AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಆದರೂ ಎಚ್ಚರ ತಪ್ಪುವಂತಿಲ್ಲ; ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸೂಚನೆಗಳಿವು

ಸದ್ಯ ನಿತ್ಯ 500ರ ಆಸುಪಾಸು ಹೊಸ ಪಾಸಿಟಿವ್ ಕೇಸ್ ಪತ್ತೆ ಆಗುತ್ತಿದೆ. ಮುಂದಿನ 4 ತಿಂಗಳು ಹೆಚ್ಚು ನಿಗಾ ವಹಿಸುವಂತೆ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ದಸರಾ, ದೀಪಾವಳಿ, ಕ್ರಿಸ್ ಮಸ್ ಮತ್ತು ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಜಾಗ್ರತೆ ಅಗತ್ಯವಾಗಿದೆ.

ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಆದರೂ ಎಚ್ಚರ ತಪ್ಪುವಂತಿಲ್ಲ; ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸೂಚನೆಗಳಿವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Oct 18, 2021 | 8:42 PM

ಬೆಂಗಳೂರು: ಕೊವಿಡ್ 19 ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಮುಂದಿನ ನಾಲ್ಕು ತಿಂಗಳು ಭಾರಿ ಎಚ್ಚರಿಕೆಯಿಂದ ಇರಬೇಕಾದ ಅನಿವಾರ್ಯತೆ ಇದೆ. ಮುಂದಿನ 4 ತಿಂಗಳು ಹೆಚ್ಚು ನಿಗಾ ವಹಿಸುವ ಅಗತ್ಯ ಇದೆ ಎಂದು ಸರ್ಕಾರಕ್ಕೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳು ಹಾಗೂ ಜನವರಿ ತಿಂಗಳು ತುಂಬಾ ಅಪಾಯ ಎಂದು ಸಮಿತಿ ತಿಳಿಸಿದೆ. ಸಾಲು ಸಾಲು ಹಬ್ಬಗಳು ಇರುವ ಹಿನ್ನೆಲೆ ನಿಗಾವಹಿಸಬೇಕು ಎಂದು ಸರ್ಕಾರಕ್ಕೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ.

ಕೊರೊನಾ ಸೋಂಕು ಇಳಿಕೆಯಾಯ್ತು ಎಂದು ಅಜಾಗರೂಕರಾಗಿ ವರ್ತಿಸಿದರೆ ಅಪಾಯ ಎದುರಾಗಬಹುದು. ಸದ್ಯ ನಿತ್ಯ 500ರ ಆಸುಪಾಸು ಹೊಸ ಪಾಸಿಟಿವ್ ಕೇಸ್ ಪತ್ತೆ ಆಗುತ್ತಿದೆ. ಮುಂದಿನ 4 ತಿಂಗಳು ಹೆಚ್ಚು ನಿಗಾ ವಹಿಸುವಂತೆ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ. ದಸರಾ, ದೀಪಾವಳಿ, ಕ್ರಿಸ್ ಮಸ್ ಮತ್ತು ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಜಾಗ್ರತೆ ಅಗತ್ಯವಾಗಿದೆ.

ಪಟಾಕಿ ಖರೀದಿಗೆ ಅಕ್ಕಪಕ್ಕದ ಜಿಲ್ಲೆ, ರಾಜ್ಯಗಳಿಗೆ ತೆರಳುವವರ ಸಂಖ್ಯೆ ಹೆಚ್ಚಾಗಲಿದೆ. ಹೊಸ ವರ್ಷ ಆಚರಣೆಗೆ ಮೋಜು, ಮಸ್ತಿ ಮಾಡುವವರ ಸಂಖ್ಯೆ ಅಧಿಕವಾಗಿ ಇರಲಿದೆ. ಸದ್ಯ ರಾಜ್ಯದಲ್ಲಿ 70 ಸಾವಿರ ಕೊರೊನಾ ಟೆಸ್ಟ್ ಮಾತ್ರ ನಡೆಸಲಾಗುತ್ತಿದೆ. ಅದನ್ನು 1.20 ಲಕ್ಷ ಟೆಸ್ಟಿಂಗ್​ಗೆ ಏರಿಸಬೇಕು ಎಂದು ಸಲಹೆ ನೀಡಲಾಗಿದೆ. ಮೂರನೇ ಅಲೆ ಸಮೀಪಿಸದಂತೆ ಏನು ಕ್ರಮ ವಹಿಸಬೇಕು ಎಂದು ಸಲಹಾ ಸಮಿತಿ ತಿಳಿಸಿದೆ.

3ನೇ ಅಲೆ ಸಮೀಪಿಸದಂತೆ ಕೈಗೊಳ್ಳಲು ನೀಡಿರುವ ಸೂಚನೆ: – ಒಬ್ಬ‌ ಸೋಂಕಿತನಿಗೆ 30 ಜನ‌ ಸಂಪರ್ಕಿತರನ್ನ ಪತ್ತೆ ಮಾಡಬೇಕು – ರೇಂಡಮ್​ನಲ್ಲಿ ನೆಗೆಟಿವ್ ಬಂದರೆ, ಕಡ್ಡಾಯವಾಗಿ ಆರ್​ಟಿಪಿಸಿಆರ್ ಟೆಸ್ಟ್ ಮಾಡಬೇಕು – ಒಟ್ಟು ಟೆಸ್ಟ್​ಗಳಲ್ಲಿ ಶೇ.30 ರಷ್ಟು ಮಾತ್ರ ಆ್ಯಂಟಿಜನ್ ಟೆಸ್ಟ್ ಮಾಡಬೇಕು – ಸ್ಯಾಂಪಲ್ ಕಲೆಕ್ಟ್ ಮಾಡಿದ 24 ಗಂಟೆಯೊಳಗೆ ಫಲಿತಾಂಶ ನೀಡಬೇಕು – ತಾಲೂಕುಗಳಲ್ಲಿ ಶೇ.2ಕ್ಕಿಂತ ಟೆಸ್ಟಿಂಗ್ ರೇಟ್ ಬಂದರೆ, ಒಬ್ಬರಿಗೆ 5 ಜನರ ಪರೀಕ್ಷೆ ಮಾಡಬೇಕು ಎಂದು ಹೇಳಲಾಗಿದೆ.

ಇದನ್ನೂ ಓದಿ: Covid 19 Guidelines: ಕೊವಿಡ್ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ; ಈಜುಕೊಳ ಕಾರ್ಯಾಚರಣೆಗೆ ಅವಕಾಶ

ಇದನ್ನೂ ಓದಿ: School Reopen: ಅಕ್ಟೋಬರ್ 25ರಿಂದ 1 ರಿಂದ 5ನೇ ತರಗತಿ ಶಾಲೆ ಆರಂಭ

Published On - 8:41 pm, Mon, 18 October 21

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ