ಕೊವಿಡ್ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಿದ ಬಿಎಂಆರ್ಸಿಎಲ್; ಮೆಟ್ರೋದಲ್ಲಿ ಓಡಾಟಕ್ಕೆ ಮಾಸ್ಕ್ ಕಡ್ಡಾಯ
ಕೊವಿಡ್ ಇಳಿಕೆ ಬೆನ್ನಲ್ಲೇ ಬೆಂಗಳೂರು ಜನತೆ ಮಾಸ್ಕ್ ಮರೆತಿದ್ದರು. ಆದರೆ ಈಗ ಮತ್ತೆ ಮಾಸ್ಕ್ ಕಡ್ಡಾಯವಾಗಿದೆ. ಸದ್ಯ ನಮ್ಮ ಮೆಟ್ರೋ ಹಸಿರು ಹಾಗೂ ನೇರಳೆ ಮಾರ್ಗದಲ್ಲಿ ಸಂಚಾರ ಮಾಡುವ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಬೆಂಗಳೂರು: ಕೊರೊನಾ ರೂಪಾಂತರಿ ಒಮಿಕ್ರಾನ್ (omicron) ಆತಂಕ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ನಿಲ್ದಾಣಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇಂದಿನಿಂದ ಕಟ್ಟುನಿಟ್ಟಿನ ಕ್ರಮಕ್ಕೆ ನಮ್ಮ ಮೆಟ್ರೋ ಮುಂದಾಗಿದ್ದು, ಮಾಸ್ಕ್ ಇಲ್ಲದೆ ಮೆಟ್ರೋದಲ್ಲಿ ಪ್ರಯಾಣಕ್ಕೆ ಅವಕಾಶ ಇಲ್ಲ ಎಂದು ತಿಳಿಸಿದೆ. ಕೊವಿಡ್ ಮಾರ್ಗಸೂಚಿ ಪಾಲನೆಗೆ ಹೆಚ್ಚಿನ ಒತ್ತು ನೀಡಿದ ಬೆಂಗಳೂರು ಮೆಟ್ರೋ ನಿಗಮ (BMRCL) ಮೆಟ್ರೋ ಸ್ಟೇಷನ್, ಮೆಟ್ರೋ ಬೋಗಿ ಒಳಗೆ ಮಾಸ್ಕ್ ಇಲ್ಲದೆ ಬರುವ ಪ್ರಯಾಣಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ರೂಪಾಂತರಿ ಒಮಿಕ್ರಾನ್ ಆತಂಕದಿಂದ ಪ್ರಯಾಣಿಕರ ಮೇಲೆ ಮೆಟ್ರೋ ಸಿಬ್ಬಂದಿಗಳು ಹೆಚ್ಚಿನ ನಿಗಾ ವಹಿಸಿದ್ದಾರೆ.
ಕೊವಿಡ್ ಇಳಿಕೆ ಬೆನ್ನಲ್ಲೇ ಬೆಂಗಳೂರು ಜನತೆ ಮಾಸ್ಕ್ ಮರೆತಿದ್ದರು. ಆದರೆ ಈಗ ಮತ್ತೆ ಮಾಸ್ಕ್ ಕಡ್ಡಾಯವಾಗಿದೆ. ಸದ್ಯ ನಮ್ಮ ಮೆಟ್ರೋ ಹಸಿರು ಹಾಗೂ ನೇರಳೆ ಮಾರ್ಗದಲ್ಲಿ ಸಂಚಾರ ಮಾಡುವ ಪ್ರಯಾಣಿಕರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಮೆಟ್ರೋದಲ್ಲಿ ಕೊವಿಡ್ ನಿಯಮ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವಂತೆ ಮೆಟ್ರೋ ಎಂ.ಡಿ ಅಂಜುಂ ಪರ್ವೇಜ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೀದರ್: ರೂಪಾಂತರಿ ಕೊರೊನಾ ವೈರಸ್ ಹಾವಳಿ ಹಿನ್ನೆಲೆ ಗಡಿಯಲ್ಲಿ ಕಟ್ಟೆಚ್ಚರ ಬೀದರ್ ಜಿಲ್ಲೆಯ ಕಮಲನಗರ ಮಹಾರಾಷ್ಟ್ರ ಚೆಕ್ ಪೋಸ್ಟ್, ಔರಾದ್ನ ವನಮಾರಪಳ್ಳಿ ಚೆಕ್ ಪೋಸ್ಟ್, ಬೀದರ್ ತಾಲೂಕಿನ ದೇವದೇವ ವನದ ಬಳಿಯ ತೆಲಂಗಾಣ ಚೇಕ್ ಪೋಸ್ಟ್ನಲ್ಲಿ ಕಟ್ಟೆಚರ ವಹಿಸಲಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ, ಪೊಲೀಸರು, ಪುರಸಭೆ ನಗರಸಭೆ ಸಿಬ್ಬಂದಿಗಳು ಬೀದರ್, ತೆಲಂಗಾಣ, ಮಹಾರಾಷ್ಟ್ರ ಗಡಿಯಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಕೊವಿಡ್ ವಾಕ್ಸಿನ್ ಎರಡೂ ಡೋಸ್ ಪಡೆದವರಿಗಷ್ಟೇ ರಾಜ್ಯಕ್ಕೆ ಪ್ರವೇಶ ನೀಡುತ್ತಿದ್ದಾರೆ. ನಿನ್ನೆಯಿಂದ ಗಡಿಯಲ್ಲಿ ಪೊಲೀಸ್ ಸಿಬ್ಬಂದಿಗಳು, ಆರೋಗ್ಯ ಸಿಬ್ಬಂದಿಗಳು ಬೀಡು ಬಿಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ 23 ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ನಿಗಾ ವಹಿಸಲು ಜಿಲ್ಲಾಡಳಿತ ಸೂಚನೆ ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ ಹಿನ್ನೆಲೆ ಕರ್ನಾಟಕ, ಮಹಾರಾಷ್ಟ್ರ ಗಡಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಬೆಳಗಾವಿಯ ಎಲ್ಲಾ ಶಿಕ್ಷಣ ಸಂಸ್ಥೆಗಳು, ವೈದ್ಯಕೀಯ ಕಾಲೇಜುಗಳಲ್ಲಿ ತೀವ್ರ ನಿಗಾ ಇಡಲಾಗಿದೆ. ಕಳೆದ 16 ದಿನಗಳಲ್ಲಿ ಹೊರರಾಜ್ಯ, ಜಿಲ್ಲೆಗಳಿಂದ ಬಂದವರ ಮೇಲೆ ಕಟ್ಟೆಚ್ಚರ ವಹಿಸಲಾಗಿದೆ. ಬೆಳಗಾವಿ ಜಿಲ್ಲೆಯ 23 ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ನಿಗಾ ವಹಿಸಲು ಜಿಲ್ಲಾಡಳಿತ ಸೂಚನೆ ನೀಡಿದೆ. ಈಗಾಗಲೇ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ 200 ಜನರ ಥ್ರೋಟ್ ಸ್ವ್ಯಾಬ್ ಸಂಗ್ರಹ ಮಾಡಲಾಗಿದೆ. ಕೇರಳ, ಮಹಾರಾಷ್ಟ್ರ ಸೇರಿ ಹೊರ ರಾಜ್ಯಗಳಿಂದ ಬೆಳಗಾವಿಗೆ ಒಟ್ಟು 293 ವಿದ್ಯಾರ್ಥಿಗಳು ಬೆಳಗಾವಿಯ ವಿವಿಧ ಶಿಕ್ಷಣ ಸಂಸ್ಥೆಗಳು, ಹಾಸ್ಟೇಲ್‌ಗೆ ಆಗಮಿಸಿದ್ದಾರೆ. ಶಾಲಾ ಕಾಲೇಜುಗಳಲ್ಲಿ ಟೆಸ್ಟ್ ನಡೆಸಲು ಆರೋಗ್ಯ ಇಲಾಖೆ ಸಿಬ್ಬಂದಿ ನಿರ್ಧಾರ ಮಾಡಿದ್ದಾರೆ.
ಇದನ್ನೂ ಓದಿ: ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ; ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ನಲ್ಲಿ ಹೈ ಅಲರ್ಟ್
Published On - 10:57 am, Sun, 28 November 21