ಒಮಿಕ್ರಾನ್ ವೈರಸ್ ಪತ್ತೆ: 3 ದೇಶಗಳಿಂದ ಕರ್ನಾಟಕಕ್ಕೆ ಬರುವವರಿಗೆ RTPCR ಪರೀಕ್ಷೆ ಕಡ್ಡಾಯ; ಟೆಸ್ಟಿಂಗ್ ಹೆಚ್ಚಿಸಲು ಸರ್ಕಾರ ಆದೇಶ
15 ದಿನಗಳ ಹಿಂದೆ ರಾಜ್ಯಕ್ಕೆ ಬಂದಿರುವವರನ್ನೂ ಪತ್ತೆ ಹಚ್ಚಬೇಕು. ಪತ್ತೆ ಹಚ್ಚಿ ಕಡ್ಡಾಯವಾಗಿ ಆರ್‌ಟಿಪಿಸಿಆರ್ ಟೆಸ್ಟ್ ಮಾಡಬೇಕು. ಟೆಸ್ಟ್ ಮಾಡಿ 10 ದಿನಗಳ ಕಾಲ ಐಸೋಲೇಷನ್ ಮಾಡಬೇಕು. ನೆಗೆಟಿವ್ ರಿಪೋರ್ಟ್ ಬಂದರೂ ಐಸೋಲೇಷನ್ ಮಾಡಬೇಕು ಎಂದು ಹೇಳಲಾಗಿದೆ.
ಬೆಂಗಳೂರು: ವಿದೇಶಗಳಲ್ಲಿ ಹೊಸ ತಳಿಯ ಒಮಿಕ್ರಾನ್ ವೈರಸ್ ಪತ್ತೆ ಹಿನ್ನೆಲೆ 3 ದೇಶಗಳಿಂದ ರಾಜ್ಯಕ್ಕೆ ಬರುವವರಿಗೆ RTPCR ಟೆಸ್ಟ್ ಕಡ್ಡಾಯಗೊಳಿಸಿ ಆದೇಶ ಹೊರಡಿಸಲಾಗಿದೆ. ದಕ್ಷಿಣ ಆಫ್ರಿಕಾ, ಹಾಂಕಾಂಗ್, ಬೋಟ್ಸ್ವಾನಾದಿಂದ ಬರುವವರಿಗೆ RTPCR ಟೆಸ್ಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. 15 ದಿನಗಳ ಹಿಂದೆ ರಾಜ್ಯಕ್ಕೆ ಬಂದಿರುವವರನ್ನೂ ಪತ್ತೆ ಹಚ್ಚಬೇಕು. ಪತ್ತೆ ಹಚ್ಚಿ ಕಡ್ಡಾಯವಾಗಿ ಆರ್‌ಟಿಪಿಸಿಆರ್ ಟೆಸ್ಟ್ ಮಾಡಬೇಕು. ಟೆಸ್ಟ್ ಮಾಡಿ 10 ದಿನಗಳ ಕಾಲ ಐಸೋಲೇಷನ್ ಮಾಡಬೇಕು. ನೆಗೆಟಿವ್ ರಿಪೋರ್ಟ್ ಬಂದರೂ ಐಸೋಲೇಷನ್ ಮಾಡಬೇಕು ಎಂದು ಹೇಳಲಾಗಿದೆ.
ಕೊರೊನಾ ಟೆಸ್ಟಿಂಗ್ ಸಂಖ್ಯೆ ಹೆಚ್ಚಿಸಲು ಸೂಚನೆ ಕೊರೊನಾ ಟೆಸ್ಟಿಂಗ್ ಸಂಖ್ಯೆ ಹೆಚ್ಚಳ ಮಾಡಲು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಟೆಸ್ಟಿಂಗ್ ಸಂಖ್ಯೆ ಹೆಚ್ಚಿಸಿ ರ್ಯಾಂಡಮ್ ಚೆಕ್ ಮಾಡಲು ಆದೇಶ ನೀಡಲಾಗಿದೆ. 60 ಸಾವಿರದಿಂದ 80 ಸಾವಿರಕ್ಕೆ ಟೆಸ್ಟಿಂಗ್ ಹೆಚ್ಚಿಸಿರುವ ಸರ್ಕಾರ, ಪ್ರತಿ ಜಿಲ್ಲೆಗೆ ಇಷ್ಟೇ ಟೆಸ್ಟ್ ಮಾಡಬೇಕು ಎಂದು ಟಾರ್ಗೆಟ್ ನೀಡಿದೆ. ಜೊತೆಗೆ ರ್ಯಾಂಡಮ್ ಚೆಕ್ ಮಾಡಲು ಸೂಚನೆ ಕೊಡಲಾಗಿದೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ, ಬೀದಿ ಬದಿ ವ್ಯಾಪಾರಿಗಳಿಗೆ, ಮಾರ್ಕೆಟ್ ವ್ಯಾಪಾರಿಗಳಿಗೆ, ಮಾಲ್, ರೆಸ್ಟೋರೆಂಟ್ ಸಿಬ್ಬಂದಿಗೆ, ಫ್ಯಾಕ್ಟರಿ, ಗಾರ್ಮೆಂಟ್ಸ್ಗಳಲ್ಲಿ ರ್ಯಾಂಡಮ್ ಚೆಕ್ ಮಾಡಬೇಕು ಎಂದು ಹೇಳಲಾಗಿದೆ.
ಕೊವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ಪ್ರಮುಖ ತೀರ್ಮಾನಗಳು: 1. ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ 2. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಿಗಿ ವೀಕ್ಷಣೆ ಕೈಗೊಳ್ಳುವುದು 3. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯ ಪವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ 4. ಗಡಿ ಜಿಲ್ಲೆಗಳಲ್ಲಿ ಮೂರು ಶಿಫ್ಟ್ ಗಳಲ್ಲಿ ಕೆಲಸ ಮಾಡುವಂತೆ ಡಿಸಿಗಳಿಗೆ ಸೂಚನೆ. ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯುವುದು 5. 16 ನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು 6. ಹಾಸ್ಟೆಲ್ ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗಟಿವ್ ರಿಪೋರ್ಟ್ ಬಂದ ನಂತರದ 7 ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡುವುದು 7. ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು 8. ಹೋಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಗೊಳ ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು 9. ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು 10. ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು. ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು 11. ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ 12. ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವುದು
ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 322 ಜನರಿಗೆ ಕೊರೊನಾ ದೃಢ; 3 ಮಂದಿ ಸಾವು
ಇದನ್ನೂ ಓದಿ: ಒಮಿಕ್ರಾನ್ ಭೀತಿ ಬೆನ್ನಲ್ಲೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ ಇಬ್ಬರಿಗೆ ಕೊವಿಡ್ ಸೋಂಕು ದೃಢ
Published On - 9:57 pm, Sat, 27 November 21