Bengaluru: ಬಿಬಿಎಂಪಿ ವ್ಯಾಪ್ತಿಯ ಅಪಾರ್ಟ್​ಮೆಂಟ್, ಕಾಂಪ್ಲೆಕ್ಸ್​ಗಳಿಗೆ ಕೊವಿಡ್19 ವಿಶೇಷ ಮಾರ್ಗಸೂಚಿ ಪ್ರಕಟ

BBMP: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು(RWA) ಮತ್ತು ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ ಗಳಲ್ಲಿನ ನಿರ್ವಹಣಾ ಸಮಿತಿಗಳಿಗೆ ಕೋವಿಡ್ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಿರುತ್ತಾರೆ.

Bengaluru: ಬಿಬಿಎಂಪಿ ವ್ಯಾಪ್ತಿಯ ಅಪಾರ್ಟ್​ಮೆಂಟ್, ಕಾಂಪ್ಲೆಕ್ಸ್​ಗಳಿಗೆ ಕೊವಿಡ್19 ವಿಶೇಷ ಮಾರ್ಗಸೂಚಿ ಪ್ರಕಟ
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on:Aug 13, 2021 | 7:42 PM

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು (RWA) ಮತ್ತು ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್ ಗಳಲ್ಲಿನ ನಿರ್ವಹಣಾ ಸಮಿತಿಗಳಿಗೆ ಕೊವಿಡ್ ಸಂಬಂಧಿಸಿದಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಅದರಂತೆ ಕೊವಿಡ್-19 ಅನ್ನು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಅಡಿಯಲ್ಲಿ ಸಾಂಕ್ರಾಮಿಕ ರೋಗವೆಂದು ಸೂಚಿಸಲಾಗಿದೆ. ಈ ಸಂಬಂಧ ಬಿಬಿಎಂಪಿ ವ್ಯಾಪ್ತಿಯಲ್ಲಿ ಸೆಕ್ಷನ್ 4ರ ಅಡಿಯಲ್ಲಿ ರೋಗದ ಹರಡುವಿಕೆಯನ್ನು ನಿಯಂತ್ರಿಸಲು ಜಾರಿಗೊಳಿಸುವ ಕ್ರಮಗಳನ್ನು ಕೈಗೊಳ್ಳಲು ಪಾಲಿಕೆಗೆ ಅಧಿಕಾರ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ಕಳೆದ 2 ವಾರಗಳಲ್ಲಿ 3 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪ್ರಕರಣಗಳು ಒಟ್ಟಿಗೆ ಕಂಡುಬಂದರೆ ಅದನ್ನು ಕ್ಲಸ್ಟರ್ ಎಂದು ಗುರುತಿಸಲಾಗುತ್ತಿದೆ. ಜೊತೆಗೆ 100 ಮೀಟರ್ ಸುತ್ತಮುತ್ತಲಿನ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಗುರುತಿಸಲಾಗುತ್ತದೆ. ಈ ಪೈಕಿ ಸಕ್ರಿಯ ಕೆಂಟೈನ್ಮೆಂಟ್ ವಲಯಗಳ ಸಂಖ್ಯೆ 160 ದಾಟಿದ್ದು, (09.08.2021 ರಂತೆ), ಅದರಲ್ಲಿ ಸುಮಾರು ಶೇಕಡಾ  50 ರಷ್ಟು ಅಂದರೆ 79 ಅಪಾರ್ಟ್ಮೆಂಟ್ ಕಾಂಪ್ಲೆಕ್ಸ್​ಗಳು ಕಂಟೈನ್ಮೆಂಟ್ ವಲಯಗಳಿವೆ.

ಈ ಸಂಬಂಧ ಅಪಾರ್ಟ್ಮೆಂಟ್ ಗಳಲ್ಲಿ ಕೊರೊನಾ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾದ ಅನುಷ್ಠಾನ ಮತ್ತು ಅನುಸರಣಾ ಚಟುವಟಿಕೆಗಳನ್ನು ಅನುಸರಿಸುವ ಸಲುವಾಗಿ ಹಲವು ಸುತ್ತೋಲೆ ಸೂಚನೆಗಳನ್ನು ನೀಡಲಾಗಿರುತ್ತದೆ. ಈಗಿರುವ ಸರ್ಕಾರಿ ಆದೇಶಗಳು ಮತ್ತು ಮಾರ್ಗಸೂಚಿಗಳ ಜೊತೆಗೆ ದಿನಾಂಕ ಆಗಸ್ಟ್ 12, 2021 ರಂದು ಪಾಲಿಕೆ ಹೊರಡಿಸಿರುವ ಮಾರ್ಗಸೂಚಿಯಲ್ಲಿನ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗುತ್ತದೆ ಎಂದು ಸೂಚಿಸಲಾಗಿದೆ.

  • ಅಪಾರ್ಟ್​ಮೆಂಟ್ ಅಥವಾ ಕಾಂಪ್ಲೆಕ್ಸ್​ಗಳ ಎಲ್ಲರೂ, ಅಲ್ಲಿಗೆ ಭೇಟಿ ನೀಡುವವರ ಉಷ್ಣಾಂಶ ಪರಿಶೀಲಿಸಬೇಕು. ಸ್ಯಾನಿಟೈಸೇಶನ್, ಮಾಸ್ಕ್ ಧರಿಸುವಿಕೆ ಕಡ್ಡಾಯ ಆಗಿರಬೇಕು. ಅಪಾರ್ಟ್​ಮೆಂಟ್​ನ ಹೊರತಾದವರು ಸ್ಥಳಕ್ಕೆ ಭೇಟಿ ಕೊಟ್ಟರೆ ಅವರ ಹೆಸರು ಮತ್ತು ಸಂಪರ್ಕ ಸಂಖ್ಯೆ ದಾಖಲಿಸಿರಬೇಕು.
  • ಹೊರರಾಜ್ಯಗಳಿಗೆ ಭೇಟಿ ನೀಡಿದವರು ಆರ್​ಟಿಪಿಸಿಆರ್ 72 ಗಂಟೆಗಳ ಒಳಗಿನ ನೆಗೆಟಿವ್ ಫಲಿತಾಂಶ ತಂದಿರಬೇಕು. ಇಲ್ಲವಾದಲ್ಲಿ ಬಂದಮೇಲೆ ಆರ್​ಟಿಪಿಸಿಆರ್ ಪರೀಕ್ಷೆ ನಡೆಸಬೇಕು ಹಾಗೂ ಅದರ ಫಲಿತಾಂಶ ಬರುವವರೆಗೆ ಹೋಮ್ ಕ್ವಾರಂಟೈನ್ ಆಗಿರಲೇಬೇಕು.
  • ಸಾರ್ವಜನಿಕ ಸ್ಥಳಗಳಲ್ಲಿ ಕೊರೊನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸ್ವಿಮ್ಮಿಂಗ್ ಪೂಲ್ ಮುಚ್ಚಿಯೇ ಇರುತ್ತದೆ. ಆದರೆ, ಜಿಮ್​ಗಳು ಶೇಕಡಾ 50ರಷ್ಟು ಜನರೊಂದಿಗೆ ಕಾರ್ಯನಿರ್ವಹಿಸಬಹುದು.
  • 3 ವರ್ಷ ಮೇಲ್ಪಟ್ಟ ಎಲ್ಲಾ ಮಕ್ಕಳು ಕೂಡ ಮಾಸ್ಕ್ ಧರಿಸಿರುವಂತೆ ಹೆತ್ತವರು ಅಥವಾ ಪೋಷಕರು ನೋಡಿಕೊಳ್ಳಬೇಕು. ಮಕ್ಕಳ ಕುರಿತು ಹೆಚ್ಚಿನ ಕಾಳಜಿ ಅನಿವಾರ್ಯ.
  • ಜನ ಸೇರುವ, ಗುಂಪಾಗಿ ನಡೆಸುವ, ಸಾರ್ವಜನಿಕ ಅಥವಾ ಸಾಮೂಹಿಕ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಇರುವುದಿಲ್ಲ. ಮಕ್ಕಳ ಗುಂಪು ಚಟುವಟಿಕೆಗಳು, ತರಗತಿಗಳು ಕೂಡ ನಡೆಸುವುದು ಸೂಕ್ತವಲ್ಲ.
  • ಹೋಮ್ ಡೆಲಿವರಿ, ಕೊರಿಯರ್ ಇನ್ನಿತರ ಸೇವೆಗಳಿಗೆ, ಸೇವೆ ನೀಡುವವರು ಅಪಾರ್ಟ್​ಮೆಂಟ್​ನ ಹೊರಗಿನ ಗೇಟ್ ಅಥವಾ ಮುಖ್ಯ ಗೇಟ್ ವರೆಗೆ ಮಾತ್ರ ಬರುವಂತೆ ನೋಡಿಕೊಳ್ಳುವುದು.
  • ಔಷಧ, ಪ್ಲಂಬಿಂಗ್, ವಿದ್ಯುತ್, ಗ್ಯಾಸ್ ಇಂತಹ ಅವಶ್ಯಕ ಸೇವೆಗಳನ್ನು ಕೊರೊನಾ ಮಾರ್ಗಸೂಚಿ ಅನುಸರಿಸಿ ನಡೆಸಲು ಅವಕಾಶ ಇದೆ.
  • ಶುಚಿತ್ವ, ಸ್ಯಾನಿಟೈಸೇಶನ್, ಕಸ ನಿರ್ವಹಣೆಯನ್ನು ಜವಾಬ್ದಾರಿಯುತವಾಗಿ ಮತ್ತು ವ್ಯವಸ್ಥಿತವಾಗಿ ನಡೆಸುವುದು. ಕಂಟೈನ್ಮೆಂಟ್ ಝೋನ್​ಗಳಿಂದ ಕಸ ಇತ್ಯಾದಿ ನಿರ್ವಹಣೆಗೆ ವೃತ್ತಿಪರ ಕೆಲಸಗಾರರನ್ನು ಬಳಸುವುದು, ಮತ್ತು ಅವರು ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕೆಲಸ ಮಾಡುವುದು.
  • ಕೊವಿಡ್ ಪಾಸಿಟಿವ್ ಪ್ರಕರಣ ಪತ್ತೆಯಾದಲ್ಲಿ ಅಪಾರ್ಟ್​ಮೆಂಟ್​ನ ಎಲ್ಲರೂ ಸಹಕರಿಸುವುದು. ಮನೆಯಲ್ಲಿ ಹೋಮ್ ಐಸೋಲೇಶನ್​ಗೆ ಅವಕಾಶ ಇಲ್ಲದಿದ್ದಲ್ಲಿ, ಕೊವಿಡ್ ಕೇರ್ ಸೆಂಟರ್​ಗೆ ಅಥವಾ ಆಸ್ಪತ್ರೆಗೆ ಬೇಕಾದಲ್ಲಿ ಆಸ್ಪತ್ರೆಗೆ ದಾಖಲಿಸುವುದು. ಅಪಾರ್ಟ್​ಮೆಂಟ್​ನಲ್ಲಿ ಕೂಡ ಕೊರೊನಾ ಕೇರ್ ಸೆಂಟರ್ ಅಂದರೆ, ಐಸೋಲೇಶನ್​ಗೆ ಬಿಬಿಎಂಪಿ ಅನುಮತಿಯೊಂದಿಗೆ ಅವಕಾಶ ಕಲ್ಪಿಸಬಹುದು.  

ಇದನ್ನೂ ಓದಿ: ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿ ಆಗಸ್ಟ್ 15ರ ನಂತರ ತುರ್ತು ಸಭೆ: ಸಚಿವ ಆರ್ ಅಶೋಕ್

Fake news: ಕೊರೊನಾ ಲಸಿಕೆಯಿಂದ ಮನುಷ್ಯರು ಚಿಂಪಾಂಜಿಯಾಗಿ ಮಾರ್ಪಡುವ ಸುಳ್ಳು ಸುದ್ದಿಯ ಚುಂಗು ಹಿಡಿದು

(Coronavirus Covid19 Guidelines to Apartments and Complex in Bengaluru BBMP)

Published On - 6:57 pm, Fri, 13 August 21

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ