪಬ್ ಗಳು ಶೇ. 50 ಆಸನ ಸಾಮರ್ಥ್ಯದೊಂದಿಗೆ ತೆರೆಯಲು ತೀರ್ಮಾನಿಸಲಾಯಿತು. ಎಲ್ಲ ಸಿಬ್ಬಂದಿ ಮತ್ತು ಗ್ರಾಹಕರು ಎರಡೂ ಡೋಸ್ ಲಸಿಕೆ ಪಡೆದಿರಬೇಕು ಎಂದು ಸೂಚಿಸಲಾಯಿತು.

ವೀಕೆಂಡ್ ಕರ್ಫ್ಯೂ ರದ್ದು ನಿರ್ಧಾರದಿಂದ ಸಂತಸ ಸರ್ಕಾರದ ನಿರ್ಧಾರಕ್ಕೆ ಹೋಟೆಲ್​ ಮಾಲೀಕರು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಆದರೆ ನೈಟ್​ ಕರ್ಫ್ಯೂ ಬಗ್ಗೆಯೂ ಸರ್ಕಾರ ಚಿಂತಿಸಬೇಕಿತ್ತು. ಮುಂದಿನ ದಿನಗಳಲ್ಲಿ ನೈಟ್ ಕರ್ಫ್ಯೂ ಅವಧಿ ವಿಸ್ತರಣೆ ಬಗ್ಗೆ ಸರ್ಕಾರವನ್ನು ಕೋರುತ್ತೇವೆ ಎಂದು ನಿಸರ್ಗ ಹೊಟೆಲ್ ಮಾಲೀಕ ಕೃಷ್ಣರಾಜ್ ತಿಳಿಸಿದರು.

ಇದನ್ನೂ ಓದಿ: ಜನರ ಜೀವ, ಜೀವನ ಗಮನದಲ್ಲಿಟ್ಟುಕೊಂಡು ಹೊಸ ಕೊವಿಡ್ ಮಾರ್ಗಸೂಚಿಯ ತೀರ್ಮಾನ: ಆರ್ ಅಶೋಕ್ ಇದನ್ನೂ ಓದಿ:  15 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

Published On - 3:49 pm, Fri, 21 January 22

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ