ವಿದೇಶದಿಂದ ಬಂದು ನಾಪತ್ತೆಯಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿ ಬೆಂಗಳೂರಿನಲ್ಲಿ ಪತ್ತೆ

ವರದಿ ಬರುವ ಮುನ್ನವೇ ಏರ್​ಪೋರ್ಟ್​ನಿಂದ ಇಬ್ಬರೂ ಕಾಲ್ಕಿತ್ತಿದ್ದರು. ಇದೀಗ ಅವರಿಬ್ಬರ ಪತ್ತೆಯಾಗಿದೆ. ಇಬ್ಬರನ್ನೂ ಬೌರಿಂಗ್ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ.

ವಿದೇಶದಿಂದ ಬಂದು ನಾಪತ್ತೆಯಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿ ಬೆಂಗಳೂರಿನಲ್ಲಿ ಪತ್ತೆ
ಪ್ರಾತಿನಿಧಿಕ ಚಿತ್ರ
Edited By:

Updated on: Dec 08, 2021 | 3:24 PM

ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬಂದಿದ್ದ ಸೋಂಕಿತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಹೊಸ ಬೆಳವಣಿಗೆಯೊಂದು ನಡೆದಿದೆ. ವಿಮಾನ ನಿಲ್ದಾಣದಲ್ಲಿ ನಾಪತ್ತೆಯಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿ ಬೆಂಗಳೂರಲ್ಲಿ ಪತ್ತೆ ಆಗಿದ್ದಾನೆ. ಸೋಂಕಿತನನ್ನು ಪತ್ತೆಹಚ್ಚಿದ ಅಧಿಕಾರಿಗಳು ಐಸೋಲೇಷನ್​ ಮಾಡಿದ್ದಾರೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಇಬ್ಬರನ್ನೂ ಐಸೋಲೇಟ್ ಮಾಡಲಾಗಿದೆ.

ಇಂದು ಬೆಳಗ್ಗೆ ಫ್ರಾಂಕ್​ಫರ್ಟ್​ನಿಂದ ಬಂದಿದ್ದ ಇಬ್ಬರಿಗೆ ಕೊರೊನಾ ಪಾಸಿಟಿವ್​ ವರದಿ ಬಂದಿತ್ತು. ಆದರೆ ವರದಿ ಬರುವ ಮುನ್ನವೇ ಏರ್​ಪೋರ್ಟ್​ನಿಂದ ಇಬ್ಬರೂ ಕಾಲ್ಕಿತ್ತಿದ್ದರು. ಇದೀಗ ಅವರಿಬ್ಬರ ಪತ್ತೆಯಾಗಿದೆ. ಇಬ್ಬರನ್ನೂ ಬೌರಿಂಗ್ ಆಸ್ಪತ್ರೆಯಲ್ಲಿ ಐಸೋಲೇಟ್ ಮಾಡಲಾಗಿದೆ.

ಬೆಳಗಾವಿ: ಸೇತುವೆಯ ಡಿವೈಡರ್‌ಗೆ ಬೈಕ್ ಡಿಕ್ಕಿ, ಕಾನ್ಸ್‌ಟೇಬಲ್ ಸಾವು
ಸೇತುವೆಯ ಡಿವೈಡರ್‌ಗೆ ಬೈಕ್ ಡಿಕ್ಕಿ, ಕಾನ್ಸ್‌ಟೇಬಲ್ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದ ಬಳಿ ಸಂಭವಿಸಿದೆ. ಕರ್ತವ್ಯ ಮುಗಿಸಿ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಹುದಲಿ ಗ್ರಾಮದ ಆನಂದ ಸುಲಧಾಳ (24) ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಅಂಕಲಗಿ ಠಾಣಾ ಪೊಲೀಸರು ಭೇಟಿ ನೀಡಿ, ಪರೀಶಿಲನೆ ನಡೆಸಿದ್ದಾರೆ.

ವಿಜಯಪುರ: ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಗೆ ಬೆದರಿಸಿ ದರೋಡೆ
ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಗೆ ಬೆದರಿಸಿ ದರೋಡೆ ಮಾಡಿದ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ. ಶ್ರೀದೇವಿ ಜಮಂಖಡಿ ಎಂಬ ಮಹಿಳೆಗೆ ಹೆದರಿಸಿ ದರೋಡೆ ಮಾಡಲಾಗಿದೆ. 45 ಗ್ರಾಂ ಚಿನ್ನಾಭರಣ, ₹40 ಸಾವಿರ, ಮೊಬೈಲ್ ದಡೋಡೆ ಮಾಡಲಾಗಿದೆ. ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Crime Update: ರೌಡಿಶೀಟರ್ ಕೊಲೆ ಪ್ರಕರಣದ 9 ಆರೋಪಿಗಳ ಬಂಧನ, ಹೆತ್ತವರ ಕಣ್ಣೆದುರು ಹಳ್ಳದ ನೀರಿನಲ್ಲಿ ಕೊಚ್ಚಿ ಹೋದ ಮಗ

ಇದನ್ನೂ ಓದಿ: ಮುಂದಿನ ಕೊರೊನಾ ರೂಪಾಂತರಿ ವೈರಸ್ ಹೆಚ್ಚು ಮಾರಕ, ಸಾಂಕ್ರಾಮಿಕವಾಗಿರಲಿದೆ; ಆಕ್ಸ್​ಫರ್ಡ್​ ವಿಜ್ಞಾನಿ ಎಚ್ಚರಿಕೆ